ನಿವೃತ್ತ IPS ಅಧಿಕಾರಿ ಶರತ್ ಸಕ್ಸೇನಾ ವಿಧಿವಶ
ಬೆಂಗಳೂರು: ಆರೋಗ್ಯ ಸಮಸ್ಯೆ ಹಿನ್ನೆಲೆ ಆಸ್ಪತ್ರೆ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ S.C. ಸಕ್ಸೇನಾ (70) ಇಂದು ಬೆಳಿಗ್ಗೆ 6:30ಕ್ಕೆ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿಪಿ ಎಸ್.ಸಿ ಸಕ್ಸೇನಾ ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದುವರೆ ತಿಂಗಳು ಐಸಿಯೂನಲ್ಲಿ ಚಿಕಿತ್ಸೆ ಪಡೆದಿದ್ದ ಸಕ್ಸೇನಾ ಅವರನ್ನು 10 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹೀಗಾಗಿ […]

ಬೆಂಗಳೂರು: ಆರೋಗ್ಯ ಸಮಸ್ಯೆ ಹಿನ್ನೆಲೆ ಆಸ್ಪತ್ರೆ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ S.C. ಸಕ್ಸೇನಾ (70) ಇಂದು ಬೆಳಿಗ್ಗೆ 6:30ಕ್ಕೆ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಡಿಜಿಪಿ ಎಸ್.ಸಿ ಸಕ್ಸೇನಾ ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದುವರೆ ತಿಂಗಳು ಐಸಿಯೂನಲ್ಲಿ ಚಿಕಿತ್ಸೆ ಪಡೆದಿದ್ದ ಸಕ್ಸೇನಾ ಅವರನ್ನು 10 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹೀಗಾಗಿ ಚಿಕಿತ್ಸೆ ಪಲಿಸದೆ ಎಸ್.ಸಿ ಸಕ್ಸೇನಾ ಇಂದು ಬೆಳಿಗ್ಗೆ 6:30ಕ್ಕೆ ವಿಧಿವಶರಾಗಿದ್ದಾರೆ.
1976ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಸಕ್ಸೇನಾ ಅಲ್ಲಾಳಸಂದ್ರದ ಜಕ್ಕೂರು ಪ್ಲಾಂಟೇಷನ್ ಲೇಔಟ್ನಲ್ಲಿ ವಾಸವಿದ್ದರು. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಬ್ಬಾಳದ ಅಗ್ನಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
Published On - 10:30 am, Wed, 18 November 20




