Road Accident | ತೆಲಂಗಾಣ, ಬಿಹಾರ, ಧಾರವಾಡದಲ್ಲಿ ಪ್ರತ್ಯೇಕ ಅಪಘಾತ, ಏರುತ್ತಲಿದೆ ಸಾವಿನ ಸಂಖ್ಯೆ
ತೆಲಂಗಾಣ: ವಲಸೆ ಕೂಲಿಗರನ್ನು ಸಾಗಿಸಲಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಅಂದುಗುಲ ಕೊತ್ತಪಾಲೆಂ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟವರನ್ನು ಕರ್ನೂಲ್ನಿಂದ ಕರೆತರಲಾಗುತ್ತಿದ್ದ ವಲಸೆ ಕೂಲಿ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಮೃತರನ್ನು ಭೀಮಯ್ಯ (50), ಶ್ರೀನಿವಾಸ ಹಾಗೂ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಬಿಹಾರದಲ್ಲಾದ ಅಪಘಾತಕ್ಕೆ ಆರು ಮಂದಿ ಸಾವು ಇನ್ನು ಬಿಹಾರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು ವೇಗವಾಗಿ ಬಂದ […]
ತೆಲಂಗಾಣ: ವಲಸೆ ಕೂಲಿಗರನ್ನು ಸಾಗಿಸಲಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಅಂದುಗುಲ ಕೊತ್ತಪಾಲೆಂ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟವರನ್ನು ಕರ್ನೂಲ್ನಿಂದ ಕರೆತರಲಾಗುತ್ತಿದ್ದ ವಲಸೆ ಕೂಲಿ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಮೃತರನ್ನು ಭೀಮಯ್ಯ (50), ಶ್ರೀನಿವಾಸ ಹಾಗೂ ಆಟೋ ಚಾಲಕ ಎಂದು ಗುರುತಿಸಲಾಗಿದೆ.
ಬಿಹಾರದಲ್ಲಾದ ಅಪಘಾತಕ್ಕೆ ಆರು ಮಂದಿ ಸಾವು ಇನ್ನು ಬಿಹಾರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು ವೇಗವಾಗಿ ಬಂದ ಕಾರು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಹಾಗೂ ಘಟನೆಯಲ್ಲಿ ಮೂರು ಜನರಿಗೆ ಗಾಯಗಳಾಗಿವೆ. ಕತಿಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕುರ್ಷೇಲಾದ ಹೆಲ್ತ್ ಕೇರ್ ಸೆಂಟರ್ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೈಕ್ಗಳ ನಡುವೆ ಡಿಕ್ಕಿ, ಮೂವರ ದುರ್ಮರಣ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಶರೇವಾಡ ಬಳಿ 2 ಬೈಕ್ಗಳ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶರೇವಾಡ ಟೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೈಕ್ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಯಲ್ಲಿ ತಾಯಿ, ಮಗುವಿನ ಶವ ಪತ್ತೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಆರೋಲಿ ಗ್ರಾಮದ ಬಾವಿಯೊಂದರಲ್ಲಿ ತಾಯಿ, ಮಗುವಿನ ಶವ ಪತ್ತೆಯಾಗಿದೆ. 14 ತಿಂಗಳ ಉದಯ್, ಹನುಮಂತಿ(29) ಎಂಬ ಮಹಿಳೆಯ ಶವ ಪತ್ತೆಯಾಗಿದೆ. ಪತಿ ಹುಲಿಗೆಯ್ಯ ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗಂಡನ ಕಿರುಕುಳ ತಾಳಲಾಗದೆ ಮಗು ಜತೆ ಮನೆಯಿಂದ ತೆರಳಿದ್ದ ಹನುಮಂತಿ ಮಗುವಿನ ಜತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Chikkaballapura Gelatin Blast | ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆ
Published On - 9:39 am, Tue, 23 February 21