AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಗೆ ಪರೋಕ್ಷ ಅಂಕುಶ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ, ವಾದ-ಪ್ರತಿವಾದದ ವಿವರ ಇಲ್ಲಿದೆ

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪರೋಕ್ಷವಾಗಿ ನಿಷೇಧಿಸುವುದಕ್ಕೆ ಸಂಬಂಧಿಸಿದ ಸರ್ಕಾರಿ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್​ನ ಧಾರವಾಡ ಪೀಠದಲ್ಲಿ ನಡೆಯಿತು. ಉಭಯ ವಕೀಲರ ವಾದ ಆಲಿಸಿದ ಪೀಠ, ನವೆಂಬರ್ 7 ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಏನೇನು ವಾದ-ಪ್ರತಿವಾದ ನಡೆಯಿತೆಂಬ ವಿವರ ಇಲ್ಲಿದೆ.

RSS ಗೆ ಪರೋಕ್ಷ ಅಂಕುಶ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ, ವಾದ-ಪ್ರತಿವಾದದ ವಿವರ ಇಲ್ಲಿದೆ
RSS ಗೆ ಪರೋಕ್ಷ ಅಂಕುಶ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ
Ramesha M
| Updated By: Ganapathi Sharma|

Updated on:Nov 04, 2025 | 2:30 PM

Share

ಬೆಂಗಳೂರು, ನವೆಂಬರ್ 4: ಆರ್​​ಎಸ್​ಎಸ್ (RSS) ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ (Karnataka High Court) ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ಧಾರವಾಡದ ವಿಭಾಗೀಯ ಪೀಠದಲ್ಲಿ ಮಂಗಳವಾರ ನಡೆಯಿತು. 10 ಜನಕ್ಕಿಂತ ಹೆಚ್ಚು ಜನರು ಸೇರಿಕೊಂಡರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಅಧಿಸೂಚನೆ ನಾಗರಿಕರ ಹಕ್ಕಿಗೆ ಧಕ್ಕೆ ಎಂದು ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು. ಈ ತೀರ್ಪಿನ ವಿರುದ್ಧ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಸರ್ಕಾರದ ಪರ ವಕೀಲರ ವಾದವೇನು?

ಸರ್ಕಾರದ ಸ್ವತ್ತುಗಳಿಗೆ ಹಾನಿಯಾಗಬಾರದೆಂಬ ಉದ್ದೇಶದಿಂದಲೇ ನಿರ್ಬಂಧ ವಿಧಿಸಲಾಗಿದೆ. ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯಲ್ಲಿ ಅನುಮತಿಯಿಲ್ಲದೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಹೈಕೋರ್ಟ್ ಕಟ್ಟಡ ಖಾಲಿ ಇದೆ ಎಂದು ಅಲ್ಲಿ ಕಾರ್ಯಕ್ರಮ ಮಾಡಲಾಗುವುದಿಲ್ಲ. ಅದೇ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳ ಬಳಕೆಗೂ ಅನುಮತಿ ಅಗತ್ಯ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದರು.

ಪ್ರತಿವಾದಿ ಪುನಶ್ಚೇತನ ಸೇವಾ ಸಂಸ್ಥೆ ಪರ ವಾದ ಏನು?

ಪಾರ್ಕ್, ಮೈದಾನ ಎಲ್ಲವೂ ಸರ್ಕಾರದ ಸ್ವತ್ತೆಂದು ಭಾವಿಸಬಾರದು. ಮೈದಾನದಲ್ಲಿ ಕ್ರಿಕೆಟ್ ಆಡಲೂ ಅನುಮತಿ ಬೇಕೆಂಬಂತೆ ನಿಯಮ ತರಲಾಗಿದೆ. ಪೊಲೀಸ್ ಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾ ದಂಡಾಧಿಕಾರಿಗೆ ಮಾತ್ರವಿದೆ. ಏಕಸದಸ್ಯ ಪೀಠದಲ್ಲೇ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಬಹುದಿತ್ತು, ಮೇಲ್ಮನವಿಗೆ ಅಷ್ಟೇ ಸರ್ಕಾರ ಬಂದುಕೊಂಡಿದೆ ಎಂದು ಪ್ರತಿವಾದಿ ಪುನಶ್ಚೇತನ ಸೇವಾ ಸಂಸ್ಥೆ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದಿಸಿದರು.

ಸರ್ಕಾರ ಹಾಗೂ ಪುನಶ್ಚೇತನ ಸೇವಾ ಸಂಸ್ಥೆ ಪರ ವಕೀಲರ ವಾದ ಆಲಿಸಿದ ನಂತರ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ. ನವೆಂಬರ್ 7ರಂದು ಈ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: RSS ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಪರೋಕ್ಷವಾಗಿ ಆರ್​​ಎಸ್​ಎಸ್ ಚಟಿವಟಿಕೆಗಳನ್ನು ಹತ್ತಿಕ್ಕುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರದ ಆದೇಶಕ್ಕೆ ಅಕ್ಟೋಬರ್ 28 ರಂದು ಮಧ್ಯಂತರ ತಡೆಯಾಜ್ಞೆ ನೀಡಿ ತೀರ್ಪು ಪ್ರಕಟಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Tue, 4 November 25

ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ
ಪ್ಲ್ಯಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಮುಚ್ಚುತ್ತೇವೆ: ರಾಮಲಿಂಗಾ ರೆಡ್ಡಿ
ಕಾರ್ತಿಕ ಮಾಸದ ಕೊನೆ ಸೋಮವಾರ: ಬೋಗನಂದೀಶ್ವರ ದೇವಸ್ಥಾನಕ್ಕೆ ಭಕ್ತಸಾಗರ!
ಕಾರ್ತಿಕ ಮಾಸದ ಕೊನೆ ಸೋಮವಾರ: ಬೋಗನಂದೀಶ್ವರ ದೇವಸ್ಥಾನಕ್ಕೆ ಭಕ್ತಸಾಗರ!
ಬಿಗ್ ಬಾಸ್ ಶೋನಿಂದ ಒಳ್ಳೆಯ ಸಂಬಳ ಸಿಕ್ತು: ಸಂಭಾವನೆ ಬಗ್ಗೆ ಬಾಯ್ಬಿಟ್ಟ ಸುಧಿ
ಬಿಗ್ ಬಾಸ್ ಶೋನಿಂದ ಒಳ್ಳೆಯ ಸಂಬಳ ಸಿಕ್ತು: ಸಂಭಾವನೆ ಬಗ್ಗೆ ಬಾಯ್ಬಿಟ್ಟ ಸುಧಿ