AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ನೇಮಕ

ಒಡಿಶಾ ಮಾದರಿಯಲ್ಲಿ ಕರ್ನಾಟಕದಲ್ಲಿ ಗಣಿಬಾಧಿತ ಪ್ರದೇಶ ಅಭಿವೃದ್ಧಿ ಮಾಡುವ ತೀರ್ಮಾನ ಮಾಡಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆಯಿಂದ ಪರಿಸರಕ್ಕೆ ತೀವ್ರತರದ ಹಾನಿ ಉಂಟಾಗಿದೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ 2022 ರಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಬಿ ಸುದರ್ಶನ್ ರೆಡ್ಡಿ ನೇತೃತ್ವದ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮವನ್ನು ರಚಿಸಲಾಗಿದೆ. ಇದೀಗ ನಿಗಮದ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ನೇಮಕ
ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ನೇಮಕ
TV9 Web
| Updated By: Rakesh Nayak Manchi|

Updated on:Mar 02, 2024 | 5:56 PM

Share

ಬೆಂಗಳೂರು, ಮಾ.2: ಗಣಿಗಾರಿಕೆಯಿಂದ ಪರಿಸರಕ್ಕೆ ಉಂಟಾದ ಹಾನಿಯನ್ನು ಸರಿಪಡಿಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಬಿ ಸುದರ್ಶನ್ ರೆಡ್ಡಿ ನೇತೃತ್ವದಲ್ಲಿ ರಚಿಸಲಾದ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ (Karnataka Mining Environment Restoration Corporation) ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಅವರನ್ನು ನೇಮಕ ಮಾಡಲಾಗಿದೆ.

ಬಾಲಸುಬ್ರಮಣಿಯನ್ ಅವರು ಮಾರ್ಚ್ 1 ರಂದು ಮೇಲ್ವಿಚಾರಣಾ ಪ್ರಾಧಿಕಾರದ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು. ಅಕ್ರಮ ಗಣಿಗಾರಿಕೆ ಪೀಡಿತ ಪ್ರದೇಶಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಪೀಡಿತ ಪ್ರದೇಶಗಳಲ್ಲಿ ಪರಿಸರವನ್ನು ಪುನಃಸ್ಥಾಪಿಸಲು ಆಸಕ್ತಿ ಹೊಂದಿರುವ ನಾಗರಿಕರು ಬಾಲಸುಬ್ರಮಣಿಯನ್ ಅವರನ್ನು ದೂರವಾಣಿ ಸಂಖ್ಯೆ: 9845970092 ಅಥವಾ ಇಮೇಲ್: vbalu41@gmail.com ಗೆ ಸಂಪರ್ಕಿಸಬಹುದು ಅಥವಾ ಕೆಎಂಇಆರ್‌ಸಿ, 2 ನೇ ಮಹಡಿ, ಪಶ್ಚಿಮ ಭಾಗ, ಖನಿಜ ಭವನ, ರೇಸ್ ಕೋರ್ಸ್ ರಸ್ತೆ, ಬೆಂಗಳೂರು, 560001 ಈ ವಿಳಾಸಕ್ಕೆ ಪತ್ರ ಬರೆಯಬಹುದು ಎಂದು ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆ ಹೊರಡಿಸಿದ್ದಾರೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಬಾಲಸುಬ್ರಮಣಿಯನ್ ಅವರು ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಕ್ರಮಿಸಿರುವ ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಕ್ರಮಗಳನ್ನು ಶಿಫಾರಸು ಮಾಡಲು ಜಂಟಿ ಶಾಸಕಾಂಗ ಸಮಿತಿಯ ಸಲಹೆಗಾರರಾಗಿ ನೇಮಕಗೊಂಡಿದ್ದರು. ನಂತರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಅತಿಕ್ರಮಿಸಿದ ಸಾರ್ವಜನಿಕ ಭೂಮಿಯನ್ನು ಗುರುತಿಸಲು ಮತ್ತು ಒತ್ತುವರಿ ಮಾಡಿಕೊಂಡವರಿಂದ ಮರುಪಡೆಯಲು ರಚಿಸಲಾಗಿದ್ದ ಭೂ ಕಬಳಿಕೆ ನಿಗ್ರಹ ಕಾರ್ಯ ಪಡೆಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: ಮಂಡ್ಯ: ಮತ್ತೆ ಸದ್ದು ಮಾಡಲಿದೆಯಾ ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆ? ಟ್ರಯಲ್ ಬ್ಲಾಸ್ಟಿಂಗ್​ಗೆ ಸದ್ದಿಲ್ಲದೆ ಸರ್ಕಾರದ ತಯಾರಿ

ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ಒಡಿಶಾ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಗಣಿಬಾಧಿತ ಪ್ರದೇಶ ಅಭಿವೃದ್ಧಿ ಮಾಡಲು ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಸ್ಥಾಪಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಣಿಗಾರಿಕೆಯಿಂದ ತೀವ್ರತರದ ಹಾನಿ ಉಂಟಾಗಿದ್ದು, ಈ ಪ್ರದೇಶಗಳ ಪುನಃಶ್ಚೇತನಕ್ಕೆ ಯೋಜನೆಗಳ ರೂಪುರೇಷೆಯನ್ನು ಇಲಾಖೆ ಮುಖ್ಯಸ್ಥರು ತಯಾರಿಸುತ್ತಾರೆ. ಇದನ್ನು ಸುದರ್ಶನರೆಡ್ಡಿ ನೇತೃತ್ವದ ಪ್ರಾಧಿಕಾರವು ಸುದರ್ಶನರೆಡ್ಡಿ ನೇತೃತ್ವದ ಪ್ರಾಧಿಕಾರವು ಪರಿಶೀಲನೆ ನಡೆಸಿ ಅನುಮೋದನೆ ನೀಡುತ್ತದೆ.

ಗಣಿಬಾಧಿತ ಪ್ರದೇಶಗಳ ಪುನಃಶ್ಚೇತನಕ್ಕಾಗಿ ಬಸವಾರಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟವು ಈ ಪ್ರದೇಶದ ಅಭಿವೃದ್ಧಿಗೆ ಅಂದಾಜು 24,000 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಅನುಮೋದಿಸಿತ್ತು. ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ವಿಶೇಷವಾಗಿ ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಅಂದಾಜು 1,700 ಕೋಟಿ ರೂಪಾಯಿ ವಿನಿಯೋಗಿಸಲು ಒಪ್ಪಿಗೆ ಸೂಚಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sat, 2 March 24