ಉತ್ತರ ಕನ್ನಡ, ರಾಮನಗರ, ಬಾಗಲಕೋಟೆದಲ್ಲಿ ಮೂರು ಪ್ರತ್ಯೇಕ ಅಪಘಾತ: 20 ಮಂದಿಗೆ ಗಾಯ
ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಸ್ಆರ್ಟಿಸಿ ಬಸ್ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ.
ಬಾಗಲಕೋಟೆ: ಜಿಲ್ಲೆಯ ಇಳಕಲ್ ಹೊರವಲಯದಲ್ಲಿ ಕೆಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ನಾಲ್ವರು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಇಳಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ. ಈ ಸಂಬಂಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ: ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ ಹೊಡೆದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದ ಬಳಿ ಸಂಭವಿಸಿದೆ. ನಿನ್ನೆಯಷ್ಟೆ ಉಡಪಿಯಲ್ಲಿ ಸೈನಿಕ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉಡುಪಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕ್ರೂಷರ್ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದ ಇನ್ನೊಂದು ಕ್ರೂಷರ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರದಲ್ಲಿ ಹಾಲಿನ ಕ್ಯಾಂಟರ್ಗೆ ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ ಹಾಲಿನ ಕ್ಯಾಂಟರ್ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಬೆಂಗಳೂರು ಮೂಲದ ಪ್ರಣಿತ್ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಹಾಲಿನ ಕ್ಯಾಂಟರ್ ವಾಹನವನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ
Published On - 12:00 pm, Fri, 26 March 21