AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಿವಾದ: ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದವ ಅರೆಸ್ಟ್, ಯಾರು ಈ ದಾನಪ್ಪ?

ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿRSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಈ ಸಂಬಂಧ ರಾಜ್ಯ ರಾಜಕಾರಣದಲ್ಲಿ ಆರ್​​ ಎಸ್​ಎಸ್​ ವಿವಾದ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದವ ಸಿಕ್ಕಿಬಿದ್ದಿದ್ದಾನೆ. ಹಾಗಾದ್ರೆ, ಬಂಧಿತ ಆರೋಪಿ ಯಾರು? ಎಲ್ಲಿಯವ ಎನ್ನುವ ಮಾಹಿತಿ ಇಲ್ಲಿದೆ.

RSS ವಿವಾದ: ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದವ ಅರೆಸ್ಟ್, ಯಾರು ಈ ದಾನಪ್ಪ?
Priyank Kharge
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ|

Updated on: Oct 16, 2025 | 2:57 PM

Share

ಕಲಬುರಗಿ, (ಅಕ್ಟೋಬರ್ 16): ಸರ್ಕಾರಿ ಸ್ಥಳಗಳಲ್ಲಿ ಆರ್​​ ಎಸ್​ಎಸ್ (RSS)​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ (Solapur) ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ ​​ ನನ್ನು ಲಾತೂರ್​ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸರು ಮತ್ತು ಕಲಬುರಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್​ ನನ್ನು ಲಾತೂರ್​ ನಲ್ಲಿ ಬಂಧಿಸಿದ್ದು, ಇಂದು ರಾತ್ರಿ ದಿನೇಶನನ್ನು ಸದಾಶಿವನಗರ ಠಾಣೆಗೆ ಕರೆತರುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಪತ್ರ ಬೆನ್ನಲ್ಲೇ ಸಿಎಂ ಮಹತ್ವದ ಸೂಚನೆ: RSS ಚಟುವಟಿಕೆಗಳಿಗೆ ಬೀಳುತ್ತಾ ಬ್ರೇಕ್?

ಪ್ರಕರಣದ ಹಿನ್ನೆಲೆ

ಸರ್ಕಾರಿ ಶಾಲೆ, ಕಾಲೇಜು ಆವರಣಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ವಿವಾದ ಭುಗಿಲೆದ್ದಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿವೆ. ಕರೆ ಮಾಡಿದವರು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ. ದಿನೇಶ್ ಧಮ್ಕಿ ಹಾಕಿರುವುದನ್ನು ಸ್ವತಃ ಪ್ರಿಯಾಂಕ್ ಖರ್ಗೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ ಎಂದು ವಿಡಿಯೋ ಹಂಚಿಕೊಂಡಿದ್ದರು.

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್ ಅಶೋಕ್, ಸಿಟಿ ರವಿ, ಸುನೀಲ್ ಕುಮಾರ್ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ