AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನೇರಿ ಶ್ರೀಗಳಿಗೆ ವಿಜಯಪುರಕ್ಕೆ ನಿರ್ಬಂಧ: ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಪ್ರಚೋದನಕಾರಿ ಹೇಳಿಕೆಗಳ ಕಾರಣಕ್ಕೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಕೀಳುಮಟ್ಟದ ಭಾಷೆ ಬಳಸಿದ್ದಕ್ಕೆ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದ್ದು, ಸ್ವಾಮೀಜಿಯಾಗಿ ಗಂಭೀರವಾಗಿರಬೇಕು ಎಂದು ಸಲಹೆ ನೀಡಿದೆ. ಇದು ವಾಕ್ ಸ್ವಾತಂತ್ರ್ಯ ವ್ಯಾಪ್ತಿಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದೆ.

ಕನ್ನೇರಿ ಶ್ರೀಗಳಿಗೆ ವಿಜಯಪುರಕ್ಕೆ ನಿರ್ಬಂಧ: ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಕಾಡಸಿದ್ದೇಶ್ವರ ಸ್ವಾಮೀಜಿಗೆ ಸುಪ್ರೀಂಕೋರ್ಟ್​ನಲ್ಲೂ ಹಿನ್ನಡೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Oct 29, 2025 | 1:57 PM

Share

ದೆಹಲಿ, ಅಕ್ಟೋಬರ್​ 29: ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಸ್ವಾಮೀಜಿ ಈ ರೀತಿಯ ಕೀಳುಮಟ್ಟದ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ನ್ಯಾ.ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ತರಾಟೆಗೆ ತೆಗದುಕೊಂಡಿದೆ. ಅಲ್ಲದೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನೇರಿಶ್ರೀಗಳ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಶ್ರೀಗಳಿಗೆ ಸಲಹೆ ಕೊಟ್ಟ ಸುಪ್ರೀಂಕೋರ್ಟ್​

ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ನ್ಯಾಯಪೀಠ ಪ್ರಶ್ನಿಸಿದ್ದು, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ್ಯ ವ್ಯಾಪ್ತಿಯಲ್ಲಿಲ್ಲ. ನೀವು ಮಾತನಾಡುವುದು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ ಎಂದು ಮಹಾರಾಷ್ಟ್ರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.

ಇದನ್ನೂ ಓದಿ: ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ 2 ತಿಂಗಳು ನಿರ್ಬಂಧ: ಜಿಲ್ಲಾಧಿಕಾರಿ ಡಾ.ಆನಂದ್​ ಆದೇಶ

ಪ್ರಕರಣ ಏನಾಗಿತ್ತು?

ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಲಿಲ್ಲ. ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಗಳು ಹೈಕೋರ್ಟ್​ನ ಕಲಬುರಗಿ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ತೀರಾ ಸಾಮಾನ್ಯ ಜನ ಕೂಡ ಸ್ವಾಮೀಜಿ ಬಳಸಿರುವ ಭಾಷೆ ಬಳಸಲ್ಲ ಎಂದಿದ್ದ ಕೋರ್ಟ್​, ಜಿಲ್ಲಾಡಳಿತದ ಆದೇಶವನ್ನ ಎತ್ತಿ ಹಿಡಿದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ