ಶಬರಿಮಲೆ ಯಾತ್ರೆ ಆರಂಭದಲ್ಲೇ ಮತ್ತೆ ಮುನ್ನೆಲೆಗೆ ಬಂದ ವಾವರ್ ಮಸೀದಿ ವಿವಾದ

ವಾವರ್ ಒಬ್ಬ ಬಾಬರ್ ಆಗಿದ್ದ, ಈತ ಮುಸ್ಲಿಂ, ಈತ ಅಯ್ಯಪ್ಪನ ಸ್ನೇಹಿತ ಎಂದು ಬಿಂಬಿಸಿ ಮಸೀದಿ ನಿರ್ಮಾಣ ಮಾಡಿ ಕೋಟಿ ಕೋಟಿ ಹಣ ಮಸೀದಿಗೆ ಸುರಿಯುವುದು ಅಯ್ಯಪ್ಪನಿಗೆ ಮಾಡಿದ ಅಪಮಾನ ಎಂದು ಹಿಂದೂ ಸಂಘಟನೆಗಳು ಹೇಳಿವೆ.

ಶಬರಿಮಲೆ ಯಾತ್ರೆ ಆರಂಭದಲ್ಲೇ ಮತ್ತೆ ಮುನ್ನೆಲೆಗೆ ಬಂದ ವಾವರ್ ಮಸೀದಿ ವಿವಾದ
ಶಬರಿಮಲೆಯ ಯಾತ್ರೆ ಆರಂಭದಲ್ಲೇ ಮತ್ತೆ ವಾವರ್ ಮಸೀದಿ ಮುನ್ನೆಲೆಗೆ
Follow us
TV9 Web
| Updated By: Rakesh Nayak Manchi

Updated on:Nov 26, 2022 | 9:52 PM

ಬೆಂಗಳೂರು: ಶಬರಿಮಲೆಯ ಯಾತ್ರೆ ಆರಂಭದಲ್ಲೇ ವಾವರ್ ಮಸೀದಿ ವಿವಾದ (Vavar Mosque Controversy) ಮತ್ತೆ ಮುನ್ನೆಲೆಗೆ ಬಂದಿದ್ದು, ವಾವರ್ ಮಸೀದಿಗೆ ಹಿಂದೂಗಳು ಹೋಗದಂತೆ ಹಿಂದೂ ಜನ ಜಾಗೃತಿ ಸಮಿತಿ ಮನವಿ ಮಾಡಿದೆ. ಈಗಾಗಲೇ ಶಬರಿಮಲೆ ವ್ರತ ಆರಂಭವಾಗಿದೆ. ನಾವು ಶಬರಿಮಲೆಗೆ ಹೋಗುವಾಗ ಘೋರ ತಪ್ಪನ್ನು ಮಾಡುತ್ತಿದ್ದೇವೆ. ಅಲ್ಲಿನ ವಾವರ್ ಮಸೀದಿಗೆ ಹೋಗುವಂತ ಕೆಟ್ಟ ಸಂಪ್ರದಾಯ ಇತ್ತೀಚೆಗೆ ಶುರುವಾಗಿದೆ. ವಾವರ್ ಒಬ್ಬ ಬಾಬರ್ ಆಗಿದ್ದ, ಒಬ್ಬ ಮುಸ್ಲಿಂ ಆಗಿದ್ದ. ಒಬ್ಬ ಕಳ್ಳನನ್ನು, ದರೋಡೆಕೊರನನ್ನು ಅಯ್ಯಪ್ಪ ಸ್ವಾಮಿಯ ಸ್ನೇಹಿತ ಎಂದು ಬಿಂಬಿಸಿ ಅವನ ಘೋರಿಯನ್ನು ಮಸೀದಿಯನ್ನಾಗಿ ಮಾಡಿ ಹಿಂದೂಗಳು ಕೋಟಿಗಟ್ಟಲೇ ಹಣವನ್ನು ಆ ಮಸೀದಿ ಸುರಿಯುವಂತದ್ದು ಹಿಂದೂ ಧರ್ಮಕ್ಕೆ, ಶಬರಿಮಲೆಯ ಅಯ್ಯಪ್ಪನಿಗೆ ಮಾಡಿದ ಅಪಮಾನವಾಗಿದೆ ಎಂದು ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಂಚಾಲಕ ಮೋಹನ್ ಗೌಡ ಹೇಳಿದ್ದಾರೆ.

ಹಿಂದೂಗಳ ಮೂರ್ತಿ ಪೂಜೆಯನ್ನು ಒಪ್ಪದ ಒಬ್ಬ ಮುಸ್ಲಿಂ ವಾವರ್ ಹೇಗೆ ಅಯ್ಯಪ್ಪ ಸ್ವಾಮಿ ಭಕ್ತ ಆಗಲು ಸಾಧ್ಯವಿದೆ? ಇಸ್ಲಾಂ ಧರ್ಮ ಹುಟ್ಟಿದ್ದು ಯಾವಾಗ? ಲಕ್ಷ ಲಕ್ಷ ವರ್ಷಗಳ ಹಿಂದೆ ಅಯ್ಯಪ್ಪ ಸ್ವಾಮಿಯ ಜನನ ಆಗಿದೆ. ಹೀಗಿದ್ದಾಗ ಅಯ್ಯಪ್ಪ ಸ್ವಾಮಿ ಮತ್ತು ವಾವರ್​ಗೆ ಹೇಗೆ ಸಂಬಂಧ ಎಂದು ಮಹೋನ್ ಗೌಡ ಪ್ರಶ್ನಿಸಿದರು.

ಇದನ್ನೂ ಓದಿ: House For Rent: ಬೆಂಗಳೂರಲ್ಲಿ ಬಾಡಿಗೆಗೆ ಮನೆ ಬೇಕೆ? ನೀವು ಐಐಟಿ, ಐಐಎಂನಲ್ಲಿ ಓದಿರಬೇಕು!

ಇವತ್ತು ಅಯ್ಯಪ್ಪ ಸ್ವಾಮಿಯ ಭಕ್ತರು ಆ ಮಸೀದಿಗೆ ಹಾಕುವಂತಹ ಹಣ ಯಾವ ರೀತಿ ವಿನಿಯೋಗ ಆಗುತ್ತಿದೆ ಎಂದು ಯಾರಿಗೂ ಗೊತ್ತಿಲ್ಲ. ಅಯ್ಯಪ್ಪ ಸ್ವಾಮಿಯ ಭಕ್ತಾಧಿಗಳಲ್ಲಿ ಕಳಕಳಿಯ ವಿನಂತಿ ಇದೆ, ಯಾವುದೇ ಕಾರಣಕ್ಕೂ ಹಿಂದೂಗಳು ವಾವರ್ ಮಸೀದಿಗೆ ಹೋಗಬಾರದು, ಕಾಣಿಕೆಯನ್ನು ಹಾಕಬಾರದು. ಯಾವುದಾದರೂ ಒಬ್ಬ ಮುಸಲ್ಮಾನ ಅಯ್ಯಪ್ಪ ಸ್ವಾಮಿ ಪ್ರಸಾದ ಸ್ವೀಕಾರ ಮಾಡುತ್ತಾರೆಯೇ? ಇಲ್ಲ. ಹೀಗಿರುವಾಗ ಹಿಂದೂ ಅಯ್ಯಪ್ಪ ಭಕ್ತಾಧಿಗಳು ವಾವರ್ ಮಸೀದಿಗೆ ಹೋಗಿ ಯಾಕೆ ಪ್ರಾರ್ಥನೆ ಮಾಡಬೇಕು, ಯಾಕೆ ಕಾಣಿಕೆ ಹಾಕಬೇಕು? ನಾವು ಶಬರಿಮಲೆಗೆ ಹೋಗಿ ಅಯ್ಯಪ್ಪ ಸ್ವಾಮಿ ದರ್ಶನ ಮಾತ್ರ ಪಡೆಯಬೇಕು. ವಾವರ್ ದರ್ಶನ ಪಡೆಯಬಾರದು ಎಂದು ಮನವಿ ಮಾಡುತ್ತಿದ್ದೇವೆ ಎಂದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 pm, Sat, 26 November 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?