ಉತ್ತರ ಕರ್ನಾಟಕ ಸೇರಿದಂತೆ ಅತಿವೃಷ್ಟಿಯಿಂದ ಹಾನಿಗೀಡಾದ ಅಷ್ಟೂ ರಸ್ತೆಗಳ ನಿರ್ಮಾಣ ಪೂರ್ಣ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ
ಉತ್ತರ ಕರ್ನಾಟಕವನ್ನೂ ಒಳಗೊಂಡಂತೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ಕೆ.ಎಸ್ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಉತ್ತರ ಕರ್ನಾಟಕ ಒಳಗೊಂಡಂತೆ ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಅಷ್ಟೂ ರಸ್ತೆಗಳ ನಿರ್ಮಾಣ ಮಾಡಲಾಗಿದೆ. ಸೇತುವೆಗಳ ಪುನರ್ ರಚನೆ, ನವೀಕರಣ ಮತ್ತು ಪುನರ್ ನಿರ್ಮಾಣಕ್ಕಾಗಿ ₹1586.50 ಕೋಟಿಗಳನ್ನು ಹಂಚಿಕೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ನಿರ್ಮಾಣ ಮಾಡಲಾಗಿದೆ. ರಸ್ತೆ, ಸೇತುವೆಗಳ ನಿರ್ಮಾಣಕ್ಕೆ 1,586.50 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ₹838.50 ಕೋಟಿಯ 6,258 ಕಾಮಗಾರಿಗಳನ್ನು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಕೆಲಸ ರಾಜ್ಯ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ವತಿಯಿಂದ 419 ಕಾಮಗಾರಿ ಹಾಗೂ 219.83 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿದೆ. 527.17 ಕೋಟಿ ವೆಚ್ಚದಲ್ಲಿ 2,461 ಕಾಮಗಾರಿ ಮಾಡಲಾಗುತ್ತಿದೆ. ಗ್ರಾಮೀಣ ಮೂಲಸೌಕರ್ಯ ಆಭಿವೃದ್ಧಿ ನಿಯಮಿತದಿಂದ ಕೆಲಸ ನಡೆಯುತ್ತಿದೆ. ಕಾಮಗಾರಿಗಳ ಪ್ರಗತಿ ಆಧರಿಸಿ ಉಳಿದ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ನನಗೂ ಯಡಿಯೂರಪ್ಪಗೂ ಆಗಲ್ಲ ಎಂದೇ ಬರೆದುಕೊಳ್ಳಿ, ಕಟ್ಟುಕಥೆ ಹೇಳುವ ಸಿದ್ದರಾಮಯ್ಯಗೆ ಪದ್ಮಶ್ರೀ ಕೊಡಿ: ಕೆ.ಎಸ್.ಈಶ್ವರಪ್ಪ ಆಡಳಿತ ಪಕ್ಷ ಬಿಜೆಪಿಯ ಆಂತರಿಕ ಕಿತ್ತಾಟದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮದೇ ಶೈಲಿಯಲ್ಲಿ ಮಾತನಾಡಿ, ಪತ್ರಕರ್ತರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕತ್ತು ಕೊಯ್ದರೂ ನಾನು ಪಕ್ಷದ ವಿರುದ್ಧ ಹೋಗುವುದಿಲ್ಲ. ನನ್ನ ಇಲಾಖೆಯ ಸಮಸ್ಯೆಯನ್ನ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ ಹಾಗೂ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದೆ. ಅದನ್ನು ದೂರು ಎಂದುಕೊಂಡಿದ್ದೇ ತಪ್ಪು. ದೂರು ನೀಡುವುದಕ್ಕೂ, ಮಾಹಿತಿ ನೀಡುವುದಕ್ಕೂ ವ್ಯತ್ಯಾಸ ಇದೆ ಎನ್ನುವುದು ಪತ್ರಕರ್ತರಿಗಾದರೂ ಗೊತ್ತಾಗಲಿ. ಇಷ್ಟಕ್ಕೂ ನಮ್ಮ ನಾಯಕರ ಭೇಟಿಯಾಗಲು ಯಾರ ಅನುಮತಿ ಬೇಕು? ನಾನೂ- ಯಡಿಯೂರಪ್ಪ ದಿನಾ ಜಗಳ ಆಡ್ತೀವಿ ಅಂತ ಬೇಕಿದ್ದರೆ ಬರೆದುಕೊಳ್ಳಿ ಎನ್ನುವ ಮೂಲಕ ಆಂತರಿಕ ಕಲಹದ ಬಗ್ಗೆ ತೇಪೆ ಹಚ್ಚುವ ಪ್ರಯತ್ನ ನಡೆಸಿದ್ದಾರೆ. ಪಕ್ಷ ನಾಯಕ ಸಿದ್ದರಾಮಯ್ಯ ಕಟ್ಟುಕಥೆ ಹೇಳುತ್ತಿದ್ದಾರೆ. ಕಥೆ ಕಟ್ಟುವುದರಲ್ಲಿ ಅವರಿಗೆ ಪದ್ಮಶ್ರೀ ಕೊಡಬೇಕು. ಸಿದ್ದರಾಮಯ್ಯಗೆ ಬೇರೆ ಉದ್ಯೋಗ ಇಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಒಟ್ಟಿಗೆ ವೇದಿಕೆ ಏರಿದರೂ ಮಾತನಾಡಿಕೊಳ್ಳದ ಸಿಎಂ ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ
ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ
Published On - 12:34 pm, Wed, 7 April 21