Accident: ಶಿವಮೊಗ್ಗ ಬಳಿ ಕಾರು ಡಿಕ್ಕಿಯಾಗಿ ಓಮ್ನಿ ವ್ಯಾನ್ನಲ್ಲಿದ್ದ 8 ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಸಾವು
ವೈದ್ಯಕೀಯ ಪರೀಕ್ಷೆಗೆ ಗರ್ಭಿಣಿ ರೋಜಾರನ್ನು ಕರೆತಂದಿದ್ದರು. ವೈದ್ಯಕೀಯ ಪರೀಕ್ಷೆ ನಂತರ ಚನ್ನಗಿರಿಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ: ಜಿಲ್ಲೆಯ ಬೇಡರ ಹೊಸಹಳ್ಳಿ ಗ್ರಾಮದ ಬಳಿ ದುರಂತವೊಂದು ಸಂಭವಿಸಿದೆ. ಕಾರು ಡಿಕ್ಕಿಯಾಗಿ ಓಮ್ನಿ ವ್ಯಾನ್ನಲ್ಲಿದ್ದ 8 ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ಧನಂಜಯ್(32), ರೋಜಾ(23) ಮೃತರು. ಮೃತಪಟ್ಟ ಧನಂಜಯ್ ತಾಯಿ ಇಂದ್ರಮ್ಮ, ಅತ್ತಿಗೆ ಸುನಿತಾ, ಸ್ನೇಹಿತ ಚೇತನ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಗೆ ಗರ್ಭಿಣಿ ರೋಜಾರನ್ನು ಕರೆತಂದಿದ್ದರು. ವೈದ್ಯಕೀಯ ಪರೀಕ್ಷೆ ನಂತರ ಚನ್ನಗಿರಿಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕನಕಶ್ರೀ ಜ್ಞಾನದೀಪ ಪದವಿ ಪೂರ್ವ ಕಾಲೇಜಿನ ಆವರಣದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿನ್ನೂರುಬಂಡಿ ನಿವಾಸಿ ಹನುಮಂತು(16) ಮೃತ ದುರ್ದೈವಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಸಾವು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ದೇವನಹಳ್ಳಿ ಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲಿವುಡ್ಗಿತ್ತು ಅಂಡರ್ವರ್ಲ್ಡ್ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
ಟ್ಯಾಂಕರ್ ಡಿಕ್ಕಿ-ಬೈಕ್ನಲ್ಲಿದ್ದ ಇಬ್ಬರು ಸವಾರರು ದುರ್ಮರಣ ರಾಯಚೂರು ತಾಲೂಕಿನ ಮರ್ಚಡ್ ಕ್ರಾಸ್ ಬಳಿ ಟ್ಯಾಂಕರ್ ಬೈಕ್ಗೆ ಡಿಕ್ಕಿಯಾಗಿದ್ದು ಬೈಕ್ನಲ್ಲಿದ್ದ ಇಬ್ಬರು ಸವಾರರು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಕುರ್ಡಿ(18), ಲಿಂಗಪ್ಪ(14) ಮೃತ ದುರ್ದೈವಿಗಳು. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಕ್ರಮ ಕಲ್ಲು ಗಣಿಗಾರಿಕೆಯ ಬ್ಲಾಸ್ಟಿಂಗ್ ನಿಂದಾಗಿ ಮನೆ ಗೋಡೆ ಕುಸಿತ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ವಾಡಿಯ ಗ್ರಾಮದಲ್ಲಿ ಲಕ್ಷ್ಮಣ ಸುಭಾಷ್ ಸದಲಾಪುರೆ ಎಂಬುವರಿಗೆ ಸೇರಿದ ಮನೆ ಕುಸಿದಿದೆ. ಇದಕ್ಕೆ ಗ್ರಾಮದ ಕೂಗಳತೆಯ ದೂರದಲ್ಲಿನ ಸರಕಾರಿ ಜಮೀನಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಳ್ಳಿಖೇಡ್ ಕೆ ವಾಡಿ ಗ್ರಾಮದಲ್ಲಿನ ಹಲವಾರು ಮನೆಗಳು ಬಿರುಕು ಬಿಟ್ಟಿದ್ದು ಗ್ರಾಮಸ್ಥರು ಅಕ್ರೋಶ ಹೊರ ಹಾಕಿದ್ದಾರೆ. ಕಲ್ಲುಗಣಿಗಾರಿಗೆ ನಡೆಯುವ ಸ್ಥಳಕ್ಕೆ ಗ್ರಾಮಸ್ಥರು ಭೇಟಿ ಕೊಟ್ಟಿದ್ದು ಗಣಿಗಾರಿಕೆ ಬಂದ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ.
Published On - 3:09 pm, Sun, 26 June 22