ಕೋಲಾರ ಜಿಲ್ಲೆಯಲ್ಲೂ ಸರ್ಕಾರಿ ಭೂ ಅಕ್ರಮಗಳ ತನಿಖೆಗಿಳಿದ ತಹಶೀಲ್ದಾರುಗಳ​ ತಂಡ

ತಹಶೀಲ್ದಾರುಗಳ ಈ ತಂಡಕ್ಕೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ದಾಖಲಾತಿಗಳನ್ನು ನೀಡುವಂತೆ ಅವರಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅಕ್ರಮ ಪಾಷಾ ಅವರು ಕೂಡಾ ಎಲ್ಲಾ ತಾಲ್ಲೂಕು ಕಚೇರಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ. ಇನ್ನು ತಹಶೀಲ್ದಾರ್​ ಅವರ ತಂಡ ದಾಖಲಾತಿಗಳ ಪರಿಶೀಲನೆ ಶುರು ಮಾಡಿರುವ ಹಿನ್ನೆಲೆಯಲ್ಲಿ ಕೋಲಾರ ತಾಲ್ಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿತ್ತು.

ಕೋಲಾರ ಜಿಲ್ಲೆಯಲ್ಲೂ ಸರ್ಕಾರಿ ಭೂ ಅಕ್ರಮಗಳ ತನಿಖೆಗಿಳಿದ ತಹಶೀಲ್ದಾರುಗಳ​ ತಂಡ
ಕೋಲಾರ ಜಿಲ್ಲೆಯಲ್ಲೂ ಸರ್ಕಾರಿ ಭೂ ಅಕ್ರಮಗಳ ತನಿಖೆಗಿಳಿದ ತಹಶೀಲ್ದಾರರ ತಂಡ
Follow us
| Updated By: ಸಾಧು ಶ್ರೀನಾಥ್​

Updated on: Aug 22, 2023 | 2:42 PM

ರಾಜ್ಯದ ಇತರೆ ಜಿಲ್ಲೆಗಳಲ್ಲಿ ನಡೆದಿರುವಂತೆ ಕೋಲಾರ (Kolar) ಜಿಲ್ಲೆಯಲ್ಲಿಯೂ ಹಲವು ವರ್ಷಗಳಿಂದ ನಡೆದಿದೆ ಸರ್ಕಾರಿ ಭೂಮಿ ಕಬಳಿಕೆ ಹಾಗೂ ಅರಣ್ಯ ಭೂಮಿಯ ಅಕ್ರಮ ಮಂಜೂರಾತಿ. ಈ ಹಿನ್ನೆಲೆಯಲ್ಲಿ ಸರ್ಕಾರವೇ ಈಗ ಸರ್ಕಾರಿ ಭೂಮಿ ಒತ್ತುವರಿ ಹಾಗೂ ಕಬಳಿಕೆಯನ್ನು ಪತ್ತೆ ಹಚ್ಚಲು ಒಂದು ದೊಡ್ಡ ತಂಡವನ್ನೇ ಫೀಲ್ಡಿಗೆ ಇಳಿಸಿದೆ. ತಂಡದಲ್ಲಿ ಯಾರು ಯಾರಿದ್ದಾರೆ, ಆ ತಂಡ ಏನ್​ ಏನ್​ ಮಾಡ್ತಿದೆ ಇಲ್ಲಿದೆ ಒಂದು ವರದಿ.. ಕೋಲಾರ ತಾಲ್ಲೂಕು ಕಚೇರಿಯಲ್ಲಿ ಬಾಗಿಲು ಹಾಕಿಕೊಂಡು ದಾಖಲೆಗಳ ಪರಿಶೀಲನೆ (Investigation) ನಡೆಸುತ್ತಿರುವ ತಹಶೀಲ್ದಾರ್​ರ (Tehsildar) ತಂಡ, ಇನ್ನೊಂದೆಡೆ ತನಿಖಾ ತಂಡಕ್ಕೆ ಅಗತ್ಯ ದಾಖಲಾತಿಗಳನ್ನು ಪೂರೈಕೆ ಮಾಡುತ್ತಿರುವ ಸಿಬ್ಬಂದಿ, ಇನ್ನೊಂದೆಡೆ ತನಿಖಾ ತಂಡವನ್ನು ವೀಕ್ಷಣೆ ಮಾಡುತ್ತಿರುವ ಸಾರ್ವಜನಿಕರು. ಇವೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದಲ್ಲಿ. ಹೌದು ಕಳೆದ ಹತ್ತಾರು ವರ್ಷಗಳಿಂದ ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ (Kolar revenue land encroachment). ಜೊತೆಗೆ ಆಯಾ ಕಾಲಕ್ಕೆ ತಕ್ಕಂತೆ ಅಧಿಕಾರಿಗಳು ಕೂಡಾ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ನಿಯಮಗಳನ್ನು ಗಾಳಿಗೆ ತೂರು ಸಿಕ್ಕ ಸಿಕ್ಕವರಿಗೆ ಮಂಜೂರಾತಿ ಮಾಡಿದ್ದಾರೆ ಅನ್ನೋ ದೂರು ಕೇಳಿ ಬಂದಿತ್ತು.

ಇದರ ಜೊತೆಗೆ ಜಿಲ್ಲೆಯಲ್ಲಿ ಹಲವೆಡೆ ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಅಕ್ರಮ ದಾಖಲಾತಿ ಸೃಷ್ಟಿ ಮಾಡಿ ಒತ್ತುವರಿ ಮಾಡಲಾಗಿದೆ ಅನ್ನೋ ದೂರುಗಳೂ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋಲಾರ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಭೂ ಮಂಜೂರು, ಅರಣ್ಯ ಭೂಮಿ ಒತ್ತುವರಿಯಂತೆ ಹಲವು ಪ್ರಕರಣಗಳ ಕೂಲಂಕಷ ತನಿಖೆ ನಡೆಸುವ ನಿಟ್ಟಿನಲ್ಲಿ ಸುಮಾರು 14 ಜನ ಗೇಡ್​-1 ಹಾಗೂ ಗ್ರೇಡ್​-2 ತಹಶೀಲ್ದಾರರ ತಂಡವನ್ನು ಕೋಲಾರ ಜಿಲ್ಲೆಯಲ್ಲಿ ಇಳಿಸಿದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿ ಅಕ್ರಮ ಮಂಜೂರಾತಿಯನ್ನು ಪತ್ತೆ ಹಚ್ಚಲು ಒಂದು ತಂಡ ಫೀಲ್ಡಿಗಿಳಿದು ತನ್ನ ಕಾರ್ಯ ಶುರುಮಾಡಿದೆ. ಇಂದಿನಿಂತ ತನಿಖಾ ಕಾರ್ಯ ಶುರು ಮಾಡಿರುವ ತಹಶೀಲ್ದಾರುಗಳ ತಂಡ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ.

Also Read: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ -60 ರೆವೆನ್ಯೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆ

ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡಾ ಆದೇಶ ಹೊರಡಿಸಿದ್ದಾರೆ. 14 ಜನ ಗ್ರೇಡ್​-1 ಹಾಗೂ ಗ್ರೇಡ್​-2 ತಹಶೀಲ್ದಾರ್ ಅವರುಗಳ ತಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಿ ಆದಷ್ಟು ಬೇಗ ಸರ್ಕಾರಕ್ಕೆ ವರದಿಯನ್ನು ನೀಡುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿದ್ದಾರೆ. ಈ ತಂಡ ನೀಡುವ ವರದಿಯ ಆಧಾರದಲ್ಲಿ ಒತ್ತುವರಿ ಹಾಗೂ ಅಕ್ರಮ ಮಂಜೂರಾತಿ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ.

ಇನ್ನು ತಹಶೀಲ್ದಾರುಗಳ ಈ ತಂಡಕ್ಕೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ದಾಖಲಾತಿಗಳನ್ನು ನೀಡುವಂತೆ ಅವರಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅಕ್ರಮ ಪಾಷಾ ಅವರು ಕೂಡಾ ಎಲ್ಲಾ ತಾಲ್ಲೂಕು ಕಚೇರಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ. ಇನ್ನು ತಹಶೀಲ್ದಾರ್​ ಅವರ ತಂಡ ದಾಖಲಾತಿಗಳ ಪರಿಶೀಲನೆ ಶುರು ಮಾಡಿರುವ ಹಿನ್ನೆಲೆಯಲ್ಲಿ ಕೋಲಾರ ತಾಲ್ಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿತ್ತು, ಬಹುತೇಕ ಎಲ್ಲಾ ಸಿಬ್ಬಂದಿ ತನಿಖಾ ತಂಡಕ್ಕೆ ಸಹಕಾರ ನೀಡುತ್ತಿದ್ದ ಹಿನ್ನೆಲೆಯಲ್ಲಿ ಹಲವು ಕೆಲಸಗಳಿಗಾಗಿ ತಾಲ್ಲೂಕು ಕಚೇರಿಗೆ ಬಂದಿದ್ದ ವೃದ್ದರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಜನರು ಪರದಾಡುವ ಸ್ಥಿತಿ ಎದುರಾಗಿತ್ತು.

ಒಟ್ಟಾರೆ ಕೋಲಾರದಲ್ಲಿ ಫೀಲ್ಡಿಗಿಳಿದಿರುವ ಅಧಿಕಾರಿಗಳ ತಂಡ ತನಿಖೆ ಶುರುಮಾಡಿಕೊಂಡಿದ್ದು, ಅಧಿಕಾರಿಗಳು ಹಾಗೂ ದಳ್ಳಾಳಿಗಳ ಕರಾಮತ್ತಿನಿಂದ ಕೋಟ್ಯಾಂತರ ರೂಪಾಯಿ ಸರ್ಕಾರಿ ಭೂಮಿ ನುಂಗುಹಾಕಿರುವವರ ಎದೆಯಲ್ಲಿ ನಡುಕ ಶುರುವಾಗಿದ್ದು, ನಿಜಕ್ಕೂ ಅಕ್ರಮಗಳು ಬಯಲಾಗಿದ್ದೇ ಆದಲ್ಲಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆಸ್ತಿ ವಾಪಸ್ಸೋಗದರಲ್ಲಿ ಅನುಮಾನವಿಲ್ಲ

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ