AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ; ಇತರೆ ಕ್ರೈಂ ಸುದ್ದಿಗಳು

ಸರಕು ಸಾಗಣೆ ರೂಪದಲ್ಲಿ ಪ್ಯಾಕ್ ಮಾಡಿ, 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಪ್ಯಾಕ್ಡ್​​ ಪಾರ್ಸಲ್ ಅನ್ನು ತಡೆಹಿಡಿದು, ಪರಿಶೀಲಿಸಿದಾಗ ಅಕ್ರಮ ಸಾಗಣೆ ಪತ್ತೆಯಾಗಿದೆ.

ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ; ಇತರೆ ಕ್ರೈಂ ಸುದ್ದಿಗಳು
ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ
TV9 Web
| Edited By: |

Updated on:Jul 30, 2021 | 9:14 AM

Share

ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಪ್ಯಾಕ್​ ಆಗಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ (ಕೆಐಎಬಿ) ಕಾರ್ಗೋ ಟರ್ಮಿನಲ್‌ನಲ್ಲಿ ರಕ್ತ ಚಂದನ ಜಪ್ತಿ ಮಾಡಲಾಗಿದೆ.

ಸರಕು ಸಾಗಣೆ ರೂಪದಲ್ಲಿ ಪ್ಯಾಕ್ ಮಾಡಿ, 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಪ್ಯಾಕ್ಡ್​​ ಪಾರ್ಸಲ್ ಅನ್ನು ತಡೆಹಿಡಿದು, ಪರಿಶೀಲಿಸಿದಾಗ ಅಕ್ರಮ ಸಾಗಣೆ ಪತ್ತೆಯಾಗಿದೆ. ತಕ್ಷಣ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಷ್ಟೂ ರಕ್ತ ಚಂದನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಜಿಮ್ ಮಣಿ ಹತ್ಯೆ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ ಜಿಮ್ ಮಣಿ ಹತ್ಯೆ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಾಗ ಮತ್ತು ಡಬಲ್ ಮೀಟರ್ ಮೋಹನ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. 2020ರ ಜೂನ್‌ನಲ್ಲಿ ಜಿಮ್ ಮಣಿ ಹತ್ಯೆಯಾಗಿತ್ತು. ಪ್ರಕರಣ ಸಂಬಂಧ ಪೊಲೀಸರು 14 ಜನರನ್ನು ಬಂಧಿಸಿದ್ದರು.

FIRನಲ್ಲಿ ನಾಗ ಮತ್ತು ಮೋಹನ್ ಹೆಸರು ಇದ್ದರೂ ಬಂಧಿಸಿರಲಿಲ್ಲ. ಅಂದಿನ ತನಿಖಾಧಿಕಾರಿ ಇಬ್ಬರನ್ನೂ ಅರೆಸ್ಟ್ ಮಾಡದೆ ಬಿಟ್ಟಿದ್ದರು. ಮಾಹಿತಿ ಅನ್ವಯ ಕೇಸ್ ರೀ ಓಪನ್ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ತನಿಖೆಗೆ ಆದೇಶಿಸಿದ್ದರು. ಅನ್ನಪೂರ್ಣೇಶ್ವರಿ ನಗರ ಇನ್ಸ್‌ಪೆಕ್ಟರ್‌ ಲೋಹಿತ್‌ ತನಿಖೆಗೆ ಆದೇಶ ನೀಡಲಾಗಿತ್ತು. ತನಿಖೆ ವೇಳೆ ನಾಗ, ಮೋಹನ್ ಕೈವಾಡ ಇರುವುದು ಪತ್ತೆಯಾಗಿತ್ತು. ಹೀಗಾಗಿ ಇಬ್ಬರನ್ನೂ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಠಾಣೆಯ ಬಳಿ ಹರೀಶ್ ಕೊಲೆ ಪ್ರಕರಣ: ಬಾಣಸವಾಡಿ ಠಾಣೆಯ ಬಳಿ ಹರೀಶ್ ಕೊಲೆ ಪ್ರಕರಣದಲ್ಲಿ ಐವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಕ್ಷಿತ್, ಅವಿನಾಶ್, ಸುಭಾಷ್, ಇಂದ್ರಜಿತ್, ನೆಲ್ಸನ್ ಬೆಂಗಳೂರಿನ ಬಾಣಸವಾಡಿ ಪೊಲೀಸರಿಗೆ ಸೆರೆ ಸಿಕ್ಕವರು.

ಹತ್ಯೆಗೀಡಾದ ಹರೀಶ್ ರಕ್ಷಿತ್‌ಗೆ ಕೊಲೆ ಬೆದರಿಕೆ ಹಾಕಿದ್ದ. ಇದೇ ಕೋಪದಲ್ಲಿ ಗ್ಯಾಂಗ್ ಕಟ್ಟಿಕೊಂಡು ಹರೀಶ್ ಹತ್ಯೆ ನಡೆದಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯಿಂದ ಮನೆಗೆ ಹೋಗುವಾಗ ಹರೀಶ್ ಹತ್ಯೆಗೈದಿದ್ದರು.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

(rupees 6 crore worth red sandalwood confiscated at kempegowda international airport bangalore)

Published On - 9:02 am, Fri, 30 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!