AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓಗೆ ರಾಜ್ಯ ಸರ್ಕಾರ ಶಾಕ್​ ಕೊಟ್ಟಿದೆ, ಪಿಡಿಓ ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಆದೇಶಿಸಿದ್ದಾರೆ. ಸರ್ಕಾರಿ ನೌಕರನಾಗಿ ನಿಯಮಗಳನ್ನ ಉಲ್ಲಂಘಿಸಿದ ಹಿನ್ನಲೆ ಶಿಸ್ತು ಕ್ರಮ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು
ಪಿಡಿಓ ಅಮಾನತು
ಭೀಮೇಶ್​​ ಪೂಜಾರ್
| Edited By: |

Updated on:Oct 17, 2025 | 6:20 PM

Share

ರಾಯಚೂರು, ಅಕ್ಟೋಬರ್​ 17: ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊರಟಿರೋ ಸರ್ಕಾರ, ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ RSS ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓರನ್ನು ಅಮಾನತು ಮಾಡಲಾಗಿದೆ. ಪಿಡಿಓ ಮತ್ತು ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್​ ರ ಆಪ್ತ ಸಹಾಯಕನಾಗಿದ್ದ ಪ್ರವೀಣ್​ ಕುಮಾರ್​ ಕೆ.ಪಿ.ಯನ್ನು ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಆದೇಶಿಸಿದ್ದಾರೆ.

ಆದೇಶ ಪ್ರತಿಯಲ್ಲಿ ಏನಿದೆ?

Order Letter

ಡಾ.ಅರುಂಧತಿ ಚಂದ್ರಶೇಖರ್ ಆದೇಶ

ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಪ್ರವೀಣ್​ ಭಾಗವಹಿಸಿದ್ದರು. ಇದರಿಂದಾಗಿ ಪ್ರವೀಣ್​, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನು ಎಲ್ಲಾ ಕಾಲದಲ್ಲಿಯೂ ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು ಮತ್ತು ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು ಹಾಗೂ ಸರ್ಕಾರಿ ನೌಕರನಿಗೆ ತಕ್ಕದಲ್ಲದನ್ನು ಮಾಡಬಾರದೆಂಬ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯ ಚಟುವಟಿಕೆಗಳಿಗೆ ಬ್ರೇಕ್, ಸಂಘದ ಹೆಸರು ಉಲ್ಲೇಖಿಸದೇ ಜಾಣ ನಡೆ

ಪ್ರತಿಯೊಬ್ಬ ಸರ್ಕಾರಿ ನೌಕರನು ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು ಮತ್ತು ರಾಜಕೀಯವಾಗಿ ಘಟಸವಾಗಿರಬೇಕು ಹಾಗೂ ತನ್ನ ಪದೀಯ ಕರ್ತವ್ಯ ನಿರ್ವಹಣೆಯ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರೆ ಆಮಿಷಗಳಿಗೆ ಒಳಗಾಗತಕ್ಕದ್ದಲ್ಲವೆಂಬ ನಿಯಮ ಮೀರಿದ್ದಾರೆ. ಹೀಗಾಗಿ ಪ್ರವೀಣ್​ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕೇಳಿ ಬಂದಿರುವ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:15 pm, Fri, 17 October 25

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?