AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕಳೆದ 3 ದಿನಗಳಿಂದ ಗೋಯಲ್ ಅವರು ಭೇಟಿಗೆ ಕಾಲಾವಕಾಶ‌ ನೀಡುತ್ತಿಲ್ಲ. ಕೇಂದ್ರ ಆಹಾರ ಇಲಾಖೆಯು ಭೇಟಿಗೆ ಸಮಯ ನೀಡಿತ್ತು. ಹೀಗಾಗಿ ದೆಹಲಿಗೆ ಬಂದಿದ್ದೇನೆ ಎಂದು ಕೆಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ
ಕೆಹೆಚ್ ಮುನಿಯಪ್ಪ
ಗಣಪತಿ ಶರ್ಮಾ
|

Updated on:Jun 21, 2023 | 9:12 PM

Share

ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕರ್ನಾಟಕ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಆರೋಪಿಸಿದ್ದಾರೆ. ದೆಹಲಿಗೆ ತೆರಳಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕಳೆದ 3 ದಿನಗಳಿಂದ ಗೋಯಲ್ ಅವರು ಭೇಟಿಗೆ ಕಾಲಾವಕಾಶ‌ ನೀಡುತ್ತಿಲ್ಲ. ಕೇಂದ್ರ ಆಹಾರ ಇಲಾಖೆಯು ಭೇಟಿಗೆ ಸಮಯ ನೀಡಿತ್ತು. ಹೀಗಾಗಿ ದೆಹಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 10 ಗಂಟೆಗೆ ಭೇಟಿಗೆ ಅವಕಾಶ ನೀಡಲಾಗಿತ್ತು. ಇದೀಗ ಆ ಅವಕಾಶ‌ವನ್ನೂ ನಿರಾಕರಿಸಿದ್ದಾರೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾವು ಜನರಿಗೆ ನೀಡಿರುವ ಭರವಸೆಯಂತೆ ಅಕ್ಕಿ ನೀಡುತ್ತೇವೆ. ರಾಜ್ಯದ ಜನರಿಗೆ ಅಕ್ಕಿ ನೀಡಲು ಪರ್ಯಾಯ ವ್ಯವಸ್ಥೆ ಮಾಡ್ತಿದ್ದೇವೆ. ಛತ್ತೀಸ್​ಗಢ, ಪಂಜಾಬ್ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಅಕ್ಕಿ ದರ ಹೆಚ್ಚಳವಾಗುತ್ತಿದೆ, ಅದಕ್ಕೆ ಹಣದ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಜನರ ಬೇಡಿಕೆಯಂತೆ 8 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಜೋಳ ನೀಡಲಿದ್ದೇವೆ. ಜುಲೈ 1ರಿಂದ ಆರಂಭವಾಗಬೇಕಿದ್ದ ಅಕ್ಕಿ ವಿತರಣೆಯಲ್ಲಿ ವಿಳಂಬವಾಗಲಿದೆ. ಆಗಸ್ಟ್ ಒಳಗಾಗಿ ಜನರಿಗೆ 10 ಕೆಜಿ ಆಹಾರ ಧಾನ್ಯ ನೀಡುತ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಖರೀದಿ ವಿಚಾರವಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಜಟಾಪಟಿ ನಡೆಯುತ್ತಿದೆ. ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಭಾರತೀಯ ಆಹಾರ ನಿಗಮ (ಎಫ್​ಸಿಐ) ನಿರಾಕರಿಸಿದೆ. ಕೇಂದ್ರದ ಬಿಜೆಪಿ ಸರ್ಕಾರದ ಸೂಚನೆ ಮೇರೆಗೆ ಎಫ್​ಸಿಐ ಈ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ, ಬಿಜೆಪಿ ಈ ಆರೋಪವನ್ನು ನಿರಾಕರಿಸಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತವಿರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ್ದೇವೆ; ಕೇಂದ್ರ ಸಚಿವ ಪೀಯೂಷ್ ಗೋಯಲ್

ಬಿಜೆಪಿ ಆಡಳಿತ ಇರುವ ರಾಜ್ಯಗಳೂ ಸೇರಿದಂತೆ ಹೆಚ್ಚುವರಿ ಅಕ್ಕಿಗೆ ಇತರ ರಾಜ್ಯಗಳು ಮಾಡಿರುವ ಬೇಡಿಕೆಯನ್ನು ತಿರಸ್ಕರಿಸಲಾಗಿದೆ. ಮುಕ್ತ ಮಾರುಕಟ್ಟೆಯಿಂದ ಅಕ್ಕಿ ಖರೀದಿಸಲು ಕರ್ನಾಟಕ ಮುಕ್ತವಾಗಿದೆ ಎಂದು ಪಿಯೂಷ್ ಗೋಯಲ್ ಮಂಗಳವಾರ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Wed, 21 June 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!