AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

ಇಂದು (ಜೂನ್ 6) ಬೆಳ್ಳಂಬೆಳಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದರು.

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ
ರೋಹಿಣಿ ಸಿಂಧೂರಿ
TV9 Web
| Updated By: sandhya thejappa|

Updated on:Jun 06, 2021 | 12:09 PM

Share

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್​ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರ ಬಿದ್ದ ಬಿನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಆಗಮಿಸಿದ್ದಾರೆ.

ಸಿಎಂ ನಿವಾಸ ಕಾವೇರಿಗೆ ಇಂದು (ಜೂನ್ 6) ಬೆಳ್ಳಂಬೆಳಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದರು. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೋಹಿಣಿ ಮನವಿಯನ್ನು ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ವರ್ಗಾವಣೆ ತಡೆ ಅಸಾಧ್ಯ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮನವಿಯನ್ನು ಒಪ್ಪದ ಕಾರಣ ನಿರಾಸೆಯಿಂದ ರೋಹಿಣಿ ಸಿಂಧೂರಿ ವಾಪಸಾಗಿದ್ದಾರೆ. ಸಿಎಂ ಭೇಟಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ್ದ ಮೈಸೂರು ಜಿಲ್ಲಾಧಿಕಾರಿ ಸಿಂಧೂರಿ ಸುಮಾರು ಅರ್ಧ ಗಂಟೆ ಸಿಎಂ ನಿವಾಸದಲ್ಲಿ ಇದ್ದರು. ಐಎಎಸ್ ಅಧಿಕಾರಿಗಳ ಕಿತ್ತಾಟ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಗೆ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯನ್ನು ರದ್ದು ಮಾಡುವಂತೆ ರೋಹಿಣಿ ಕೇಳಿದರು. ಒಮ್ಮೆ ವರ್ಗಾವಣೆಯಾದ ಬಳಿಕ ಅದು ಸಾಧ್ಯವಾಗುವುದಿಲ್ಲ. ಹೀಗಾಗಿ ರಿಪೋರ್ಟ್ ಮಾಡಿಕೊಳ್ಳುವಂತೆ ರೋಹಿಣಿ ಸಿಂಧೂರಿಯವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ

Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿ; ಅವರ ವರ್ಗಾವಣೆಗೆ ಪಿತೂರಿ ನಡೀತಿದೆ: ವಾಟಾಳ್ ನಾಗರಾಜ್ ಆಕ್ರೋಶ

(Rohini Sindhuri has visited the chief minister house and requested the transfer be withheld)

Published On - 10:32 am, Sun, 6 June 21