AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಹಂತಕರಿಗೆ ರಾಜಾಥಿತ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 35 ಸಿಬ್ಬಂದಿಗಳು ಅಮಾನತು

ಹಿಂದೂ ಕಾರ್ಯಕರ್ತ ಹರ್ಷ ಹಂತಕರು ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ್ದ ಬಗ್ಗೆ ಟೀಕೆ ವ್ಯಕ್ತವಾದ ಬೆನ್ನಲ್ಲೆ ಗೃಹಸಚಿವ ಅರಗ ಜ್ಞಾನೇಂದ್ರ ಅವರು ಕೇಂದ್ರ ಕಾರಾಗೃಹಕ್ಕೆ ದಿಡೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ

ಹರ್ಷ ಹಂತಕರಿಗೆ ರಾಜಾಥಿತ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 35 ಸಿಬ್ಬಂದಿಗಳು ಅಮಾನತು
ಅರಗ ಜ್ಞಾನೇಂದ್ರ
TV9 Web
| Edited By: Rakesh Nayak Manchi|

Updated on:Jul 12, 2022 | 1:22 PM

Share

ಬೆಂಗಳೂರು: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಮಾಡಿದ ಆರೋಪಿಗಳು ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿ ಟೀಕೆ ವ್ಯಕ್ತವಾದ ಬೆನ್ನಲ್ಲೆ ಗೃಹಸಚಿವ ಅರಗ ಜ್ಞಾನೇಂದ್ರ (Araga Jnanendra) ಅವರು ಕೇಂದ್ರ ಕಾರಾಗೃಹಕ್ಕೆ ದಿಡೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹರ್ಷ ಕೊಲೆ ಮಾಡಿದ ಆರೋಪಿಗಳ ಮೊಬೈಲ್ ಬಳಕೆ ಹಿನ್ನೆಲೆ ವಸ್ತು ಸ್ಥಿತಿ‌ ಅರಿಯಲು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ಗೃಹಸಚಿವರು, ಹರ್ಷ ಆರೋಪಿಗಳ ಬ್ಯಾರೆಕ್ ಕಡೆ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮೊಬೈಲ್ ಸಿಕ್ಕಿದ್ದು ಹೇಗೆ ಅಂತ ಖುದ್ದಾಗಿ ಪರಿಶೀಲನಗೆ ಇಳಿದ ಗೃಹ ಸಚಿವರು, 35 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರು; ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ವರದಿ ಹಿನ್ನೆಲೆ ಕಾರಾಗೃಹದ ಕೆಲವು ಹೈಸೆಕ್ಯೂರಿಟಿ ಬ್ಯಾರಕ್​ಗಳ ಪರಿಶೀಲನೆ ನಡೆಸಿದ ಗೃಹಸಚಿವರು ಜೈಲಿನಲ್ಲಿ ಮೊಬೈಲ್​, ನಿಷೇಧಿತ ವಸ್ತು ಬಳಕೆ ಮಾಡಲಾಗುತ್ತಿದೆಯೇ? ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ಕುರಿತು ತಪಾಸಣೆ ನಡೆಸಿದರು.

ಅಧಿಕಾರಿಗಳ ಧನದಾಹಕ್ಕೆ ಗೃಹಸಚಿವರ ಕಿಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿ​ನಲ್ಲಿ ಅಕ್ರಮದ ಘಾಟು ಪದೇಪದೇ ಕೇಳಿಬರುತ್ತಿರುತ್ತದೆ. ಇದೀಗ ಜೈಲಿನಲ್ಲಿ ಕೈದಿಗಳನ್ನು ನೋಡಲು ಬರುತ್ತಿರುವವರಿಂದ ಅಧಿಕಾರಿಗಳು ಹಣ ವಸೂಲಿ ಮಾಡುತ್ತಿರುವ ವಿಚಾರ ತಿಳಿದುಬಂದಿದೆ. ಅದರಂತೆ ಜೈಲು ಅಧಿಕಾರಿಗಳ ಧನದಾಹಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಕಿಡಿಯಾಗಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜೈಲಿನ 35 ಸಿಬ್ಬಂದಿಗಳು ಅಮಾನತು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ, ಮಾದಕ ವಸ್ತು ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ 35 ಸಿಬ್ಬಂದಿ ಅಮಾನತುಗೊಳಿಸಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಆದೇಶ ಹೊರಡಿಸಿದ್ದಾರೆ. ಜೈಲಿನ ಮೇಲಾಧಿಕಾರಿಗಳ ಹೆಸರು ಕೂಡ ಅಮಾನತು ಪಟ್ಟಿಯಲ್ಲಿದೆ. ಇದೇ ವೇಳೆ ಹಣದಾಸೆಗೆ ವೃತ್ತಿ ದ್ರೋಹ ಮಾಡಿದ ಸಿಬ್ಬಂದಿ ಕಿಕೌಟ್ ಮಾಡಲಾಗಿದೆ.

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಲ್ಲಿ ಆರೋಪಿಗಳಿಗೆ ರಾಜಾಥಿತ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದೆ ಆರೋಪಿಗಳು ಮೊಬೈಲ್​ನಲ್ಲಿ ಮನೆಯವರೊಂದಿಗೆ ಮೊಬೈಲ್ ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿದ್ದ ಬಗ್ಗೆ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ಇದನ್ನೂ ಓದಿ: ಶಾಲೆಗೆ ಹೋಗಲು ಇಷ್ಟವಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಜೈಲಿನಲ್ಲಿ ಹರ್ಷ ಹಂತಕರು ಮೊಬೈಲ್ ಬಳಕೆ ಮಾಡುತ್ತಿರುವ ಫೋಟೋಗಳು ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡಿರುವ ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಟೀಕಿಸಲು ಪ್ರಾರಂಭಿಸಿದ್ದವು. ಇದೇ ವೇಳೆ ಹರ್ಷ ಸಹೋದರಿ ಸೇರಿದಂತೆ ಕುಟುಂಬಸ್ಥರು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದರು.

ಜೈಲಿನಲ್ಲಿ ಆರೋಪಿಗಳಿಗೆ ರಾಜಾಥಿತ್ಯ ನೀಡಿರುವ ಬಗ್ಗೆ ಗೃಹಸಚಿವರನ್ನು ಭೇಟಿಯಾಗಲು ಮುಂದಾದ ಹರ್ಷ ಸಹೋದರಿ, ಗೃಹಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ತನ್ನನ್ನು ಬೈದಿದ್ದಾರೆ ಎಂದು ಆರೋಪಿಸಿದ್ದರು. ಈ ಎಲ್ಲಾ ಬೆಳವಣಿಗಳ ನಡುವೆ ಗೃಹಸಚಿವರು ದಿಡೀರ್ ಆಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹಾಡಹಗಲೇ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

Published On - 12:09 pm, Tue, 12 July 22

Follow Us
TV9 Web
TV9 Web

TV9 Kannada

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ