ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಸಾಧ್ಯತೆ

ಕಳೆದ ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಗಲಭೆಗಳಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ ಎಮ್ ವಿಜಯ ಭಾಸ್ಕರ್ ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗಲಭೆ, ಗೋಲಿಬಾರ್ ಮತ್ತು ತದನಂತರ ನಡೆದ ಎಲ್ಲಾ ವಿದ್ಯಮಾನಗಳ ಬಗ್ಗೆ ಬೊಮ್ಮಾಯಿ ಮತ್ತು ಹಾಜರಿದ್ದ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದ ನಂತರ ಸಭೆಯಲ್ಲಿ ಕೆಲವು ಮಹತ್ತರ ವಿಷಯಗಳನ್ನು ಚರ್ಚಿಸಿ ಒಂದಷ್ಟು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತೆಂದು ಉನ್ನತ ಮೂಲಗಳು ತಿಳಿಸಿವೆ. […]

ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಸಾಧ್ಯತೆ
Arun Belly

|

Aug 17, 2020 | 3:35 PM

ಕಳೆದ ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಗಲಭೆಗಳಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ ಎಮ್ ವಿಜಯ ಭಾಸ್ಕರ್ ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗಲಭೆ, ಗೋಲಿಬಾರ್ ಮತ್ತು ತದನಂತರ ನಡೆದ ಎಲ್ಲಾ ವಿದ್ಯಮಾನಗಳ ಬಗ್ಗೆ ಬೊಮ್ಮಾಯಿ ಮತ್ತು ಹಾಜರಿದ್ದ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದ ನಂತರ ಸಭೆಯಲ್ಲಿ ಕೆಲವು ಮಹತ್ತರ ವಿಷಯಗಳನ್ನು ಚರ್ಚಿಸಿ ಒಂದಷ್ಟು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತೆಂದು ಉನ್ನತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸುಪ್ರೀಂಕೋರ್ಟ್ ಆದೇಶದನ್ವಯ, ಗಲಭೆಯಲ್ಲಿ ನಡೆದ ಆಸ್ತಿಪಾಸ್ತಿ ನಷ್ಟವನ್ನು ಅಂದಾಜಿಸಲು ಒಬ್ಬ ಕ್ಲೇಮ್ ಕಮೀಷನರ್​ರನ್ನು ನೇಮಕ ಮಾಡಲು ರಾಜ್ಯ ಉಚ್ಛ ನ್ಯಾಯಾಲಯವನ್ನು ಸಂಪರ್ಕಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರಕರಣದ ತನಿಖೆ ನಡೆಸಲು ಒಂದು ವಿಶೇಷ ತನಿಖಾ ದಳವನ್ನು (ಎಸ್ ಐ ಟಿ) ಈಗಾಗಲೇ ನೇಮಿಸಲಾಗಿದ್ದು, ಇಂದಿನ ಸಭೆಯಲ್ಲಿ ಸರಕಾರದ ಪರ ವಾದಿಸಲು ಮೂವರು ಸರಕಾರೀ ಅಭಿಯೋಜಕರನ್ನು ನಿಯುಕ್ತಿಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲು ಎಸ್ ಐ ಟಿಗೆ ಅಧಿಕಾರ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗೃಹ ಸಚಿವ, ಮುಖ್ಯ ಕಾರ್ಯದರ್ಶಿಯವರಲ್ಲದೆ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ ಗೋಯೆಲ್, ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಬಿ ದಯಾನಂದ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಹಾಜರಿದ್ದರು.

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada