ResignSudhakar: ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟರ್​ನಲ್ಲಿ ಟ್ರೆಂಡ್

Karnataka Oxygen Shortage: ಈ ಕುರಿತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ, ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ResignSudhakar: ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟರ್​ನಲ್ಲಿ ಟ್ರೆಂಡ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Follow us
guruganesh bhat
|

Updated on:May 03, 2021 | 8:08 PM

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ 24 ಗಂಟೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಮೃತಪಟ್ಟ ಘಟನೆಯನ್ನು ನೆಟ್ಟಿಗರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. #ResignSudhakar  ಟ್ರೆಂಟ್ ಆಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಅವರ ರಾಜೀನಾಮೆ ನೀಡುವಂತೆ ಆಗ್ರಹಿಸಿ 15 ಸಾವಿರಕ್ಕೂ ಹೆಚ್ಚು ಟ್ವೀಟ್ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಮಧ್ಯರಾತ್ರಿ ಮನಕಲಕುವ ದೃಶ್ಯಗಳು ಕಂಡುಬಂದಿತ್ತು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಸಂಜೆ ಆಕ್ಸಿಜನ್ ಖಾಲಿ ಆಗಿದ್ರಿಂದ 24 ಗಂಟೆಯಲ್ಲಿ 22 ಕೊವಿಡ್, ನಾನ್ ಕೊವಿಡ್ ರೋಗಿಗಳು ಆಕ್ಸಿಜನ್ ಸಿಗದೇ ಮೃತಪಟ್ಟಿದ್ದರು. ಈ ಕುರಿತು ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 350 ಆಕ್ಸಿಜನ್ ಸಿಲಿಂಡರ್​ಗಳಿವೆ. 6KL ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ಕೂಡ ಇದೆ. ಸುಮಾರು 120 ರೋಗಿಗಳಿಗೆ ಇದ್ರಿಂದ ಆಕ್ಸಿಜನ್ ಪೂರೈಕೆ ಮಾಡ್ತಿದ್ದಾರೆ. ಮೈಸೂರಿನ ಸದರನ್ ಮತ್ತು ಪರ್ಕಿ ಏಜೆನ್ಸಿಗಳಿಂದ ಪ್ರತಿನಿತ್ಯ 350 ಆಕ್ಸಿಜನ್ ಸಿಲಿಂಡರ್ ಪೂರೈಕೆಯಾಗ್ತಿತ್ತು. ಆಕ್ಸಿಜನ್ ಪ್ಲಾಂಟ್ಗೆ ಬಳ್ಳಾರಿಯಿಂದ ಟ್ಯಾಂಕರ್ ಮೂಲಕ ಆಕ್ಸಿಜನ್ ಪೂರೈಕೆಯಾಗುತ್ತಿತ್ತು. ಕಳೆದೆರಡು ದಿನಗಳಿಂದ ಕೇವಲ 30 ಆಕ್ಸಿಜನ್ ಸಿಲಿಂಡರ್ ಪೂರೈಕೆಯಾಗಿವೆ. ಕಳೆದ ಭಾನುವಾರದಿಂದ ಬಳ್ಳಾರಿಯಿಂದ ಬರ್ತಿದ್ದ ಆಕ್ಸಿಜನ್ ಟ್ಯಾಂಕರ್ ಕೂಡ ಬಂದಿಲ್ಲ. ಹೀಗಾಗಿ ಭಾನುವಾರ 9 ಗಂಟೆಯಿಂದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿತ್ತು.

ಈ ಕುರಿತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ, ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು ಮೂವರಲ್ಲ, ಮೂವತ್ನಾಲ್ಕು: ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಗಂಭೀರ ಆರೋಪ

(ResignSudhakar hashtag trending in twitter after 24 people died in Chamarajanagar lack of medical oxygen)

Published On - 6:40 pm, Mon, 3 May 21