ಕೊರೊನಾ ಹಿನ್ನೆಲೆ ಪಿಯು ಪರೀಕ್ಷೆಯಲ್ಲಿ ಬದಲಾವಣೆಗೆ ಶಿಕ್ಷಣ ಇಲಾಖೆಗೆ ರೂಪ್ಸಾ ಸಲಹೆ

ಕೊವಿಡ್‌ ಕಾರಣದಿಂದಾಗಿ ಪಾಠಗಳು ನಡೆದಿಲ್ಲ. ಆನ್‌ಲೈನ್ ವ್ಯವಸ್ಥೆಯಲ್ಲಿಯೂ ಸಂಪೂರ್ಣವಾಗಿ ಪಾಠ ನಡೆಸಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳಿಗೆ ನೆಟ್​ವರ್ಕ್​ ಸಮಸ್ಯೆಯಿಂದ ಪಾಠ ಕೇಳಲು ಸಾಧ್ಯವಾಗಿಲ್ಲ ಎಂದು ರೂಪ್ಸಾ ಸಂಸ್ಥೆ ಹೇಳಿದೆ.

ಕೊರೊನಾ ಹಿನ್ನೆಲೆ ಪಿಯು ಪರೀಕ್ಷೆಯಲ್ಲಿ ಬದಲಾವಣೆಗೆ ಶಿಕ್ಷಣ ಇಲಾಖೆಗೆ ರೂಪ್ಸಾ ಸಲಹೆ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: May 30, 2021 | 3:29 PM

ಬೆಂಗಳೂರು: ಕೊರೊನಾ 2ನೇ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ತರಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ (ರೂಪ್ಸಾ) ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ವರದಿಯಲ್ಲಿ ರೂಪ್ಸಾ ಸಂಸ್ಥೆಯು ಸುಮಾರು 250 ಕಾಲೇಜುಗಳ ಅಭಿಪ್ರಾಯಗಳನ್ನು ಉಲ್ಲೇಖಿಸಿದೆ.

ರೂಪ್ಸಾ ಪರವಾಗಿ ಸಂಸ್ಥೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಿದರು. ಕೊವಿಡ್‌ ಕಾರಣದಿಂದಾಗಿ ಪಾಠಗಳು ನಡೆದಿಲ್ಲ. ಆನ್‌ಲೈನ್ ವ್ಯವಸ್ಥೆಯಲ್ಲಿಯೂ ಸಂಪೂರ್ಣವಾಗಿ ಪಾಠ ನಡೆಸಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳಿಗೆ ನೆಟ್​ವರ್ಕ್​ ಸಮಸ್ಯೆಯಿಂದ ಪಾಠ ಕೇಳಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.

ಪಿಯುಸಿ ಮಂಡಳಿಯು ಈ ವಿಚಾರವನ್ನು ಗಮನದಲ್ಲಿರಿಸಿಕೊಂಡು ಪ್ರಶ್ನೆಪತ್ರಿಕೆ ಸಿದ್ಧಪಡಿಸಬೇಕು. 1 ವಿಷಯಕ್ಕೆ 4 ಮಾದರಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಬೇಕು. ಪರೀಕ್ಷೆಯ ಅರ್ಧ ಗಂಟೆ ಮೊದಲು ಪ್ರಶ್ನೆ ಪತ್ರಿಕೆ ಮುದ್ರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸುವ ವ್ಯವಸ್ಥೆಯಿರಲಿ. ಸರಳೀಕೃತ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಬೇಕು, ಕಠಿಣ ಪ್ರಶ್ನೆ ಬೇಡ ಎಂದು ರೂಪ್ಸಾ ಸಲಹೆ ಮಾಡಿದೆ.

ಪರೀಕ್ಷೆಯ ಅವಧಿಯನ್ನು ಈಗ ಇರುವ 3 ಗಂಟೆಯಿಂದ 1.30 ಗಂಟೆಗೆ ಇಳಿಸಬೇಕು. ಕಾಲೇಜುಗಳಲ್ಲೇ ಪ್ರಾಯೋಗಿಕ ಪರೀಕ್ಷೆ ನಡೆಸಲು ಅನುಮತಿ ಸಿಗಬೇಕು. ಈವರೆಗಿದ್ದ ಕ್ಲಸ್ಟರ್ ಪದ್ಧತಿಯ ಪರೀಕ್ಷಾ ಕೇಂದ್ರ ಕೈಬಿಟ್ಟು, ಎಲ್ಲ ಪಿಯು ಕಾಲೇಜುಗಳನ್ನು ಪರೀಕ್ಷಾ ಕೇಂದ್ರವನ್ನಾಗಿಸಬೇಕು ಎಂದು ಹೇಳಿದೆ.

ನಗರ ಪ್ರದೇಶದಿಂದ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಸ್ಥಳೀಯ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೊವಿಡ್ ಹಿನ್ನೆಲೆ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕು ಎಂದು ರೂಪ್ಸಾ ಸಲಹೆ ಮಾಡಿದೆ.

ಜುಲೈನಲ್ಲಿ ಪಿಯು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ದ್ವಿತೀಯ ಪಿಯು ಪರೀಕ್ಷೆ ಮತ್ತು ಸಿಇಟಿ ನಡೆಸುವ ಬಗ್ಗೆ ಕರ್ನಾಟಕದ ಅಭಿಪ್ರಾಯ ಕೇಳಿದ್ದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯಗಳನ್ನು ತಿಳಿಸಿದೆ. ರಾಜ್ಯದಲ್ಲಿ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮೇ 23ರಂದು ಕೇಂದ್ರ ಶಿಕ್ಷಣ ಮಂತ್ರಿ ರಮೇಶ್ ಫೋಖ್ರಿಯಾಲ್ ನಿಶಾಂಕ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಕೈಗೊಂಡಿದ್ದ ಸಭೆಯಲ್ಲಿ ರಾಜ್ಯದ ಶಿಕ್ಷಣ ಮಂತ್ರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

(rupsa suggests some changes in PUC exam system in the backdrop of coronavirus 2nd wave)

ಇದನ್ನೂ ಓದಿ: Tv9 Digital Live: ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯಲೇಬೇಕು, ಆದರೆ ಸರ್ಕಾರ ಬೇಗ ನಿರ್ಧಾರ ಪ್ರಕಟಿಸಲಿ ಎನ್ನುತ್ತಾರೆ ತಜ್ಞರು

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ಎಸ್ಎಸ್ಎಲ್​ಸಿ, ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ; ಸಚಿವ ಸುರೇಶ್ ಕುಮಾರ್

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ