RRB Recruitment 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 6,565 ತಂತ್ರಜ್ಞ ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿ (RRB) ತಂತ್ರಜ್ಞ ಹುದ್ದೆಗಳಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 6,565 ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಜೂನ್ 30 ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. SSLC ಜೊತೆಗೆ ITI, B.Sc ಅಥವಾ ಡಿಪ್ಲೋಮಾ ಮಾಡಿದವರು ಅರ್ಹರು. ಜುಲೈ 29 ಕೊನೆಯ ದಿನಾಂಕ. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

RRB Recruitment 2026: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 6,565 ತಂತ್ರಜ್ಞ ಹುದ್ದೆಗಳ ನೇಮಕಾತಿ
ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
Image Credit source: iStock

Updated on: Jun 21, 2026 | 1:02 PM

ರೈಲ್ವೆ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಸಿಹಿ ಸುದ್ದಿಯೊಂದನ್ನು ನೀಡಿದೆ. ರೈಲ್ವೆ ಇಲಾಖೆಯ ಆಶ್ರಯದಲ್ಲಿ ದೇಶಾದ್ಯಂತ ಇರುವ ಎಲ್ಲಾ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲು ಮಂಡಳಿ ಸಿದ್ಧತೆ ನಡೆಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ಅಧಿಸೂಚನೆಯನ್ನು ಜೂನ್ 30 ರಂದು ಬಿಡುಗಡೆ ಮಾಡಲಾಗುವುದು.

ಜೂನ್ 30 ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 30 ರಿಂದಲೇ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 6,565 ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ತಂತ್ರಜ್ಞ ಗ್ರೇಡ್ 1 ಸಿಗ್ನಲ್ ವಿಭಾಗದಲ್ಲಿ 323 ಹುದ್ದೆಗಳು ಲಭ್ಯವಿದ್ದು, ಉಳಿದ ಹುದ್ದೆಗಳನ್ನು ತಂತ್ರಜ್ಞ ಗ್ರೇಡ್ 3 ವಿಭಾಗದ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಇದರೊಂದಿಗೆ ಸಂಬಂಧಿತ ವಿಭಾಗದಲ್ಲಿ ಐಟಿಐ (ITI), ಬಿಎಸ್ಸಿ (B.Sc) ಅಥವಾ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ/ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಜುಲೈ 29 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ವಯೋಮಿತಿ ಮತ್ತು ಆಕರ್ಷಕ ವೇತನ ಶ್ರೇಣಿ:

ನೇಮಕಾತಿ ನಿಯಮಾವಳಿಗಳ ಪ್ರಕಾರ, ತಂತ್ರಜ್ಞ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 33 ವರ್ಷಗಳ ನಡುವೆ ಇರಬೇಕು. ಅದೇ ರೀತಿ ತಂತ್ರಜ್ಞ ಗ್ರೇಡ್ 3 ಹುದ್ದೆಗಳಿಗೆ 18 ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನವಾಗಿ ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗಳಿಗೆ ತಿಂಗಳಿಗೆ ರೂ. 29,200 ರಿಂದ ಮತ್ತು ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳಿಗೆ ತಿಂಗಳಿಗೆ ರೂ. 19,900 ರಿಂದ ಸಂಬಳ ಪ್ರಾರಂಭವಾಗುತ್ತದೆ.

ಆಯ್ಕೆ ವಿಧಾನ ಮತ್ತು ದೇಶಾದ್ಯಂತ ಇರುವ ನೇಮಕಾತಿ ವಲಯಗಳು:

ರೈಲ್ವೆ ಇಲಾಖೆಯ ಈ ಉದ್ಯೋಗಗಳಿಗೆ ಅಭ್ಯರ್ಥಿಗಳನ್ನು ಅಂತಿಮವಾಗಿ ಲಿಖಿತ ಪರೀಕ್ಷೆ (CBT) ಮತ್ತು ವೈದ್ಯಕೀಯ ಪರೀಕ್ಷೆಗಳ (Medical Examination) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗೋರಖ್ಪುರ, ಗುವಾಹಟಿ, ಜಮ್ಮು ಮತ್ತು ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ ಮತ್ತು ತಿರುವನಂತಪುರಂ ಸೇರಿದಂತೆ ದೇಶದ ಪ್ರಮುಖ ರೈಲ್ವೆ ಪ್ರದೇಶಗಳಲ್ಲಿ ಭರ್ತಿ ಮಾಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us