AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರಿಗೆ ಶೇಕಡಾ 5ರಷ್ಟು ಸರ್ಕಾರಿ ಗುತ್ತಿಗೆ ಮತ್ತು ಶೇಕಡಾ 15ರಷ್ಟು ವಸತಿ ಯೋಜನೆ ಮೀಸಲಾತಿ ಕುರಿತು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ. ಮುಕಡಪ್ಪ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಆಧಾರಿತ ಮೀಸಲಾತಿಯ ಬದಲು ಎಲ್ಲಾ ಹಿಂದುಳಿದ ವರ್ಗಗಳನ್ನು ಒಟ್ಟಾಗಿ ಪರಿಗಣಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಸರ್ಕಾರವು ಮತ್ತೆ ಜಾತಿ ಗಣತಿ ನಡೆಸಲು ತೀರ್ಮಾನಿಸಿರುವುದನ್ನು ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮೇಲಿನ ನಿಲುವಿನ ಕುರಿತು ಅವರು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಚಾರ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ನಾಯಕರ ಆಕ್ರೋಶ
ವಿಧಾನಸೌಧ
ವಿವೇಕ ಬಿರಾದಾರ
|

Updated on:Jun 22, 2025 | 4:46 PM

Share

ಬೆಂಗಳೂರು, ಜೂನ್​ 22: ರಾಜ್ಯ ಕಾಂಗ್ರೆಸ್​ ಸರ್ಕಾರವು (Congress Government) ಅಲ್ಪಸಂಖ್ಯಾತರಿಗರೆ (Minority) ಸರ್ಕಾರಿ ಗುತ್ತಿಗಳಲ್ಲಿ ಶೇ5 ರಷ್ಟು ಮೀಸಲಾತಿ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೊತೆಗೆ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದ ವಿಚಾರವಾಗಿ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಕೆ ಮುಕಡಪ್ಪ ಮಾತನಾಡಿ, ಎಲ್ಲ ಹಿಂದುಳಿದವರನ್ನು ಒಂದು ಮಾಡಬೇಕು. ಈಗ ಜಾತಿ ಮೇಲೆ ಗುರುತಿಸುತ್ತಾರೆ. ಸರ್ಕಾರ ಒಂದೇ ಜಾತಿಗೆ ಸೀಮಿತ ಆಗಬಾರದು. ತಾಲೂಕಿಗೊಂದು ಸಭೆ ಮಾಡುತ್ತೇವೆ. ನಾವು ಸುಮ್ಮನೆ ಬಿಡಲ್ಲ, ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಬೆಂಗಳೂರಿಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂತರಾಜು ವರದಿಯಲ್ಲಿ ಬಹಳ ತಪ್ಪಿದೆ, ಮನೆ ಮನೆಗೆ ಹೋಗಿ ಸರ್ವೆ ಮಾಡಿಲ್ಲ. 1952ರ ಕಾಕಾ ಕಾಲೇಕರ್ ರಿಪೋರ್ಟ್ ಮಾಡಲು ಬಿಡಲಿಲ್ಲ. ಡಾ. ಬಿ. ಆರ್ ಅಂಬೇಡ್ಕರ್ ಅವರು ಎಲ್ಲ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದಾರೆ. ಹಿಂದೂ ಬಿಲ್ ಕೋಡ್, ಪರ್ಮನೆಂಟ್ ಬ್ಲಾಕ್ ವರ್ಡ್ ಕಮಿಷನ್ ಆಗಿಲ್ಲ ಎಂದು ಡಾ. ಬಿ.ಆರ್​ ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ಈ ವರದಿಯನ್ನು ನೋಡಲಿಲ್ಲ. ಕಾಂಗ್ರೆಸ್​ನವರು ಹಿಂದುಳಿದ ವರ್ಗದವರನ್ನು ಯಾಕೆ ಪ್ರಧಾನಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಒಕ್ಕಲಿಗ, ಲಿಂಗಾಯತ ಸಮುದಾಯಲ್ಲೂ ಬಡವರಿದ್ದಾರೆ ಅದರ ಜಾತಿ ಜನಗಣತಿ ಆಗಬೇಕು. ಮಹಾತ್ಮಾ ಗಾಂಧಿಯವರನ್ನು ಬಿ.ಆರ್​ ಅಂಬೇಡ್ಕರ್ ಅವರು ಒಪ್ಪಿರಲಿಲ್ಲ. ಕಾಂಗ್ರೆಸ್​ಗೆ ಓಟು ಹಾಕಬೇಡಿ ಎಂದು ಬಿ.ಆರ್ ಅಂಬೇಡ್ಕರ್​ ಅವರು ಹೇಳಿದ್ದರು. ದಲಿತ ಸಮುದಾಯರವನ್ನು ಸಿಎಂ ಆಗಿ ರಾಹುಲ್ ಗಾಂಧಿ ಘೋಷಣೆ ಮಾಡಲಿ. ಅವರು ಮೊದಲಿನಿಂದಲೂ ಹಿಂದುಳಿದ ವರ್ಗದ ಪರ ಇಲ್ಲ. 36 ವರ್ಷ ಕಾಂಗ್ರೆಸ್​ ಅಧಿಕಾರದಲ್ಲಿದ್ದರೂ ಏಕೆ ಜಾತಿ ಜನಗಣತಿ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
ಮನೆಗಳ ಹಂಚಿಕೆಗೆ ಲಂಚ: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ರಹಸ್ಯ
Image
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
Image
ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ!
Image
ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿ

ಇದನ್ನೂ ಓದಿ: ಮೀಸಲಾತಿ ಬಗ್ಗೆ ಕೇಂದ್ರ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಜಮೀರ್ ಹೇಳಿಕೆಗೆ ಜೋಶಿ ತಿರುಗೇಟು

ದಲಿತರಿಗಿಂತ, ಹಿಂದುಳಿದ ವರ್ಗದವರ ಮನೆಯಲ್ಲೇ ಡಾ. ಬಿಆರ್​ ಅಂಬೇಡ್ಕರ್ ಅವರ ಫೋಟೊ ಇರಬೇಕು. ಬಿ. ಆರ್​ ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರ ಪ್ರಧಾನಿ ಮೋದಿ, ಬಿಜೆಪಿ ನಡೆಯುತ್ತಿದೆ. ಜಾತಿ ಜನಗಣತಿ ಆಗಲೇಬೇಕು. ಬೆಂಗಳೂರಿನಲ್ಲಿ ಎಲ್ಲ ಸಮುದಾಯದವರು ಮೇಯರ್ ಆಗುತ್ತಿದ್ದಾರೆ. ಇದಕ್ಕೆಲ್ಲ ಮೀಸಲಾತಿ ಕಾರಣ. ಹಿಂದೂಗಳೆಲ್ಲ ಒಂದಾಗಬೇಕು. ಅಲ್ಪಸಂಖ್ಯಾತ ಅಂತ ಮುಸಲ್ಮಾನರಿಗೆ ಎಲ್ಲ ಕೊಡುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Sun, 22 June 25

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ