ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ

ಟಿಪ್ಪರ ಡಿಕ್ಕಿಯಾಗಿ‌ ಕಟ್ಟಡ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ವಿಜಯದಶಮಿ ದಿನವೇ ಘೋರ ಅಪಘಾತ ಸಂಭವಿಸಿದೆ. ಟಿಪ್ಪರ ಡಿಕ್ಕಿ ರಭಸಕ್ಕೆ ಯುವಕನ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿ ಆಗಿವೆ. ರಸ್ತೆಯಲ್ಲಿ ಬಿದ್ದರೂ ಹೃದಯ ಬಡಿದುಕೊಳ್ಳುತ್ತಿತ್ತು.

ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2024 | 9:28 PM

ಧಾರವಾಡ, ಅಕ್ಟೋಬರ್​ 12: ವಿಜಯದಶಮಿ ದಿನವೇ ಹುಬ್ಬಳ್ಳಿಯಲ್ಲಿ ಘೋರ ಅಪಘಾತವೊಂದು (accident) ಸಂಭವಿಸಿದೆ. ಯುವಕ ರಸ್ತೆ ದಾಟುತ್ತಿರುವಾ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಸುಭಾಷ್ ಗುಂಡಪ್ಪನವರ (25) ಮೃತ ಕಾರ್ಮಿಕ. ಟಿಪ್ಪರ ಡಿಕ್ಕಿ ಹೊಡೆದ ರಭಸಕ್ಕೆ ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿದ್ದು, ರಸ್ತೆಯಲ್ಲಿ ಬಿದ್ದರೂ ಸುಭಾಸ್ ಹೃದಯ ಬಡಿದುಕೊಳ್ಳುತ್ತಿತ್ತು.

ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಸುಭಾಷ್ ಮೂಲತಃ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಸುಳೀಕಟ್ಟಿ ನಿವಾಸಿ. ಸುಳಿಕಟ್ಟಿಯಿಂದ ಕಲಘಟಗಿಗೆ ಬಂದಾಗ ಘೋರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಆಪ್ತ ಸ್ನೇಹಿತನ ಕೊಲೆ; ಆರೋಪಿಗಳ ಕಾಲಿಗೆ ಗುಂಡೇಟು

ಅಪಘಾತ ವಿಡಿಯೋ ನೋಡಿದರೆ ಒಂದು ಕ್ಷಣ ಎದೆ ಬಡಿತ ನಿಲ್ಲೋದು ಗ್ಯಾರಂಟಿ. ರಸ್ತೆಯಲ್ಲಿ ಬಿದ್ದ ಹೃದಯ ಬಿಡಿತದ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ‌ ಹಿಡಿದಿದ್ದಾರೆ.

ಚಾಲಕನ ನಿಯತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: 8 ಮಕ್ಕಳು ಓರ್ವ ವ್ಯಕ್ತಿ ಸೇರಿ ಒಂಬತ್ತು ಜನರಿಗೆ ಗಾಯ

ಕೊಪ್ಪಳ: ಕಾರಟಗಿ ತಾಲೂಕಿನ ಪಟ್ಟಣದೇವಿ ಕ್ಯಾಂಪ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, 8 ಮಕ್ಕಳು ಮತ್ತು ಓರ್ವ ವ್ಯಕ್ತಿ ಸೇರಿ 9 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಪ್ರೇಯಸಿ ಪ್ರೀತಿಸಿ ಕೈಕೊಟ್ಟಳು ಅಂತ ಆಕೆಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ದರ್ಶನ್​!

ದಸರಾ ಹಬ್ಬದ ಹಿನ್ನೆಲೆ ದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಟ್ರ್ಯಾಕ್ಟರ್​ ಪಲ್ಟಿ ಆಗಿದೆ. ಗಾಯಾಳುಗಳು ರಾಯಚೂರು ಜಿಲ್ಲೆಯ ಸಿಂಧನೂರಿನ ಜಂಬುನಾಥಹಳ್ಳಿಯವರು. 9 ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತಿದೆ. ಕಾರಟಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು 

ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶವಾಗಿ ಲೈನ್ ಮ್ಯಾನ್ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆಯಲ್ಲಿ ನಡೆದಿದೆ. 32 ವರ್ಷದ ಮುತ್ತುರಾಜ್ ಸಾವನ್ನಪ್ಪಿದ್ದ ದುರ್ದೈವಿ. ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿತ್ತು. ಎಲ್​ಸಿ ತೆಗೆದುಕೊಂಡಿದ್ದರು ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂದು ಗ್ರಾಮಸ್ಥರಿಂದ ಗಲಾಟೆ ಮಾಡಲಾಗಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ