AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: 6 ತಿಂಗಳು ಬೆಂಗಳೂರು-ಮಂಗಳೂರಿನ ಕೆಲ ರೈಲುಗಳು ರದ್ದು

ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ನಡೆಯಲಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿಯಿಂದಾಗಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗ ಕಾಮಗಾರಿ: 6 ತಿಂಗಳು ಬೆಂಗಳೂರು-ಮಂಗಳೂರಿನ ಕೆಲ ರೈಲುಗಳು ರದ್ದು
Bengaluru Mangaluru Trains
ಗಂಗಾಧರ​ ಬ. ಸಾಬೋಜಿ
|

Updated on:May 17, 2025 | 8:51 AM

Share

ಬೆಂಗಳೂರು, ಮೇ 17: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ (Sakleshpur-Subrahmanya Road) ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ (South Western Railway) ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ ರೈಲುಗಳನ್ನು ರದ್ದುಪಡಿಸಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಲವು ರೈಲುಗಳ ಸಂಚಾರ ರದ್ದು

  • ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ನೈರುತ್ಯ ರೈಲ್ವೆ ಟ್ವೀಟ್​​

  • ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ.
  • ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.

ಇದನ್ನೂ ಓದಿ: ಬೆಂಗಳೂರಿನ ಹೆಬ್ಬಾಳ ಫ್ಲೈಓವರ್​​ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆ ಬಂದ್: ಪರ್ಯಾಯ ಮಾರ್ಗಗಳು ಹೀಗಿವೆ

  • ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 am, Sat, 17 May 25