ಉತ್ತರ ಕನ್ನಡ, ರಾಮನಗರ, ಬಾಗಲಕೋಟೆದಲ್ಲಿ ಮೂರು ಪ್ರತ್ಯೇಕ ಅಪಘಾತ: 20 ಮಂದಿಗೆ ಗಾಯ

|

Updated on: Mar 26, 2021 | 12:02 PM

ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಸ್​ಆರ್​ಟಿಸಿ ಬಸ್​ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ.

ಉತ್ತರ ಕನ್ನಡ, ರಾಮನಗರ, ಬಾಗಲಕೋಟೆದಲ್ಲಿ ಮೂರು ಪ್ರತ್ಯೇಕ ಅಪಘಾತ: 20 ಮಂದಿಗೆ ಗಾಯ
ಬಾಗಲಕೋಟೆಯಲ್ಲಿ KSRTC ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ
Follow us on

ಬಾಗಲಕೋಟೆ: ಜಿಲ್ಲೆಯ ಇಳಕಲ್ ಹೊರವಲಯದಲ್ಲಿ ಕೆಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ನಾಲ್ವರು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಇಳಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಮಾರ್ಗದಿಂದ ಬಾಗಲಕೋಟೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮತ್ತು ಬಾಗಲಕೋಟೆ ಮಾರ್ಗದಿಂದ ರಾಯಚೂರು ಮಾರ್ಗದತ್ತ ಹೊರಟಿದ್ದ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ನಡುವೆ ಬೆಳಗಿನ ಜಾವ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದೆ. ಈ ಸಂಬಂಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ:
ಉತ್ತರ ಕನ್ನಡದಲ್ಲಿ ಎರಡು ಕ್ರಷರ್ ಮಧ್ಯೆ ಮುಖಾ ಮುಖಿ ಡಿಕ್ಕಿ ಹೊಡೆದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕೋಳಿಕೇರಿ ಗ್ರಾಮದ ಬಳಿ ಸಂಭವಿಸಿದೆ. ನಿನ್ನೆಯಷ್ಟೆ ಉಡಪಿಯಲ್ಲಿ ಸೈನಿಕ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉಡುಪಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕ್ರೂಷರ್ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದ ಇನ್ನೊಂದು ಕ್ರೂಷರ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರದಲ್ಲಿ ಹಾಲಿನ ಕ್ಯಾಂಟರ್​ಗೆ ಬೈಕ್ ಡಿಕ್ಕಿ; ಬೈಕ್ ಸವಾರನಿಗೆ ಗಂಭೀರ ಗಾಯ
ಹಾಲಿನ ಕ್ಯಾಂಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಬೆಂಗಳೂರು ಮೂಲದ ಪ್ರಣಿತ್​ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಹಾಲಿನ ಕ್ಯಾಂಟರ್ ವಾಹನವನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

Nelyadi Accident: ಹೊತ್ತಿ ಉರಿದ ಬಸ್​ನಲ್ಲಿ ನಟಿ ನೀಮಾ ರೇ! ನೆಲ್ಯಾಡಿ ಭೀಕರ ಅಪಘಾತದಲ್ಲಿ ತುಳು ಕಲಾವಿದೆ ಸೇಫ್​ ಆಗಿದ್ದು ಹೇಗೆ?

Published On - 12:00 pm, Fri, 26 March 21