ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?: ಸತ್ಯ ಬಿಚ್ಚಿಟ್ಟ ಬಸವರಾಜ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಆಗಸ್ಟ್ 14ರಂದು ರಾಜೀನಾಮೆ ನೀಡಬೇಕಿದ್ದ ಬಸವರಾಜ ಹೊರಟ್ಟಿ ಅವರು, ಇದ್ದಕ್ಕಿದ್ದಂತೆ ಇಂದೇ (ಆಗಸ್ಟ್ 7) ರಾಜೀನಾಮೆ ನೀಡಲು ಕಾರಣವೇನು ಎಂಬ ಕುರಿತು ಮಾಧ್ಯಮಗಳ ಮುಂದೆ ಸತ್ಯ ಬಿಚ್ಚಿಟ್ಟಿದ್ದಾರೆ. ಸಿಎಂ ಮತ್ತುಕೆಪಿಸಿಸಿ ಅಧ್ಯಕ್ಷರು ಇವತ್ತೇ ರಾಜೀನಾಮೆ‌ ಕೊಡಿ ಎಂದ ಕಾರಣ ಕೊಟ್ಟಿದ್ದೇನೆ. ಯಾವಾಗ ಕೊಟ್ರು ಒಂದೇ, ಹಾಗಾಗಿ ಇಂದೇ ರಾಜೀನಾಮೆ ಕೊಟ್ಟೆ ಎಂದವರು ತಿಳಿಸಿದ್ದಾರೆ.

ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?: ಸತ್ಯ ಬಿಚ್ಚಿಟ್ಟ ಬಸವರಾಜ ಹೊರಟ್ಟಿ
ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?
Image Credit source: Tv9 Kannada
Edited By:

Updated on: Aug 07, 2026 | 5:33 PM

ಮುಖ್ಯಾಂಶಗಳು

  • ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
  • ಆ. 14ರಂದು ಹುದ್ದೆ ತೊರೆಯುತ್ತೇನೆಂದಿದ್ದ ಹೊರಟ್ಟಿ
  • ಇಂದೇ ರಾಜೀನಾಮೆ ನೀಡಿದ್ದೇಕೆ?: ಕಾರಣ ಇಲ್ಲಿದೆ

ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ವಿಧಾನ ಪರಿಷತ್​​ಗೆ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಹೆಸರನ್ನು ಎಐಸಿಸಿ ಘೋಷಣೆ ಮಾಡಿದ ಬಳಿಕ ನಡೆದ ರಾಜಕೀಯ ಬೆಳವಣಿಗಳ ನಡುವೆ, ಸಭಾಪತಿ ಸ್ಥಾನಕ್ಕೆ ಆಗಸ್ಟ್​​ 14ರಂದು ರಾಜೀನಾಮೆ ನೀಡೋದಾಗಿ ಬಸವರಾಜ ಹೊರಟ್ಟಿ ಘೋಷಿಸಿದ್ದರು. ಆದರೆ ಅಚ್ಚರಿಯ ಬೆಳವಣಿಗೆಗಳ ನಡುವೆ ಇಂದೇ ಅವರು ತಮ್ಮ ಹುದ್ದೆ ತೊರೆದಿದ್ದಾರೆ. ಸರ್ಕಾರದಿಂದ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಗಳ ನಡುವೆಯೂ, ಸ್ವ ಇಚ್ಛೆಯಿಂದ ಹುದ್ದೆ ತೊರೆಯುತ್ತಿರೋದಾಗಿ ಅವರು ತಿಳಿಸಿದ್ದಾರೆ.

ಇವತ್ತೇ ಹೊರಟ್ಟಿ ರಾಜೀನಾಮೆ ಯಾಕೆ?

Basavaraj Horatti Resigns As Council Chairman | ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ಸಿಎಂ ಮತ್ತುಕೆಪಿಸಿಸಿ ಅಧ್ಯಕ್ಷರು ಇವತ್ತೇ ರಾಜೀನಾಮೆ‌ ಕೊಡಿ ಎಂದ ಕಾರಣ ಕೊಟ್ಟಿದ್ದೇನೆ. ಯಾವಾಗ ಕೊಟ್ರು ಒಂದೇ, ಹಾಗಾಗಿ ಇಂದೇ ರಾಜೀನಾಮೆ ಕೊಟ್ಟೆ. ಪರಿಷತ್​ ಸಭಾಪತಿಯಾಗಿ ಏನು ಕೆಲಸ ಮಾಡಬೇಕೋ ಮಾಡಿದ್ದೇನೆ. ರಾಜೀನಾಮೆ ಕೊಡಲಿಲ್ಲ ಅಂದ್ರೆ ಅವಿಶ್ವಾಸ ನಿರ್ಣಯ ಮಂಡಿಸುತ್ತಿದ್ದರು. ಹಂಗಾಮಿ ಸಭಾಪತಿ ಮಾಡ್ತಾರೋ ಬಿಡ್ತಾರೋ ಅವರಿಗೆ ಬಿಟ್ಟಿದ್ದು ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸಿಗರ ಮನವೊಲಿಕೆಗೆ ಮಣಿದ ಬಸವರಾಜ ಹೊರಟ್ಟಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಏನು ಮಾಡ್ತೀಯಾ ನೋಡಪ್ಪ ಎಂದು ಅವರು ಹೇಳಿದ್ದರು. ವಿಧಾನಪರಿಷತ್​ನಲ್ಲಿ ನಾನು 10-12 ಸಭಾಪತಿಗಳನ್ನು ನೋಡಿದ್ದೇನೆ. ನಾನೂ ಸಭಾಪತಿ ಆಗಿ ಎಲ್ಲಾ ಕಾರ್ಯ ಕಲಾಪಗಳನ್ನು ಮಾಡಿದ್ದೇನೆ. ಸದನದಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದೇನೆ. ರಾತ್ರಿ 2 ಗಂಟೆಯವರೆಗೂ ಸದನ ನಡೆಸಿರುವ ಉದಾಹರಣೆ ಇದೆ ಎಂದವರು ಹೇಳಿದ್ದಾರೆ. ಅಧಿಕಾರ ಪೂರ್ಣಗೊಳ್ಳದೆ ಮಧ್ಯದಲ್ಲಿಯೇ ಸ್ಥಾನ ಬಿಡುವಾಗ ನೋವು ಸಹಜ. ಆಕಸ್ಮಿಕ ಸಿನಿಮಾ ನೋಡಿದ್ದೆ, ಅದೇ ರೀತಿ ಈಗ ಆಗಿದೆ ಎಂದವರು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:16 pm, Fri, 7 August 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us