Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಬಣ ಜಗಳ: ಬಸನಗೌಡ ಪಾಟೀಲ್ ಯತ್ನಾಳ್​ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಕರ್ನಾಟಕ ಬಿಜೆಪಿ ಬಣ ಜಗಳ ವಿಕೋಪಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಕೊನೆಗೂ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ಬಿಜೆಪಿ ಶಿಸ್ತು ಸಮಿತಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಶೋಕಾಸ್ ನೋಟಿಸ್ ನೀಡಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿ ಭೇಟಿಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಬಿಜೆಪಿ ಬಣ ಜಗಳ: ಬಸನಗೌಡ ಪಾಟೀಲ್ ಯತ್ನಾಳ್​ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
Follow us
Ganapathi Sharma
|

Updated on:Dec 02, 2024 | 12:01 PM

ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಎಂಟ್ರಿಕೊಟ್ಟಿದೆ. ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಬಿಜೆಪಿ ಶಿಸ್ತು ಸಮಿತಿ ನೋಟಿಸ್​ನಲ್ಲೇನಿದೆ?

ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಉತ್ತರಿಸಲು ಯತ್ನಾಳ್​ಗೆ 10 ದಿನಗಳ ಗಡುವು

ಮುಂದುವರಿದು, ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್​ನಲ್ಲಿ ಉಲ್ಲೇಖಿಸಲಾಗಿದೆ.

Rift in Karnataka BJP: Central disciplinary committee issued show cause notice to Basangouda Patil Yatnal

ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಪ್ರತಿ

ಇದನ್ನೂ ಓದಿ: ಮೋದಿಯಿಂದಲೇ ವಿಜಯೇಂದ್ರ ಬಣಕ್ಕೆ ಟಕ್ಕರ್​ ಕೊಡಿಸಲು ಯತ್ನಾಳ್ ಮೆಗಾ ಪ್ಲ್ಯಾನ್!

ಏತನ್ಮಧ್ಯೆ, ವಿಜಯೇಂದ್ರ ತಂಡ ವರಿಷ್ಠರನ್ನು ಭೇಟಿಯಾಗಿ ಬಂದ ಬೆನ್ನಲ್ಲೇ ಯತ್ನಾಳ್ ಬಣ ಕೂಡ ಹೈಕಮಾಂಡ್ ಭೇಟಿಗೆ ಸಮಯ ಕೇಳಿದೆ ಎನ್ನಲಾಗುತ್ತಿದೆ. ಒಂದೆಡೆ, ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಯತ್ನಾಳ್ ತಂಡದ ವಿರುದ್ಧ ರಣಕಹಳೆ ಮೊಳಗಿಸಲು ವಿಜಯೇಂದ್ರ ತಂಡ ರೆಡಿಯಾಗುತ್ತಿದೆ ಎಂದು ವರದಿಯಾಗಿತ್ತು. ಇದರ ಬೆನ್ನಲ್ಲೇ, ದಾವಣಗೆರೆ ಸಮಾವೇಶಕ್ಕೆ ತಿರುಗೇಟು ನೀಡಲು ಹಿಂದೂ ಸಮಾವೇಶ ಆಯೋಜಿಸಲು ಹೊರಟಿದೆ ಎನ್ನಲಾಗಿತ್ತು. ಇದೀಗ ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:22 am, Mon, 2 December 24

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು