AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಇಲಾಖೆಯಲ್ಲಿ ಬಡ್ತಿ ಗೋಲ್ಮಾಲ್: ಟಿವಿ9 ವರದಿ ಇಂಪ್ಯಾಕ್ಟ್; ಸಚಿವರಿಂದ ಮಹತ್ವದ ಆದೇಶ

ಸಾರಿಗೆ ಇಲಾಖೆಯಲ್ಲಿ 12 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ನಕಲಿ ದಾಖಲೆ ನೀಡಿ 46 ಸಿಬ್ಬಂದಿಗಳು ಮುಂಬಡ್ತಿ ಪಡೆಯಲು ಯತ್ನಿಸಿದ್ದಾರೆ. ಅಧಿಕಾರಿಗಳು ನಿಯಮಗಳನ್ನೇ ಬದಲಾಯಿಸಿದ್ದು, ಕೋಟಿ ಡೀಲ್ ಆರೋಪ ಕೇಳಿಬಂದಿದೆ. ಟಿವಿ9 ವರದಿ ಬೆನ್ನಲ್ಲೇ ಶೋಕಾಸ್ ನೋಟಿಸ್ ನೀಡಲು ಸಾರಿಗೆ ಸಚಿವ ಭೈರತಿ ಸುರೇಶ್ ಸೂಚಿಸಿದ್ದಾರೆ.

RTO ಇಲಾಖೆಯಲ್ಲಿ ಬಡ್ತಿ ಗೋಲ್ಮಾಲ್: ಟಿವಿ9 ವರದಿ ಇಂಪ್ಯಾಕ್ಟ್; ಸಚಿವರಿಂದ ಮಹತ್ವದ ಆದೇಶ
ಪ್ರಾತಿನಿಧಿಕ ಚಿತ್ರImage Credit source: Getty images
ಕಿರಣ್​ ಸೂರ್ಯ
| Edited By: |

Updated on: Nov 16, 2026 | 5:07 PM

Share

ಮುಖ್ಯಾಂಶಗಳು

  • ಸಾರಿಗೆ ಇಲಾಖೆಯ ಅತಿದೊಡ್ಡ ಕರ್ಮಕಾಂಡ
  • ನಕಲಿ ದಾಖಲೆ ನೀಡಿ ಮುಂಬಡ್ತಿ ಪಡೆಯಲು ಮುಂದಾದ ಸಿಬ್ಬಂದಿ
  • ಶೋಕಾಸ್ ನೋಟಿಸ್‌ ನೀಡಲು ಸಚಿವ ಭೈರತಿ ಸುರೇಶ್ ಸೂಚನೆ

ಬೆಂಗಳೂರು, ನವೆಂಬರ್​​ 16: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮುಂಬಡ್ತಿ ಪಡೆಯಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾರಿಗೆ ಇಲಾಖೆಯ ಅಕ್ರಮವನ್ನು ಟಿವಿ9 ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ನಕಲಿ ಪ್ರಮಾಣಪತ್ರ ಸಲ್ಲಿಸಿರುವ ಆರೋಪ ಎದುರಿಸುತ್ತಿರುವ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲು ಸಾರಿಗೆ ಸಚಿವ ಭೈರತಿ ಸುರೇಶ್ ಸೂಚಿಸಿದ್ದಾರೆ.

12 ಹುದ್ದೆಗಳಿಗೆ 46 ಸಿಬ್ಬಂದಿಯಿಂದ ಅರ್ಜಿ

ಸಾರಿಗೆ ಇಲಾಖೆಯಲ್ಲಿ ಒಟ್ಟು 12 ಮೋಟಾರು ವಾಹನ ನಿರೀಕ್ಷಕರ ಮುಂಬಡ್ತಿ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು, ಇಲಾಖೆಯ 46 ಸಿಬ್ಬಂದಿ ಮುಂಬಡ್ತಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ ಹಲವರು ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ ಹುದ್ದೆ ಪಡೆಯಲು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದೊಂದು ಐಎಂವಿ ಹುದ್ದೆಗೂ ಕೋಟಿ ಕೋಟಿ ರೂ ಡೀಲ್ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ.

ನಿಯಮ ಉಲ್ಲಂಘಿಸಿ ಶೈಕ್ಷಣಿಕ ದಾಖಲೆ ಸಲ್ಲಿಕೆ ಆರೋಪ

ಇನ್ನು ನಿಯಮಗಳ ಪ್ರಕಾರ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮುಂಬಡ್ತಿ ಪಡೆಯಲು ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಬಿಇ ಪದವಿ ಪಡೆದಿರಬೇಕು. ನಿಯಮಿತ ಕಾಲೇಜಿನಲ್ಲಿ ವ್ಯಾಸಂಗ ಮಾಡಿರಬೇಕು ಅಥವಾ ಮೂರು ವರ್ಷ ರಜೆ ಪಡೆದು ವಿದ್ಯಾಭ್ಯಾಸ ಮಾಡಿರಬೇಕು ಎಂಬ ಅರ್ಹತಾ ಮಾನದಂಡಗಳಿವೆ. ಆದರೆ, 46 ಸಿಬ್ಬಂದಿ ಸರ್ಕಾರಿ ಉದ್ಯೋಗದಲ್ಲಿದ್ದಾಗಲೇ ಸಂಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವುದಾಗಿ ಹೇಳಿಕೊಂಡು ಮುಂಬಡ್ತಿಗೆ ಮುಂದಾಗಿದ್ದಾರೆ. ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೈಗಾರಿಕೆ ಅಥವಾ ಕಾರ್ಖಾನೆಗಳಲ್ಲಿ ಖಾಯಂ ಉದ್ಯೋಗದಲ್ಲಿರಬೇಕೆಂಬ ನಿಯಮವಿದ್ದು, ಈ ಸಿಬ್ಬಂದಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವುದಾಗಿ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿಯಮಗಳನ್ನೇ ಬದಲಾಯಿಸಿದ ಅಧಿಕಾರಿಗಳು?

ಸಾರಿಗೆ ಇಲಾಖೆಯ ಸಿಬ್ಬಂದಿ ಉನ್ನತ ಶಿಕ್ಷಣ ಪಡೆಯಲು ಇಲಾಖೆಯ ಆಯುಕ್ತರಿಂದ ನಿರಾಕ್ಷೇಪಣಾ ಪತ್ರ (NOC) ಪಡೆಯುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ಎನ್‌ಒಸಿ ಪಡೆದಿದ್ದರೂ, ಅದನ್ನು ತಾವು ವ್ಯಾಸಂಗ ಮಾಡಿದ ಕಾಲೇಜುಗಳಿಗೆ ಸಲ್ಲಿಸದೆ ಖಾಸಗಿ ಕಂಪನಿಗಳ ಉದ್ಯೋಗಿಗಳೆಂದು ದಾಖಲೆಗಳನ್ನು ನೀಡಿರುವ ಆರೋಪ ಕೇಳಿಬಂದಿದೆ. ಇದಲ್ಲದೆ, ಆರೋಪಿತ ಸಿಬ್ಬಂದಿಗೆ ಮುಂಬಡ್ತಿ ಕಲ್ಪಿಸುವ ಉದ್ದೇಶದಿಂದ ಇಲಾಖೆಯ ನೇಮಕಾತಿ ಮತ್ತು ಸೇವಾ ನಿಯಮಗಳನ್ನೇ ಬದಲಾಯಿಸಲಾಗಿದೆ ಎಂಬ ಗಂಭೀರ ಆರೋಪವೂ ಇದೆ.

ಇದನ್ನೂ ಓದಿ: ಆರ್‌ಟಿಒ ಸಾರಿಗೆ ಇಲಾಖೆಯಲ್ಲಿ ಬಡ್ತಿ ಅಕ್ರಮ: ನಕಲಿ ದಾಖಲೆ ನೀಡಿ ಐಎಂವಿ ಪೋಸ್ಟ್ ಗಿಟ್ಟಿಸಿಕೊಳ್ಳಲು ಸಂಚು, ಕೋಟಿ ಕೋಟಿ ಡೀಲ್ ಆರೋಪ!

ಈ ಹಿಂದೆ 50 ವರ್ಷಗಳಿದ್ದ ಅರ್ಹತಾ ವಯೋಮಿತಿಯನ್ನು 55 ವರ್ಷಗಳಿಗೆ ಹೆಚ್ಚಿಸಲಾಗಿದೆ. ಡಿಪ್ಲೊಮಾ ಪೂರ್ಣಗೊಳಿಸಿದ ಬಳಿಕ ಮುಂಬಡ್ತಿ ಪಡೆಯಲು ಕನಿಷ್ಠ ಮೂರು ವರ್ಷಗಳ ಸೇವಾನುಭವ ಕಡ್ಡಾಯವಾಗಿದ್ದ ನಿಯಮವನ್ನೂ ಬದಲಾಯಿಸಿ, ಡಿಪ್ಲೊಮಾ ಪೂರ್ಣಗೊಳಿಸಿದ ತಕ್ಷಣವೇ ಮುಂಬಡ್ತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

LIVE TV

ಲೋಕಾಯುಕ್ತ ಸೇರಿ ಹಿರಿಯ ಅಧಿಕಾರಿಗಳಿಗೆ ದೂರು

ಸಾರಿಗೆ ಇಲಾಖೆಯಲ್ಲಿನ ಈ ಅಕ್ರಮದ ಬಗ್ಗೆ ಸಾಮಾಜಿಕ ಹೋರಾಟಗಾರ ಪರಶುರಾಮ ನೀಲ್ ನಾಯಕ್ ದಾಖಲೆಗಳ ಸಹಿತ ದೂರು ನೀಡಿದ್ದಾರೆ. ಲೋಕಾಯುಕ್ತ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಾರಿಗೆ ಇಲಾಖೆ ಆಯುಕ್ತರಿಗೆ ದೂರು ಸಲ್ಲಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಅಕ್ರಮದ ಕುರಿತು ಟಿವಿ9 ಇತ್ತೀಚೆಗೆ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದೀಗ ವರದಿಯ ಬೆನ್ನಲ್ಲೇ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ನಕಲಿ ಪ್ರಮಾಣಪತ್ರ ನೀಡಿದವರಿಗೆ ಮುಂಬಡ್ತಿ ನೀಡುವುದಿಲ್ಲ: ಭೈರತಿ ಸುರೇಶ್

ಈ ಕುರಿತಾಗಿ ಸಾರಿಗೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ನಕಲಿ ಪ್ರಮಾಣಪತ್ರ ನೀಡಿದವರಿಗೆ ಶೋಕಾಸ್ ನೋಟಿಸ್‌ ನೀಡಲು ಸಾರಿಗೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ನಕಲಿ ಪ್ರಮಾಣಪತ್ರ ನೀಡಿದವರಿಗೆ ಮುಂಬಡ್ತಿ ನೀಡುವುದಿಲ್ಲ. ಈಗಾಗಲೇ ಎಲ್ಲಾ ದಾಖಲೆಗಳನ್ನು ಪರಿಶೀಲನೆಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು