ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ಪೆರುಮಾಚನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಗುದ್ದಿದೆ. ಕೋಲಾರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶ್ರೀನಿವಾಸ್ (50) ಮೃತ ಸವಾರ.

ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು
ಅಪಘಾತವಾದ ಸ್ಥಳ
Rajesh Duggumane

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 23, 2020 | 8:03 PM

ಚಿಂತಾಮಣಿ: ಬೆಂಗಳೂರು-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಬೈಕ್​ಗಳ ನಡುವೆ ಮುಖಾಮುಖಿಯಾಗಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ಪೆರುಮಾಚನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಗುದ್ದಿದೆ. ಕೋಲಾರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶ್ರೀನಿವಾಸ್ (50) ಮೃತ ಸವಾರ. ಅಪಘಾತದ ರಭಸಕ್ಕೆ ಕಾರಿನ ಗಾಜು ಸಂಪೂರ್ಣ ನುಚ್ಚು ನೂರಾಗಿದೆ. ಬೈಕ್​ನ ಮುಂಭಾಗ ನಜ್ಜುಗುಜ್ಜಾಗಿದೆ. ರಸ್ತೆಯ ಮೇಲೆ ರಕ್ತ ಹರಿಯುತ್ತಿದ್ದ ದೃಶ್ಯ ಭೀತಿ ಹುಟ್ಟಿಸುವಂತಿತ್ತು.

ಅಪಘಾತವಾದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಾರು ಚಾಲಕನಿಗಾಗಿ ಹುಡುಕಾಟ ಮುಂದುವರಿದಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಬಂಧನದ ನಂತರವೇ ಯಾರ ತಪ್ಪು ಎನ್ನುವ ವಿಚಾರ ತಿಳಿದು ಬರಬೇಕಿದೆ.

ಹುಬ್ಬಳ್ಳಿ: ಬೈಕ್​ ಅಪಘಾತದಿಂದ ಹೊರ ಬಿತ್ತು ಲೈಂಗಿಕ ಕಿರುಕುಳ ಪ್ರಕರಣ!

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada