AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇಂದಿನಿಂದ ಪಿಯು ಕಾಲೇಜುಗಳು ಆರಂಭ! ಹಿಜಾಬ್ ಧರಿಸಿ ಬಂದರೆ ತರಗತಿಗೆ ಇಲ್ಲ ಅವಕಾಶ

ಕೊವಿಡ್ ಕಾರಣದಿಂದ 2 ವರ್ಷದಿಂದ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಈ ವರ್ಷ ಶಿಕ್ಷಣ ಇಲಾಖೆ ಪರಿಣಾಮಕಾರಿ ಶಿಕ್ಷಣ ನೀಡುವ ಗುರಿ ಹೊಂದಿದೆ.

ಕರ್ನಾಟಕದಲ್ಲಿ ಇಂದಿನಿಂದ ಪಿಯು ಕಾಲೇಜುಗಳು ಆರಂಭ! ಹಿಜಾಬ್ ಧರಿಸಿ ಬಂದರೆ ತರಗತಿಗೆ ಇಲ್ಲ ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jun 09, 2022 | 9:22 AM

Share

ಬೆಂಗಳೂರು: ಹಿಜಾಬ್ (Hijab) ವಿವಾದದ ನಡುವೆ ರಾಜ್ಯಾದ್ಯಂತ ಇಂದಿನಿಂದ (ಜೂನ್ 09) ಪಿಯು ಕಾಲೇಜುಗಳು (PU College) ಆರಂಭವಾಗುತ್ತಿದ್ದು, 2022-23ನೇ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಕೊವಿಡ್ ಕಾರಣದಿಂದ 2 ವರ್ಷದಿಂದ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಈ ವರ್ಷ ಶಿಕ್ಷಣ ಇಲಾಖೆ ಪರಿಣಾಮಕಾರಿ ಶಿಕ್ಷಣ ನೀಡುವ ಗುರಿ ಹೊಂದಿದೆ. ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು ಈ ಬಾರಿ ದಾಖಲೆ ಪ್ರಮಾಣದಲ್ಲಿ ಪಾಸ್ ಆಗಿದ್ದು, ಸದ್ಯ ಪಿಯು ತರಗತಿ ಆರಂಭಕ್ಕೆ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪಿಯು ಕಾಲೇಜುಗಳಿಗೆ 3 ಸಾವಿರಕ್ಕೂ ಹೆಚ್ಚಿನ ಅತಿಥಿ ಉಪನ್ಯಾಸಕರ ಅಗತ್ಯವಿದ್ದು, ಈ ಬಗ್ಗೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ಮೂಲಸೌಕರ್ಯ ಸಹಿತ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಇನ್ನು ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ಹಿಜಾಬ್ ಧರಿಸಿ ಬಂದರೆ ತರಗತಿಗೆ ಅನುಮತಿ ಇರಲ್ಲ ಎಂದು ಟಿವಿ9ಗೆ ಪಿಯು ಬೋರ್ಡ್ ನಿರ್ದೇಶಕ ಆರ್.ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: EV Charging Stations: ಕರ್ನಾಟಕದಲ್ಲಿ ಶೀಘ್ರ ಒಂದು ಸಾವಿರ ಚಾರ್ಜಿಂಗ್ ಪಾಯಿಂಟ್ ಆರಂಭ; ಇಂಧನ ಸಚಿವ ಸುನಿಲ್ ಕುಮಾರ್

ಇದನ್ನೂ ಓದಿ
Image
EV Charging Stations: ಕರ್ನಾಟಕದಲ್ಲಿ ಶೀಘ್ರ ಒಂದು ಸಾವಿರ ಚಾರ್ಜಿಂಗ್ ಪಾಯಿಂಟ್ ಆರಂಭ; ಇಂಧನ ಸಚಿವ ಸುನಿಲ್ ಕುಮಾರ್
Image
ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ: ಆರಗ ಜ್ಞಾನೇಂದ್ರ
Image
UPI Linking With Credit Card: ಯುಪಿಐ ಜತೆಗೆ ಕ್ರೆಡಿಟ್ ಕಾರ್ಡ್​ ಜೋಡಣೆ ಬಗ್ಗೆ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದೇನು?
Image
Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ

ಫಲಿತಾಂಶ ಯಾವಾಗ?: ಜೂನ್​​ 3 ಅಥವಾ 4ನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಸಂಬಂಧ ಪಿಯು ಬೋರ್ಡ್ ತಾತ್ಕಾಲಿಕ ದಿನಾಂಕವನ್ನು ಸಿದ್ದಪಡಿಸಿದೆ. ಮೂರನೇ ವಾರವಾದ್ರೆ ಜೂ.24ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಜೂನ್ ಕೊನೇ ವಾರವಾದರೆ ಜೂ.28ಕ್ಕೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

SSLC ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ಬರಲಿದೆ. ವಿದ್ಯಾರ್ಥಿಗಳ ಮೊಬೈಲ್ ಗೆ ಮೆಸೇಜ್ ಮೂಲಕ ಫಲಿತಾಂಶ ರವಾನೆ ಮಾಡಲಾಗುತ್ತದೆ. ಏ.22 ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಸದ್ಯ ಮೌಲ್ಯಮಾಪನ ಕಾರ್ಯ ಅರ್ಧದಷ್ಟು ಮುಗಿದಿದೆ. ಒಟ್ಟು 6,84,255 ವಿದ್ಯಾರ್ಥಿಗಳು ಈ ಬಾರೀ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Wed, 8 June 22