ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ

ಸಂಸದ ಕರಡಿ ಸಂಗಣ್ಣ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ತಾಲೂಕು ಕೇಂದ್ರಗಳಲ್ಲಿ ಸಂಗಣ್ಣ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ
ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು
Follow us
TV9 Web
| Updated By: ಆಯೇಷಾ ಬಾನು

Updated on: Jul 11, 2021 | 9:57 AM

ಕೊಪ್ಪಳ: ಕನಕದಾಸ ಮೂರ್ತಿ ಪ್ರತಿಷ್ಠಾಪನೆಗೆ ಜಾಗ ಒತ್ತುವರಿ ಆರೋಪಿಸಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಡಿಸಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಂಸದ  ಕರಡಿ ಸಂಗಣ್ಣಹಾಲುಮತ ಸಮಾಜದ ಕ್ಷಮೆ ಕೇಳಬೇಕು ಎಂದು ಹಾಲುಮತ ಮಹಾಸಭಾ ಅಧ್ಯಕ್ಷ ರುದ್ರಣ್ಣ ಗುಳಗುಳಿ ಒತ್ತಾಯಿಸಿದ್ದಾರೆ.

ಸಂಸದ ಕರಡಿ ಸಂಗಣ್ಣ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾಳೆಯಿಂದ ತಾಲೂಕು ಕೇಂದ್ರಗಳಲ್ಲಿ ಸಂಗಣ್ಣ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಪತ್ರ ಬರೆದ ವಿಚಾರ ತಿಳಿದು ನಾನು ಸಂಗಣ್ಣ ಅವರಿಗೆ ಕರೆ ಮಾಡಿದ್ದೆ‌. ಆದ್ರೆ ಸಂಸದ ಕರಡಿ ಸಂಗಣ್ಣ ಕರೆಯನ್ನು ಅರ್ದಕ್ಕೆ ಕಟ್ ಮಾಡಿದ್ರು. ಸಂಗಣ್ಣ ಅವರೇ ನನಗೆ ಬರಲು ಹೇಳಿದ್ರು. ಆದ್ರೆ ಅವರು ನಮಗೆ ಭೇಟಿಯಾಗಲಿಲ್ಲ. ಮುಂದಿನ ದಿನದಲ್ಲಿ ಸಂಗಣ್ಣ ಪತ್ರ ವಾಪಸ್ ತೆಗೆದುಕೊಳ್ಳಬೇಕು. ಸಂಗಣ್ಣ ಕರಡಿ ಕನಕ ಭಕ್ತರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಸೋಮವಾರದಿಂದ ಪ್ರತಿ ತಾಲೂಕ ಕೇಂದ್ರಗಳಲ್ಲಿ ಸಂಗಣ್ಣ ಕರಡಿ ವಿರುದ್ದ ಪ್ರತಿಭಟನೆ ಮಾಡಲಾಗವುದು. ಪ್ರತಿಭಟನೆ ಮಾಡಿ ಪ್ರಧಾನಿಗೆ ಮನವಿ ಕೊಡುತ್ತೇವೆ. ಒಂದು ಸಮಾಜದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೆ. ಆದ್ರೆ ಅವರು ನನಗೆ ಅವಮಾನ ಮಾಡಿದ್ದಾರೆ. ಅವರ ಅಪ್ರಭುದ್ದ ವರ್ತನೆ ಇಂದ ಇಡೀ ಸಮಾಜಕ್ಕೆ ಅಪಮಾನ ಮಾಡಿದ್ದಾರೆಂದ ರುದ್ರಣ್ಣ ಹೇಳಿದ್ರು.

ಕೊಪ್ಪಳ ಬಸ್ ನಿಲ್ದಾಣದ ಮುಂದಿರುವ ಕನಕದಾಸ ವೃತ್ತದ ಸ್ಥಳದಲ್ಲಿದ್ದ ಕಾಂಪ್ಲೆಕ್ಸ್, ಕಟ್ಟೆಯನ್ನು ಕೆಡವಿ ಅಲ್ಲಿ ಕನಕದಾಸ ಮೂರ್ತಿ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಹೀಗಾಗಿ ಇದರ ನಿರ್ಮಾಣಕ್ಕೆ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದರು. ಹಾಗೂ ಈ ಬಗ್ಗೆ ಕೊಪ್ಪಳ ಡಿಸಿಗೆ ಪತ್ರ ಬರೆದಿದ್ದರು.

1988ರಲ್ಲಿ ಆಗಿನ ಸಾರಿಗೆ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸ ವೃತ್ತಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆದ್ರೆ ಇತ್ತೀಚೆಗೆ ಬಹುಕೋಟಿ ವೆಚ್ಚದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದೇ ಸ್ಥಳದಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಯೋಜನೆ ಮಾಡಿಕೊಳ್ಳಲಾಗಿತ್ತು. ಅದರಂತೆಯೇ ವೃತ್ತ ನಿರ್ಮಾಣಕ್ಕೆ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆ ತೆರವು ಮಾಡಲಾಯಿತು. ವಾಣಿಜ್ಯಮಳಿಗೆ ಜಾಗ ಹೆಚ್ಚುವರಿಯಾಗಿ ಬಳಸಿ ಕನಕದಾಸ ಮೂರ್ತಿ ಪ್ರತಿಷ್ಠಾಪಿಸಿ ವೃತ್ತ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಜಾಗ ಬಳಕೆಗೆ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರ ಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಕರಡಿ ಸಂಗಣ್ಣ ಪತ್ರ ಬರೆದಿದ್ದಾರೆ. ಕರಡಿ ಸಂಗಣ್ಣ ಪತ್ರ ಹಿನ್ನೆಲೆಯಲ್ಲಿ ಕುರುಬ ಸಮುದಾಯ ವಿರೋಧಿಸಿದೆ. ಸಂಗಣ್ಣ ಕುರುಬ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ