AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಳ; ಕಲಬುರಗಿಗೆ ಬರುವವರಿಗೆ ಆರ್​ಟಿ​ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ದೇಶದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮತ್ತು ದೇಶದಲ್ಲಿ ಮೊದಲು ಕೊರೊನಾ ಬಲಿ ಪಡೆದಿದ್ದು ಕಲಬುರಗಿಯಲ್ಲಿ. ದೇಶದಲ್ಲಿ ಎರಡನೇ ಅಲೆ ಜೋರಾಗಿದ್ದು ಮೊದಲು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಎರಡನೇ ಅಲೆ ಕೂಡಾ ಮೊದಲು ಜೋರಾಗಿದ್ದು ಕಲಬುರಗಿಯಲ್ಲಿ.

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಳ; ಕಲಬುರಗಿಗೆ ಬರುವವರಿಗೆ ಆರ್​ಟಿ​ಪಿಸಿಆರ್ ನೆಗೆಟಿವ್  ರಿಪೋರ್ಟ್ ಕಡ್ಡಾಯ
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Updated By: sandhya thejappa|

Updated on: Jun 26, 2021 | 11:22 AM

Share

ಕಲಬುರಗಿ; ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಾದರೆ, ಕಲಬುರಗಿ ಜಿಲ್ಲೆಯ ಜನರಿಗೆ ನಡುಕ ಹೆಚ್ಚಾಗುತ್ತದೆ. ಮಹಾರಾಷ್ಟ್ರದಲ್ಲಿ ಮೂರನೇ ಅಲೆ ಜೋರಾದರೆ ಜಿಲ್ಲೆಯ ಜನರಿಗೆ ಭಯ ಕಾಡುತ್ತದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ರಕರಣಗಳು ಹೆಚ್ಚಾದರೆ ಜಿಲ್ಲೆಯ ಜನರಿಗೆ ಆತಂಕ ಹೆಚ್ಚಾಗುತ್ತದೆ. ಮಹಾರಾಷ್ಟ್ರ ಮತ್ತು ಕಲಬುರಗಿಗೆ ನಂಟಿದೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಹೀಗಾಗಿ ಇಂದಿನಿಂದ (ಜೂನ್ 26) ಮಹಾರಾಷ್ಟ್ರದಿಂದ ಕಲಬುರಗಿಗೆ ಬರುವವರಿಗೆ ಆರ್​ಟಿ​ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ.

ದೇಶದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮತ್ತು ದೇಶದಲ್ಲಿ ಮೊದಲು ಕೊರೊನಾ ಬಲಿ ಪಡೆದಿದ್ದು ಕಲಬುರಗಿಯಲ್ಲಿ. ದೇಶದಲ್ಲಿ ಎರಡನೇ ಅಲೆ ಜೋರಾಗಿದ್ದು ಮೊದಲು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಎರಡನೇ ಅಲೆ ಕೂಡಾ ಮೊದಲು ಜೋರಾಗಿದ್ದು ಕಲಬುರಗಿಯಲ್ಲಿ. ಮಹಾರಾಷ್ಟ್ರದಲ್ಲಿ ಕೊರೊನಾ ಮೊದಲು ಹೆಚ್ಚಾದರೆ ರಾಜ್ಯದಲ್ಲಿ ಮೊದಲು ಹೆಚ್ಚಿನ ಪರಿಣಾಮ ಬೀರುವುದು ಕಲಬುರಗಿ ಜಿಲ್ಲೆಯ ಮೇಲೆ.

ಮಹಾರಾಷ್ಟ್ರದಲ್ಲಿ ಮೂರನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಜೊತೆಗೆ ಡೆಲ್ಟಾ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಬಿಸಿಲನಾಡು ಕಲಬುರಗಿ ಜಿಲ್ಲೆಯ ಜನರಿಗೆ ನಡುಕ ಹುಟ್ಟಿಸುತ್ತಿದೆ. ಹೀಗಾಗಿ ಜಿಲ್ಲಾಡಳಿತ ಮಹಾರಾಷ್ಟ್ರದಿಂದ ಕಲಬುರಗಿ ಬರುವವರಿಗೆ ಆರ್​ಟಿ​ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿದೆ. ಎಪ್ಪತ್ತೆರಡು ಗಂಟೆಯೊಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ರಿಪೋರ್ಟ್ ಇಲ್ಲದೇ ಬರುವವರಿಗೆ ಅವಕಾಶ ಇಲ್ಲ. ಜಿಲ್ಲೆಯ ಐದು ಕಡೆ ಚೆಕ್ ಪೋಸ್ಟ್ ಮೂಲಕ ತಪಾಸಣೆ ನಡೆಸಲಾಗುತ್ತಿದೆ.

ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹುಬ್ಬಳ್ಳಿ, ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ಅನುಮತಿ ಪಡೆದಿರುವ ಮದುವೆ ಸಮಾರಂಭಗಳನ್ನು 40 ಕ್ಕಿಂತ ಹೆಚ್ಚು ಜನರು ಸೇರದೆ ಆಯೋಜಿಸಬಹುದು. ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 5 ಜನ ಮಾತ್ರ ಭಾಗವಹಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ನೀಡಿದೆ. ಮಂಡ್ಯ, ತುಮಕೂರು, ದಕ್ಷಿಣ ಕನ್ನಡ, ಕೊಪ್ಪಳ, ರಾಮನಗರ, ಚಾಮರಾಜನಗರ, ಉತ್ತರ ಕನ್ನಡ, ಯಾದಗಿರಿ ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಾಗಿದೆ.

ಚಿಕ್ಕಬಳ್ಳಾಫುರ ಜಿಲ್ಲೆಯಾದ್ಯಂತ ಕೆಎಸ್ಆರ್​ಟಿಸಿ ಬಸ್ ಸಂಚಾರ ಇದೆ. ಜಿಲ್ಲೆಯ ಎಲ್ಲಾ ಕೆಎಸ್ಆರ್​ಟಿಸಿ ಡಿಪೋಗಳಿಂದ ಬಸ್ ಸಂಚಾರ ಇದೆ ಎಂದು ಟಿವಿ9ಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಮಾಹಿತಿ ನೀಡಿದ್ದಾರೆ. ಇಂದಿನಿಂದ ಮೈಸೂರಿನಲ್ಲಿ ಅನ್​ಲಾಕ್ ಮೊದಲ ಹಂತ ಜಾರಿಯಾಗಿದೆ. ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆ ಆದೇಶ ನೀಡಲಾಗಿದೆ. ಆದರೆ ಶನಿವಾರ, ಭಾನುವಾರ ವೀಕೆಂಡ್ ಕರ್ಫ್ಯೂ ಇರಲಿದೆ.

ಇದನ್ನೂ ಓದಿ

ಕೊವಿಡ್​ ಆತಂಕದ ಜೊತೆಗೆ ರಾಜ್ಯದಲ್ಲಿ ಅಪರೂಪದ ಎನೆಕ್ ಕಾಯಿಲೆ ಬಾಲಕನಲ್ಲಿ ಪತ್ತೆ!

ಮಾನಸಿಕ ಅಸ್ವಸ್ಥ ಯುವಕನಿಗೆ ಕಿರುಕುಳ: ದಾಬಸ್‌ಪೇಟೆ ಪೊಲೀಸರಿಂದ ಕಾಮುಕ ಶಿಕ್ಷಕ ರಂಗನಾಥ್ ಸೆರೆ

(TPCR negative report is mandatory for those coming from Maharashtra to Kalaburagi)

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು