ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ, ಆದರೂ 3 ಪಠ್ಯಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ

|

Updated on: Jun 07, 2023 | 12:05 PM

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ.

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ, ಆದರೂ 3 ಪಠ್ಯಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ
ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ
Follow us on

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (School textbook revise) ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ಆದರೆ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ ಎಂದಿದ್ದಾರೆ.

ಬೆಂಗಳೂರಲ್ಲಿ ಟಿವಿ9 ವರದಿಗಾರರೊಂದಿಗೆ ಮಾತನಾಡಿದ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದರು. ಇನ್ನು ಬರಗೂರು ಸಮಿತಿ ಅಧ್ಯಕ್ಷತೆ ವಹಿಸಲು ನಿರಾಕರಿಸಿದ ಹಿನ್ನಲೆ ಸದ್ಯಕ್ಕೆ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಸರ್ಕಾರ ತಾತ್ಕಲಿಕವಾಗಿ ವಿವಾಧಿತ ಮೂರು ಪಠ್ಯಕ್ಕೆ ಕತ್ತರಿ ಹಾಕಲು ಚಿಂತನೆ ನಡೆಸಿದೆ.

ಸರಣಿ ಟ್ವೀಟ್​​ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಸುನಿಲ್​ ಕುಮಾರ್ ವಾಗ್ದಾಳಿ

ಪಠ್ಯಪುಸ್ತಕ ಪರೀಷ್ಕರಣೆ ವಿಚಾರವಾಗಿ ಮಾಜಿ ಸಚಿವ ವಿ ಸುನಿಲ್​ ಕುಮಾರ್​ ಟ್ವಿಟ್ ಮಾಡಿ ​ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ? ಮಾನ್ಯ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರೇ ಇಲಾಖೆಯ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ. ನೀವು ಪಾಠ ಮಾಡಬೇಡಿ ಎಂದು ವಾಗ್ದಾಳಿ ಮಾಡಿದರು.

ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ. ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ? ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? ಎಂದು ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ