ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on: Jun 30, 2021 | 1:11 PM

ಬೆಂಗಳೂರು: ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಪುನಾರಂಭಿಸುವಂತೆ ಸರ್ಕಾರಕ್ಕೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಶೇ.80 ಬಜೆಟ್ ಶಾಲೆಗಳು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಾಳೆಯಿಂದ ಆನ್​ಲೈನ್ ಮೂಲಕ ತರಗತಿಗಳು ಶುರುವಾಗುತ್ತಿದೆ. ಇದು ಒಳ್ಳೆಯ ವಿಚಾರ. ಆದರೆ ಶಾಲೆ ಆರಂಭದ ಬಗ್ಗೆ ಸರ್ಕಾರ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ರುಪ್ಸಾ ಸಂಘಟನೆ ಬೇಡಿಕೆಗಳೇನು? * 2021-22 ಸಾಲಿನ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉನ್ನತೀಕರಣ ವಿಷಯವು ತುಂಬಾ ನಿಧಾನಗತಿಯಲ್ಲಿ ಅನುಸರಿಸುತ್ತಿದೆ. ಇದರಿಂದ ಆರ್ಟಿಇ ಮಕ್ಕಳ ಮುಂದಿನ ತರಗತಿಗೆ ಅನ್ಯಾಯವಾಗುತ್ತಿದೆ. ಆರ್ಟಿಇ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರುಪ್ಸಾ ಒತ್ತಾಯಿದೆ.

* 2019-20 ಮತ್ತು 2020-21ನೇ ಸಾಲಿನ ಆರ್ಟಿಇ ಹಣ ಇನ್ನು ಬಿಡುಗಡೆ ಆಗಿಲ್ಲ. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ತುಂಬಾ ನೋವನ್ನು ಅನುಭವಿಸುತ್ತಿವೆ. ಹೀಗಾಗಿ ಕೂಡಲೇ ಆರ್ಟಿಇ ಹಣ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೂ ಘೋಷಿಸಿರುವ ಪ್ಯಾಕೇಜ್​ನ ತಕ್ಷಣ ಶಿಕ್ಷಕರಿಗೆ ಮುಟ್ಟಿಸಬೇಕೆಂದು ಒತ್ತಾಯಿಸಿದೆ.

ಈಗಾಗಲೇ ಸಂಘದ ಟೈಟಲ್ ವಿಚಾರವಾಗಿ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ನಕಲಿ ದಾಖಲೆ ಸೃಷ್ಟಿಸಿ ಹಾಲನೂರು ಲೇಪಾಕ್ಷಿ ರುಪ್ಸಾ ಸಂಘಟನೆ ಮಾಡಿದ್ದಾರೆ. ನಾನೇ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಸಂಘಟನೆಯ ಕಾರ್ಯಕಾರಿ ಸಮಿತಿಯಲ್ಲಿ 17 ಜನ ಇದ್ದಾರೆ. 17 ಜನರ ಅಭಿಪ್ರಾಯ ಪಡೆಯದೆ ಲೋಕೇಶ್ ತಾಳಿಕಟ್ಟೆ ಉಚ್ಛಾಟನೆ ಮಾಡಿದ್ದಾರೆ. ಲೇಪಾಕ್ಷಿ ಸ್ವಯಂ ಘೋಷಿತವಾಗಿ ಅಧ್ಯಕ್ಷ ಅಂತ ಹೇಳಿಕೊಂಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ ರುಪ್ಸಾ ಕರ್ನಾಟಕ ಸಂಘಟನೆಯ ಜಂಟಿ ಕಾರ್ಯದರ್ಶಿ ಕೊಟ್ರೇಶ್, ಅವರಲ್ಲಿ ಮೂರನೇ ಒಂದು ಭಾಗದಷ್ಟು ಬಹುಮತ ಇಲ್ಲ. ಲೇಪಾಕ್ಷಿ ಸಂಘದ ಸದಸ್ಯತ್ವವನ್ನೇ ಪಡೆದಿಲ್ಲ. ಹೀಗಾಗಿ ಸಂಘದ ಹೆಸರು ಬಳಕೆಯ ವಿಚಾರ ನ್ಯಾಯಾಲಯದಲ್ಲಿದೆ ಎಂದು ಅಭಿಪ್ರಾಯಟಪಟ್ಟರು.

ಇದನ್ನೂ ಓದಿ

School Reopening: ಶಿಕ್ಷಣದ ಜತೆ ಮಕ್ಕಳ ಜೀವವೂ ಮುಖ್ಯ, ಶಾಲೆ ಆರಂಭಕ್ಕೆ ಆತುರ ಬೇಡ – ಆರೋಗ್ಯ ಸಚಿವ ಡಾ.ಸುಧಾಕರ್

ಟಿವಿ9 ಕಾರ್ಯಾಚರಣೆಯಲ್ಲಿ ಕರ್ಮಕಾಂಡ ಬಯಲು; ಆರೋಗ್ಯ ಸಚಿವರೇ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆ ಕಡೆ ಕಣ್ಣಿಟ್ಟು ನೋಡಿ

(RUPSA organization has urged the government to start school)

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ