ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ

| Updated By: Ganapathi Sharma

Updated on: Jun 28, 2024 | 12:12 PM

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಾರಿಗೆ ಇಲಾಖೆ ಶುಭ ಸುದ್ದಿ ನೀಡಿದೆ. ಇವರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ನಿವೃತ್ತಿಯಾದ ನೌಕರರಿಗೆ ಈಗೇನು ವೇತನ ಹೆಚ್ಚಳ!? ಯಾವಾಗ ನಿವೃತ್ತಿಯಾದವರು ಇದಕ್ಕೆ ಅರ್ಹರು? ಹೆಚ್ಚಳವಾದ ವೇತನದ ಮೊತ್ತ ಯಾವಾಗ ಕೈಸೇರಲಿದೆ ಎಂಬ ಮಾಹಿತಿ ತಿಳಿಯಲು ಮುಂದೆ ಓದಿ.

ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ
ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ
Follow us on

ಬೆಂಗಳೂರು, ಜೂನ್ 28: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಾಲ್ಕು ನಿಗಮಗಳಿಗೆ ಬೇಕು 220 ಕೋಟಿ ರೂ.

ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

2023 ರ ಮಾರ್ಚ್ 01 ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಶುಭ ಸುದ್ದಿ; ಬರಲಿವೆ ಹೆಚ್ಚುವರಿ ಬಸ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:43 am, Fri, 28 June 24