ಶಾಲೆ ಆರಂಭ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ.. ಪ್ರತಿಭಟನೆಗೆ ಮುಂದಾದ ರುಪ್ಸಾ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ, ರುಪ್ಸಾ ಜನವರಿ 6ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯಲ್ಲಿ 8 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ.

ಶಾಲೆ ಆರಂಭ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ.. ಪ್ರತಿಭಟನೆಗೆ ಮುಂದಾದ ರುಪ್ಸಾ
ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್​ ತಾಳಿಕೋಟೆ
Follow us
ಆಯೇಷಾ ಬಾನು
|

Updated on: Jan 03, 2021 | 8:24 AM

ಬೆಂಗಳೂರು: ಶಾಲೆ ಆರಂಭ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ, ಶಾಲೆ ಬಂದ್ ಮಾಡಿ ಪ್ರತಿಭಟನೆಗೆ ನಿರ್ಧರಿಸಿದೆ. ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಾಲೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ, ರುಪ್ಸಾ ಜನವರಿ 6ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯಲ್ಲಿ 8 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ. ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಹಲವು ಬೇಡಿಕೆಗಳನಿಟ್ಟು ಪ್ರತಿಭಟನೆ ನಡೆಸಲಿದ್ದಾರೆ.

ರುಪ್ಸಾ ಖಾಸಗಿ ಶಾಲಾ ಒಕ್ಕೂಟ ಸರ್ಕಾರಕ್ಕೆ ಇಟ್ಟಿರುವ ಬೇಡಿಕೆಗಳು 1.ಸಂಕಷ್ಟದಲ್ಲಿರುವ ಶಾಲೆಗಳ ಶಿಕ್ಷಕರಿಗೆ ಪರಿಹಾರ ಘೋಷಣೆ ಮಾಡಬೇಕು 2.ಕನಿಷ್ಠ 1 ಸಾವಿರ ಕೋಟಿ ಪ್ಯಾಕೇಜ್ ಘೋಷಣೆಗೆ ಒತ್ತಾಯ 3.ಸಂಬಳ ಇಲ್ಲದ ಶಿಕ್ಷಕರಿಗೆ ಸರ್ಕಾರ ಪ್ರತಿ ತಿಂಗಳು $10 ಸಾವಿರ ನೀಡಬೇಕು 4.1985ರಿಂದ ಇರುವ ಶಾಲೆಗಳಿಗೆ ಅನುದಾನ ನೀಡಬೇಕು 5. ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು 6. ನ.10ರಂದು ಹೊರಡಿಸಿದ ಸುತ್ತೋಲೆ ಮರುಪರಿಶೀಲಿಸಬೇಕು 7.ಶಾಲೆಗಳ ಮಾನ್ಯತೆ ನವೀಕರಣ ಅದಾಲತ್ ರೂಪದಲ್ಲಿ ಆಗಲಿ 8.ಗಡಿಭಾಗದ ಶಾಲೆಗಳ ಮುಚ್ಚುವ ನಿರ್ಧಾರ ಹಿಂಪಡೆಯಬೇಕು 9.2020-21ನೇ ಸಾಲಿನ RTE ಹಣ ಒಂದೇ ಕಂತಲ್ಲಿ ನೀಡಬೇಕು 10.ಆರ್‌ಟಿಇ ಪುನರ್ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯ ಇಷ್ಟು ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಶಾಲೆ ಒಕ್ಕೂಟ ಪ್ರತಿಭಟನೆಗೆ ಮುಂದಾಗಿದೆ.

ನಾಳೆಯಿಂದ ಆನ್​ಲೈನ್, ಆಫ್​ಲೈನ್ ಕ್ಲಾಸ್​ ಸಂಪೂರ್ಣ ಬಂದ್ -ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್