AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕದ ಅಂಗೀಕಾರದೊಂದಿಗೆ, ಗ್ರಾಮೀಣ ಭಾಗದಲ್ಲಿ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಗ್ರಾಮಠಾಣಾ ವ್ಯಾಪ್ತಿಯ ಮನೆ, ನಿವೇಶನಗಳ ಸಕ್ರಮೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ
ಗ್ರಾಮೀಣ ಭಾಗದ ಜನರಿಗೆ ಗುಡ್​ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 14, 2025 | 9:32 PM

Share

ಬೆಂಗಳೂರು, ಮಾರ್ಚ್​​ 14: ಇ-ಖಾತಾ (E-khata) ನಿರೀಕ್ಷೆಯಲ್ಲಿ ಇದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತೆ ನೀಡಲು ಸಂಪುಟ (cabinet) ಒಪ್ಪಿಗೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.

ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನೂ ಮುಗಿಯದ ಇ ಖಾತಾ ಸಂಕಷ್ಟ: ಗೊಂದಲ ಬಗೆಹರಿಸಲು ಬಿಬಿಎಂಪಿ ಸರ್ಕಸ್

ಇದನ್ನೂ ಓದಿ
Image
ಇನ್ನೂ ಮುಗಿಯದ ಇ ಖಾತಾ ಸಂಕಷ್ಟ: ಗೊಂದಲ ಬಗೆಹರಿಸಲು ಬಿಬಿಎಂಪಿ ಸರ್ಕಸ್

ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿತ್ತು. ಈಗಾಗಲೇ ಇ ಖಾತಾ ಕುರಿತು ಸೃಷ್ಟಿಯಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಿತ್ತು. ಇತ್ತೀಚೆಗೆ ವಿಕಾಸಸೌಧದಲ್ಲಿ ಮೂವರು ಸಚಿವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕಂದಾಯ ಇಲಾಖೆ, ನಗರಾಭೀವೃದ್ಧಿ ಇಲಾಖೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಗಳ ಅಧಿಕಾರಿಗಳು ಒಳಗೊಂಡ ಕಾರ್ಯಪಡೆ ರಚನೆ ಸೂಚನೆ ನೀಡಲಾಗಿತ್ತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ, ಪೌರಾಳಿಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಇ ಖಾತಾ ಸರ್ವರ್ ಕ್ರ್ಯಾಶ್

ಬೆಂಗಳೂರಿನ ನಾಗಸಂದ್ರ ಬಳಿಯ ದೊಡ್ಡ ಅಪಾರ್ಟ್‌ಮೆಂಟ್​ ಒಂದರಲ್ಲಿ ಇತ್ತೀಚೆಗೆ ನಡೆದಿದ್ದ ಶಿಬಿರದಲ್ಲಿ ಕನಿಷ್ಠ 200 ಆಸ್ತಿ ಮಾಲೀಕರಿಗೆ ಬಿಬಿಎಂಪಿಯ ಇ-ಖಾತಾ ಸಾಫ್ಟ್‌ವೇರ್‌ಗೆ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಸಹಾಯ ಮಾಡಿತು. ಆದರೆ ಒಂದು ವಾರದ ಕಾಲ ಸರ್ವರ್ ಕ್ರ್ಯಾಶ್​ವಾಗಿದ್ದರಿಂದ ಶಿಬಿರದ ಯಶಸ್ಸು ವ್ಯರ್ಥವಾಗಿತ್ತು.

ಇದನ್ನೂ ಓದಿ: ಬಿ ಖಾತಾವನ್ನು ಎ ಖಾತಾಗೆ ವರ್ಗಾಯಿಸಲು ಏನು ಮಾಡಬೇಕು?

ಈ ಕ್ರ್ಯಾಶ್‌ನಿಂದಾಗಿ ದತ್ತಾಂಶ ನಷ್ಟವಾಗಿದ್ದು, ಬಿಬಿಎಂಪಿ ಅಧಿಕಾರಿಗಳು ಪೀಡಿತ ದಾಖಲೆಗಳನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಫೆಬ್ರವರಿ ಅಂತ್ಯದಲ್ಲಿ, ಬಿಬಿಎಂಪಿ ಇ-ಖಾತಾ ಸಾಫ್ಟ್‌ವೇರ್‌ನಲ್ಲಿ ತನ್ನ ಮೊದಲ ತಾಂತ್ರಿಕ ವೈಫಲ್ಯವನ್ನು ಅನುಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ