ಬೆಂಗಳೂರು: ಡಾ. ಶಿವರಾಮ ಕಾರಂತ ಜಾಗದ ಕಟ್ಟಡ, ಮನೆಗಳ ಪರಿಶೀಲನೆ ನಡೆಸಲು ರಚಿಸಿರುವ ಸಮಿತಿಯ ಸದಸ್ಯರು, ದಾಖಲೆ ನೀಡಲು ನಿರಾಸಕ್ತಿ ತೋರುತ್ತಿದ್ದಾರೆ. ಒಂದು ತಿಂಗಳಿಗೆ 4 ಸಾವಿರ ದಾಖಲೆಗಳು ಬರಬಹುದೆಂದು ಲೆಕ್ಕ ಹಾಕಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಜನರು ಬರುತ್ತಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ನೇತೃತ್ವದ ಸಮಿತಿಯಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
1,850 ಜನ ಮಾತ್ರ ಕಟ್ಟಡಗಳ ಮಾಹಿತಿ ಕೊಟ್ಟಿದ್ದಾರೆ. 350 ಜನ ಆನ್ಲೈನ್ ಮೂಲಕ ದಾಖಲೆ ಸಲ್ಲಿಕೆ ಮಾಡಿದ್ದಾರೆ. 7,500 ಕಟ್ಟಡಗಳಿವೆ. ಜನರು ಬರುತ್ತಿಲ್ಲ ಆದರೆ, ಜನ ಹೆಚ್ಚು ಸಂಖ್ಯೆಯಲ್ಲಿ ಬರಬಹುದು ಎಂಬ ನಿರೀಕ್ಷೆಯಿತ್ತು. ಈ ತಿಂಗಳ 30ನೇ ತಾರೀಕು ದಾಖಲೆ ನೀಡಲು ಕೊನೆಯ ದಿನ ಎಂದು ಹೇಳಿಕೆ ನೀಡಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಶಿವರಾಮ ಕಾರಂತ ಬಡಾವಣೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈ ಬಿಡುವ ಭರವಸೆ ನೀಡಿದ್ದಾರೆ. ಇದರಿಂದ ಜನರ ಹಾದಿ ತಪ್ಪುವಂತೆ ಆಗಿದೆ. ಶಿವರಾಮ ಕಾರಂತ ಬಡವಾಣೆಗೆ ಸಂಬಂಧಿಸಿದಂತೆ ಕೋಡಿಹಳ್ಳಿ ಚಂದ್ರಶೇಖರ್ ಗೊಂದಲ ಸೃಷ್ಟಿಸಿದ್ದಾರೆ. ಶಿವರಾಮ ಕಾರಂತ ಬಡಾವಣೆ ಯಾವ ಕಾರಣಕ್ಕೂ ನಿಲ್ಲಿವುದಿಲ್ಲ ಎಂದು ಎ.ವಿ ಚಂದ್ರಶೇಖರ್ ಮಾತನಾಡಿದ್ದಾರೆ.
ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ
ಈ ಹಿಂದೆ, ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ದರು.
ಕೆಂಪಾಪುರ, ಸೋಮಶೆಟ್ಟಿಹಳ್ಳಿ, ಲಕ್ಷ್ಮೀಪುರ, ಗಾಣಿಗರಹಳ್ಳಿಯ ಗ್ರಾಮಸ್ಥರು ನಡೆಸುವ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಪ್ರತಿಭಟನೆಗೆ ತೆರಳಿದರೆ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದರು. ಈ ರೀತಿಯಾಗಿ ಬೆದರಿಕೆ ಹಾಕುತ್ತಿರುವ ಪೊಲೀಸರ ವಿರುದ್ಧ ಗ್ರಾಮಸ್ಥರಿಂದ ಆರೋಪದ ಮಾತು ಕೇಳಿ ಬಂದಿತ್ತು. ಸೋಲದೇವನಹಳ್ಳಿ ಪೊಲೀಸರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದರು. ಗ್ರಾಮಗಳಿಗೆ ಜೆಡಿಎಸ್ ಶಾಸಕ ಆರ್.ಮಂಜುನಾಥ್ ಭೇಟಿ ನೀಡಿದ್ದು, ಸರ್ಕಾರದ ನಡೆ ವಿರುದ್ಧ ಶಾಸಕ ಮಂಜುನಾಥ್ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ: ಡಾ.ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರಿಂದ ಪ್ರತಿಭಟನೆ
(Retired Justice a v Chandrashekhar press conference about in the name of dr Shivaram Karanth land acquisition process Bengaluru)
Published On - 3:37 pm, Mon, 5 April 21