ಹುಬ್ಬಳ್ಳಿ: ಕಂದಾಯ ಸಚಿವ ಆರ್ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ:
ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ಅವರಿಗೆ ಸ್ವಾಗತ ಮಾಡಿಕೊಳ್ಳಲು ಸಿದ್ದತೆ ನಡೆದಿದೆ. ಗ್ರಾಮ ವಾಸ್ತವ್ಯದಿಂದ ಗ್ರಾಮಸ್ಥರಿಗೆ ಎಲ್ಲಾ ಸೌಲಭ್ಯಗಳು ಸಿಗಬೇಕು. ಗ್ರಾಮದ ಸಮಸ್ಯೆಗಳ ಬಗ್ಗೆ ಈಗಾಗಲೇ ದೂರುಗಳು ಬಂದಿವೆ. ಅವತ್ತಿನ ದಿನ ದೂರುಗಳ ಬಗ್ಗೆ ಸಂವಾದ ಆಗುತ್ತದೆ. ಸಂವಾದದಲ್ಲಿ ಸಮಸ್ಯೆಗಳ ಪರಿಹಾರ ಸಿಗುತ್ತದೆ. ಗ್ರಾಮದಲ್ಲಿ ಹೈಸ್ಕೂಲ್ ಸ್ಥಾಪನೆ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಹೀಗಾಗಿ ಛಬ್ಬಿ ಗ್ರಾಮವನ್ನ ಸಚಿವರೇ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.
Also Read : ಕಾಡು ಗ್ರಾಮದಲ್ಲಿ DC ಗ್ರಾಮವಾಸ್ತವ್ಯ, ಕುಂದುಕೊರತೆ ಬಿಚ್ಚಿಟ್ಟ ಗ್ರಾಮಸ್ಥರು
Published On - 5:25 pm, Thu, 18 March 21