AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ

ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

Karnataka Rains: ಮಳೆಯಿಂದ ಪ್ರತಿಷ್ಠಿತ ವಿಲ್ಲಾಗಳು ಜಲಾವೃತ, ನೀರಿನಲ್ಲಿ ಸಿಲುಕಿದ ಬಸ್, ಶಿಥಿಲ ಶಾಲಾ ಕಟ್ಟಡ ಬಳಸದಿರಲು ಸೂಚನೆ
ಕರ್ನಾಟಕದಲ್ಲಿ ಸತತ ಮಳೆ ಮುಂದುವರಿದಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 19, 2021 | 11:30 PM

ಬೆಂಗಳೂರು: ಭಾರಿ ಮಳೆಯಿಂದಾಗಿ ದೇವನಹಳ್ಳಿ ಸುತ್ತಮುತ್ತಲ ಪ್ರತಿಷ್ಠಿತ ವಿಲ್ಲಾಗಳು ಜಲಾವೃತಗೊಂಡಿವೆ. ವಿಲ್ಲಾ, ಫ್ಲ್ಯಾಟ್​​ಗಳಿಗೆ ತೆರಳಲು ಸಾಧ್ಯವಾಗದೆ ನಿವಾಸಿಗಳ ಪರದಾಡುತ್ತಿದ್ದಾರೆ. ಹಿರಾನಂದನಿ ವಿಲ್ಲಾ, ಫ್ಲ್ಯಾಟ್​ಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಒತ್ತುವರಿ ನೀರು ಕಟ್ಟಡಕ್ಕೆ ನುಗ್ಗಿ ಅವಾಂತರವಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 15 ಅಡಿಗಳಿದ್ದ ರಾಜಕಾಲುವೆಯನ್ನು ಮುಚ್ಚಿ 8 ಅಡಿಗಳ ಚರಂಡಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಲುವೆ ಮುಚ್ಚಿದ ಹಿನ್ನೆಲೆ ಇದೀಗ ನೀರು ನಿಂತು ಜನರು ಪರದಾಡುವಂತಾಗಿದೆ.

ಅಂಡರ್​ಪಾಸ್​ ನೀರಿನಲ್ಲಿ ನಿಂತ ಬಸ್ ಹಾವೇರಿ ಜಿಲ್ಲೆ ರಾಣೆಬೆನ್ನೂರು ಬಳಿಯಿರುವ ದೇವರಗುಡ್ಡ ರೈಲ್ವೆ ಅಂಡರ್​​ಪಾಸ್​​ನಲ್ಲಿ ನಿಂತಿದ್ದ ನೀರಿನಲ್ಲಿ ಬಸ್​ ಸಿಲುಕಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬಸ್​​ನಲ್ಲಿದ್ದವರನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಣಿ ಮೂಲಕ ಪ್ರಯಾಣಿಕರು, ಡ್ರೈವರ್, ಕಂಡಕ್ಟರ್​ರನ್ನು ರಕ್ಷಿಸಿದರು. ಈ ಬಸ್ ರಾಣೆಬೆನ್ನೂರಿನಿಂದ ಕನವಳ್ಳಿಗೆ ಹೊರಟಿತ್ತು. ರಾಣೆಬೆನ್ನೂರು ನಗರ​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ. ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿರುವುದರಿಂದ ಪ್ರತಿಬಾರಿ ಮಳೆ ಬಂದಾಗಲೂ ಅಂಡರ್​ಬ್ರಿಡ್ಜ್​ನಲ್ಲಿ ನೀರು ತುಂಬಿಕೊಂಡು ಜನರು ಸಂಕಷ್ಟ ಎದುರಿಸುತ್ತಾರೆ.

ಶಿಥಿಲ ಕಟ್ಟಡ ಬಳಸದಂತೆ ಸೂಚನೆ ಬೆಂಗಳೂರು: ರಾಜ್ಯಾದ್ಯಂತ ಸತತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಗೊಂಡ ಕಟ್ಟಡಗಳನ್ನು ಬಳಸಬಾರದು ಎಂದು ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಬಿಇಒಗಳಿಗೆ ಸುತ್ತೋಲೆ ಮೂಲಕ ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣ ಅನುದಾನ ಅಥವಾ ಇತರ ಅನುದಾನಗಳಡಿ ಕಟ್ಟಡಗಳ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಇದನ್ನೂ ಓದಿ: ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್​ಡಿಆರ್​ಎಫ್ ಸಭೆಯಲ್ಲಿ ಸೂಚನೆ

Published On - 11:25 pm, Fri, 19 November 21

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ