ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಸೋಂಕು ತಡೆಗಟ್ಟಲು ಈಗಾಗಲೇ ಹೊರರ್ಕಾರ ಸ್ಪಷ್ಟೀಕರಣ ಆದೇಶ ಪ್ರಕಟಿಸಿದೆ. ವಾಣಿಜ್ಯ ಮಳಿಗೆಗಳನ್ನ ಸ್ಥಗಿತಗೊಳಿಸುವ ಬಗ್ಗೆ ಗೊಂದಲ ಸ್ಪಷ್ಟೀಕರಣ ನೀಡಿ ಸರ್ಕಾರ ಈ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯಾದ್ಯಂತ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳೂ ಸ್ಥಗಿತಗೊಳ್ಳಲಿವೆ. ಮೇ 4ರವರೆಗೆ ರಾಜ್ಯಾದ್ಯಂತ ಪರಿಷ್ಕೃತ ಮಾರ್ಗಸೂಚಿ ಅನ್ವಯವಾಗಲಿದೆ.
1) ನ್ಯಾಯಬೆಲೆ ಅಂಗಡಿ, ಆಹಾರ, ದಿನಸಿ, ಹಣ್ಣು, ತರಕಾರಿ ಅಂಗಡಿಗಳನ್ನು ತೆರೆಯಬಹುದು.
2) ಡೇರಿ, ಹಾಲಿನ ಬೂತ್, ಮೀನು, ಮಾಂಸ ಮಾರಾಟಕ್ಕೆ ಅವಕಾಶವಿದ್ದು, ಹೋಟೆಲ್, ದರ್ಶಿನಿ, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗಿದೆ.
3) ಬ್ಯಾಂಕ್, ಎಟಿಎಂ, ವಿಮಾ ಕಚೇರಿ ತೆರೆಯಬಹುದು. ಬ್ಯಾಂಕ್, ಇ-ಕಾಮರ್ಸ್ ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ
4) ಸಲೂನ್, ಬ್ಯೂಟಿ ಪಾರ್ಲರ್ಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆದರೆ ಕಡ್ಡಾಯವಾಗಿ ಕೊವಿಡ್ ಮಾರ್ಗಸೂಚಿ ಪಾಲಿಸಬೇಕು
5) ಕಟ್ಟಡ ನಿರ್ಮಾಣ ಕಾಮಗಾರಿಗೆ ಯಾವುದೇ ನಿರ್ಬಂಧವಿಲ್ಲ
6) ಕೃಷಿ ಸಂಬಂಧಿಸಿದ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ
ಏಪ್ರಿಲ್ 23ರ ನಂತರ ಬೆಂಗಳೂರಿನ ಎಲ್ಲಾ ಮಾರ್ಕೆಟ್ಗಳು ಸ್ಥಳಾಂತರಗೊಳ್ಳಲಿವೆ ಎಂದು ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ತಿಳಿಸಿದೆ.
ಕರ್ನಾಟಕದಲ್ಲಿ ಕೊವಿಡ್ ಹೆಚ್ಚಳ
ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 68 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,47,997ಕ್ಕೆ (12.47 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 10,37,857 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,96,236 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,450 ಜನರು ಸಾವನ್ನಪ್ಪಿದ್ದಾರೆ. 5,98,919 ಸೋಂಕಿತರ ಪೈಕಿ 4,55,655 ಜನರು ಗುಣಮುಖರಾಗಿದ್ದಾರೆ. 13,7813 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 123 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ, 68 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಕಲಬುರಗಿ 11, ಬಳ್ಳಾರಿ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ತಲಾ ಐವರು, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ತಲಾ ನಾಲ್ವರು, ಮೈಸೂರು, ಬೀದರ್ ಜಿಲ್ಲೆಗಳಲ್ಲಿ ತಲಾ ಮೂವರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರು, ಬೆಳಗಾವಿ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
(Revised Covid Guidelines Released by Karnataka State Government for the Elimination of Commercial shop closed Confusion)
ಇದನ್ನೂ ಓದಿ: ಕರ್ನಾಟಕ ರಾಜ್ಯಾದ್ಯಂತ ಮೇ 4ರವರೆಗೆ ಪರಿಷ್ಕೃತ ಮಾರ್ಗಸೂಚಿ ಜಾರಿ; ನಿಯಮ ಸಡಿಲಕ್ಕೆ ಅವಕಾಶವಿಲ್ಲವೆಂದ ಸರ್ಕಾರ
ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ ಮಿಸ್ ಮಾಡದೇ ಓದಿ
Published On - 9:08 pm, Thu, 22 April 21