AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಬೋರ್ಗಿನಿ ಕಾರು ಪ್ರಕರಣ: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ

ನಕಲಿ ನಂಬರ್ ಪ್ಲೇಟ್ ಬಳಸಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿದ ವಂಚನೆ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. 35 ಲಕ್ಷ ರೂ. ದಂಡ ಹಾಗೂ ಈ ಹಿಂದೆ ನಡೆದಿದ್ದ ಅಪಾಯಕಾರಿ ಸ್ಟಂಟ್ ಪ್ರಕರಣದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಲ್ಯಾಂಬೋರ್ಗಿನಿ ಕಾರು ಪ್ರಕರಣ: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ
ರಿಕ್ಕಿ ರೈ ಹಾಗೂ ಲ್ಯಾಂಬೊರ್ಗಿನಿ ಕಾರುImage Credit source: tv9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 03, 2026 | 9:36 AM

Share

ಬೆಂಗಳೂರು, ಏಪ್ರಿಲ್ 3: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ (Bangalore) ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಚಾರದ ವಿಡಿಯೋ ವೈರಲ್ ಆಗಿತ್ತಲ್ಲದೆ, ಪ್ರಕರಣ ಸಹ ದಾಖಲಾಗಿತ್ತು.

ಏನಿದು ಲ್ಯಾಂಬೋರ್ಗಿನಿ ವಂಚನೆ ಪ್ರಕರಣ?

ದೆಹಲಿಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಖರೀದಿ ಮಾಡಿದ್ದ ರಿಕ್ಕಿ ರೈ, ಆರ್‌ಟಿಒ (RTO) ಮೂಲಕ KA 05 NR 0009 ಎಂಬ ಫ್ಯಾನ್ಸಿ ನಂಬರ್ ಪಡೆಯಲು 5 ಲಕ್ಷ ರೂಪಾಯಿ ಪಾವತಿಸಿದ್ದರು. ಆದರೆ, ಈ ನಂಬರ್ ಅನ್ನು ಅಧಿಕೃತವಾಗಿ ನೋಂದಣಿ (Registration) ಮಾಡಿಸದೆಯೇ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ರಸ್ತೆಗೆ ಇಳಿಸಿದ್ದರು. ನಿಯಮದ ಪ್ರಕಾರ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ನಂಬರ್ ಪ್ಲೇಟ್ ಬಳಸುವುದು ಕಾನೂನುಬಾಹಿರ ಹಾಗೂ ವಂಚನೆಯಾಗಿದೆ.

ದಂಡ ಮತ್ತು ತಲೆಮರೆಸಿಕೊಂಡಿದ್ದ ಆರೋಪಿ

ಈ ಅಕ್ರಮದ ಹಿನ್ನೆಲೆಯಲ್ಲಿ ಈ ಹಿಂದೆ ಪೊಲೀಸರು ಕಾರನ್ನು ಸೀಜ್ ಮಾಡಿದ್ದರು. ಕಳೆದ ಅಕ್ಟೋಬರ್‌ನಲ್ಲಿ ಆರ್‌ಟಿಒ ಅಧಿಕಾರಿಗಳು ಈ ಉಲ್ಲಂಘನೆಗಾಗಿ ಬರೋಬ್ಬರಿ 35 ಲಕ್ಷ ರೂಪಾಯಿ ದಂಡ ವಿಧಿಸಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದ ಪ್ರಕರಣವೂ ಭಾರಿ ಸುದ್ದಿಯಾಗಿತ್ತು. ಈ ಘಟನೆ ಉದ್ದೇಶಪೂರ್ವಕ ಡ್ರಿಫ್ಟಿಂಗ್ ಆಗಿರದೆ, ಕಾರಿನ ಬ್ರೇಕ್ ಸಮಸ್ಯೆಯಿಂದ ಅಥವಾ ರಸ್ತೆಯ ಮರಳಿನ ಕಾರಣದಿಂದ ಉಂಟಾದ ಆಕಸ್ಮಿಕ ಸ್ಕಿಡ್ ಆಗಿದೆ ಎಂದು ರಿಕ್ಕಿ ರೈ ಪರ ವಕೀಲ ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟ ಬಟಾಬಯಲು: ಮುತ್ತಪ್ಪ ರೈ ಪುತ್ರನಿಗೆ ಮತ್ತೊಂದು ಸಂಕಷ್ಟ

ಮತ್ತೊಂದೆಡೆ, ಈ ಸರಣಿ ಕೇಸ್‌ಗಳು ದಾಖಲಾಗುತ್ತಿದ್ದಂತೆ ರಿಕ್ಕಿ ರೈ ರಷ್ಯಾಕ್ಕೆ ತೆರಳಿದ್ದರು ಎನ್ನಲಾಗಿದ್ದು, ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​