ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಗೋಪಾಲ್​ ಜೋಶಿ ಬಂಧನ

ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಹೋದರ ಗೋಪಾಲ್​ ಜೋಶಿ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರಿಂದ ಕೊಲ್ಲಾಪುರದಲ್ಲಿ ಬಂಧಿಸಲಾಗಿದೆ. ಸದ್ಯ ಈ ಬಗ್ಗೆ ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧ ಇಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.​

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಗೋಪಾಲ್​ ಜೋಶಿ ಬಂಧನ
ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಗೋಪಾಲ್​ ಜೋಶಿ ಬಂಧನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 19, 2024 | 5:17 PM

ಬೆಂಗಳೂರು, ಅಕ್ಟೋಬರ್​ 19: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಸಹೋದರ ಗೋಪಾಲ್​ ಜೋಶಿ ಅನ್ನು ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.

ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್​ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ನನಗೆ ಯಾರೂ ಸಹೋದರಿಯರು ಇಲ್ಲ: ವಂಚನೆ ಪ್ರಕರಣಕ್ಕೆ ಸಚಿವ ಜೋಶಿ ಸ್ಪಷ್ಟನೆ

ಸುನೀತಾ ಚೌಹಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಗೋಪಾಲ್‌ ಜೋಶಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಹಾಜರಾಗುವಂತೆ ಸೂಚನೆ ಹಿನ್ನಲೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಗೆ ಸುನೀತಾ ಚೌಹಾಣ್​ ಆಗಮಿಸಿದ್ದರು. ಬಳಿಕ ಅವರನ್ನು ಸ್ಥಳ ಮಹಜರಿಗಾಗಿ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಎಸಿಪಿ ಚಂದನ್​ರೊಂದಿಗೆ ಅಶೋಕನಗರ ಪೊಲೀಸರ ತಂಡದಿಂದ ಗೋಪಾಲ್ ಜೋಶಿ ನಿವಾಸದಲ್ಲಿ ಪಂಚನಾಮೆ ಮಾಡಲಾಗಿದೆ.

ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧ ಇಲ್ಲ: ಪ್ರಲ್ಹಾದ್ ಜೋಶಿ

ಅತ್ತ ಸಹೋದರನ ಬಂಧನವಾಗುತ್ತಿದ್ದಂತೆ ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧ ಇಲ್ಲ. ನಮ್ಮಿಬ್ಬರ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿವೆ. ಸಹೋದರ ಗೋಪಾಲ್ ಜೋಶಿ ಜೊತೆ ಯಾವ ವ್ಯವಹಾರವೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಜೋಶಿ ವಾಗ್ದಾಳಿ: ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಕಳೆದ 35 ವರ್ಷಗಳಿಂದ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ನನಗೆ ದೂರುದಾರರ ಪರಿಚಯವೂ ಇಲ್ಲ ಎಂದು ಹೇಳಿದ್ದಾರೆ. ಗೋಪಾಲ್ ಜೋಶಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಲಿ. ಕಾನೂನು ತನ್ನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:06 pm, Sat, 19 October 24

ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ