ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್, ಯಾವೆಲ್ಲ ದಾಖಲೆಗಳು ಬೇಕು?

ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ(Gruha Lakshmi Scheme) ಬಾಗಿಲು ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ.

ಮನೆ ಯಜಮಾನಿಗೆ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್, ಯಾವೆಲ್ಲ ದಾಖಲೆಗಳು ಬೇಕು?
ಗೃಹ ಲಕ್ಷ್ಮಿ ಯೋಜನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jul 06, 2023 | 7:03 AM

ಬೆಂಗಳೂರು: ಅಂತು ಇಂತು ಮನೆ ಯಜಮಾನಿಗೆ 2000 ರೂ. ನೀಡುವ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme) ಜಾರಿಗೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 14 ರಿಂದ ಗೃಹ ಲಕ್ಷ್ಮಿ ಜಾರಿಗೆ ರಾಜ್ಯ ಸರ್ಕಾರದ ಪ್ಲ್ಯಾನ್ ಮಾಡಿಕೊಂಡಿದ್ದು, ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಗೃಹಲಕ್ಷ್ಮಿ ಯೋಜನೆ ಲಾಂಚ್ ಕಾರ್ಯಕ್ರಮ ನಡೆಸಲು ಚಿಂತನೆಗಳು ನಡೆದಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಮ್ಮುಖದಲ್ಲಿ 10 ರಿಂದ 15 ಮನೆ ಯಜಮಾನಿಯನ್ನು ಗುರುತಿಸಿ ಸಾಂಕೇತಿಕವಾಗಿ ಹಣ ವರ್ಗಾವಣೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಅರ್ಜಿ ಸಲ್ಲಿಕೆಗೆ ಅನುಸಾರವಾಗಿ ಫಲಾನುಭವಿಗಳಿಗೆ ನಿರಂತರ ಹಣ ವರ್ಗಾವಣೆ ಮಾಡುವ ಬಗ್ಗೆಯೂ ಯೊಜನೆ ಹಾಕಿದ್ದು, ಇದಕ್ಕಾಗಿ ವಿಶೇಷ ಅಪ್ ಹಾಗೂ ಇನ್ನಿತರ ಡಿಜಿಟಲ್ ಪೋರ್ಟಲ್ ಗಳನ್ನು ಸಿದ್ದಪಡಿಸಲಾಗಿದೆ.

ಇದನ್ನೂ ಓದಿ: Gruha Lakshmi Scheme: ಎಚ್ಚರ ಎಚ್ಚರ…ಗೃಹಲಕ್ಷ್ಮಿ ಯೋಜನೆ ಹೆಸರಿಲ್ಲಿ ಬಂದಿವೆ ಮೂರು ನಕಲಿ ಆ್ಯಪ್​

‘ಗೃಹಲಕ್ಷ್ಮೀ’ಗಾಗಿ ಪ್ರತ್ಯೇಕ ಆ್ಯಪ್​​​ ಸಿದ್ಧಪಡಿಸಿದ ಸರ್ಕಾರ

ಗೃಹ ಲಕ್ಷ್ಮೀ ಯೋಜನೆಗೆ ಸರ್ಕಾರದಿಂದ ಪ್ರತ್ಯೇಕ ಆ್ಯಪ್ ಬಿಡುಗಡೆ ಮಾಡಲಾಗುತ್ತೆ ಎಂದು ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ. ಅದರಂತೆ ಸರ್ವರ್ ಸಮಸ್ಯೆಗೆ ಕಡಿವಾಣ ಹಾಕಲು ಇದೀಗ ಸರ್ಕಾರವೇ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಿದ್ದು, ಅಧಿಕೃತವಾಗಿ ಬಿಡುಗಡೆ ಮಾಡುವುದೊಂದೇ ಬಾಕಿ ಇದೆ. ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್​​​ನಲ್ಲಿ ಆ್ಯಪ್ ಲಭ್ಯವಾಗಲಿದೆ. ಇನ್ನೂ ಸೇವಾಸಿಂಧು ವೆಬ್​​​ಸೈಟ್​​ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ.

‘ಗೃಹಲಕ್ಷ್ಮೀ’ಯ 2,000ಕ್ಕೆ ಏನು ಮಾಡಬೇಕು?

BPL, APL, ಅಂತ್ಯೋದಯ ಕಾರ್ಡ್​ನಲ್ಲಿ ಮನೆಯೊಡತಿಯ ಹೆಸರಿರಬೇಕು. ಒಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಯೋಜನೆ ಅನ್ವಯವಾಗಲಿದೆ. ಯಜಮಾನಿಯ ಮೊಬೈಲ್ ನಂಬರ್ ಕಡ್ಡಾಯವಾಗಿ ಬೇಕಾಗುತ್ತದೆ. ಬೆಂಗಳೂರು ಒನ್ ಅಥವಾ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಖಾತೆಯೊಂದಿಗೆ ಮೊಬೈಲ್ ನಂ. ಲಿಂಕ್ ಆಗಿರಬೇಕು. ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಮನೆ ಒಡತಿಯ ಯಜಮಾನ ಜಿಎಸ್​ಟಿ ರಿರ್ಟನ್ಸ್ ಮಾಡಿರಬಾರದು ಎಂಬ ಮಾನದಂಡಗಳನ್ನು ಅನುಸರಿಸಲಾಗಿದೆ.

ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಜನ ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಗಿಬಿದ್ದ ಪರಿಣಾಮ 3-4 ದಿನ ಸರ್ವಸ್ ಸಮಸ್ಯೆಯಿಂದ ಜನ ಪರದಾಡುವಂತಾಯ್ತು. ಇದನ್ನ ಮನಗಂಡ ಸರ್ಕಾರ, ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆಯಾಗಬಾರದು ಎಂದು ಪ್ಲ್ಯಾನ್ ಮಾಡಿದೆ. ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಪ್ರತ್ಯೇಕವಾಗಿ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಇದೇ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆ ವಿಳಂಬವಾಗ್ತಿರೋದಾಗಿ ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ