AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು

ಕರ್ನಾಟಕ ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ರವಿವಾರ (ಜು.06) ಒಂದೇ ದಿನ ಎಂಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ, ಚಿಕ್ಕಮಗಳೂರು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ|

Updated on:Jul 06, 2025 | 7:14 PM

Share

ಬೆಂಗಳೂರು, ಜುಲೈ 06: ರಾಜ್ಯದಲ್ಲಿ ಹೃದಯಾಘತದಿಂದ (Heart Attack) ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ರವಿವಾರ (ಜು.06) ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ (Karnataka Heart Attack) ಎಂಟು ಮಂದಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ನು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ರಾಮಸಮುದ್ರ ಹೌಸಿಂಗ್‌ಬೋರ್ಡ್ ಕಾಲೋನಿ ನಿವಾಸಿ ಶಿವಕುಮಾರ್‌‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಇಸಿಜಿ ಮಾಡುವಷ್ಟರಲ್ಲಿ ಶಿವಕುಮಾರ್ ಕೊನೆಯುಸಿರು ಎಳೆದಿದ್ದಾರೆ.

ಹಾಸನದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಾರಿನಲ್ಲಿ ತೆರಳುತ್ತಿದ್ದ ರಂಗನಾಥ್ (57) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಂಗನಾಥ್​ ಅವರು ಕುಟುಂಬ ಸಮೇತ ಮಂಗಳೂರಿಗೆ ಪ್ರವಾಸಕ್ಕೆಂದು ಹೋಗಿದ್ದರು. ರವಿವಾರ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ರಂಗನಾಥ್​ ಅವರ ಪುತ್ರಿ ಕಾರು ಚಲಾಯಿಸುತ್ತಿದ್ದರು. ಕಾರು ಹಾಸನ ಜಿಲ್ಲಾಧಿಕಾರಿ ಕಚೇರಿ ಸಮೀಪ ಬರುತ್ತಿದ್ದಂತೆ ರಂಗನಾಥ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆದ್ದರಿಂದ, ರಂಗನಾಥ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಂಗನಾಥ್​ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹಿಮ್ಸ್ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ. ಮೃತ ರಂಗನಾಥ್ ಅವರು ಬೆಂಗಳೂರಿನ ಜಯನಗರದ‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿ
Image
ಹಾಸನ ಹೃದಯಾಘಾತಗಳಿಗೆ ಕೋವಿಡ್ ಕಾರಣವಾ?
Image
ಹಾಸನ: ಹೃದಯಾಘಾತಕ್ಕೆ ಒಂದೇ ದಿನ 3 ಬಲಿ, 40 ದಿನಗಳಲ್ಲಿ 22 ಸಾವು
Image
ಡಾ.ಮಂಜುನಾಥ್​ ದಿಟ್ಟ ಹೆಜ್ಜೆ: ರಾಜ್ಯದ ಹೃದಯಾಘಾತ ಕೇಸ್​​ ಮೋದಿ ಅಂಗಳಕ್ಕೆ
Image
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಆನಂದ್ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆನಂದ್​ ಐಚನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾಗಿದ್ದರು. ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಆನಂದ್​ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಪತ್ನಿ ಬಳಿ ಎದೆ ನೋವುತ್ತಿದೆ ಎಂದು ಹೇಳಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಟೋ ಕರೆತರುವಷ್ಟರಲ್ಲಿ ಆನಂದ್​ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 37 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಯಾದಗಿರಿ ತಾಲೂಕಿನ ಶೆಟ್ಟಿಕೇರಾ ಗ್ರಾಮದ ಹಳ್ಳೆಪ್ಪ ಪೂಜಾರಿ (44) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಹಳ್ಳೆಪ್ಪ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಜೀರಮ್ಮ (53) ಮೃತ ದುರ್ದೈವಿ. ಕಿಮ್ಸ್​​ನಲ್ಲಿ ಆಯಾ ಆಗಿ ಕೆಲಸ ನಿರ್ವಹಿಸುತ್ತಿದ್ದ ನಜೀರಮ್ಮ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೇ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು!

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಯೋಧ ಗಂಗಾಧರಪ್ಪ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯೋಧ ಗಂಗಾಧರಪ್ಪ ಅವರು ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ಗಂಗಾಧರಪ್ಪ ಇಂಡೋ ಟಿಬೇಟಿಯನ್ ಬಾರ್ಡರ್ ಫೋರ್ಸ್​ನಲ್ಲಿ ಹವಾಲ್ದಾರ್ ಆಗಿದ್ದರು. ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೊಂಡೇಬಾವಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29) ಮತ್ತು ಬಿ.ಹೊಸಳ್ಳಿ ಗ್ರಾಮದ ಸುಮಿತ್ರೆಗೌಡ (75) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೀನಾಕ್ಷಿ ಅವರಿಗೆ ಕಾರಿನಲ್ಲೇ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ವೃದ್ಧ ಸುಮಿತ್ರೆಗೌಡ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sun, 6 July 25

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು