ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ: ಅರಣ್ಯ ಇಲಾಖೆ ಮಹತ್ವದ ಆದೇಶ

ದೇವಸ್ಥಾನ, ಮಠ ಮಂದಿರಗಳ ಸಮೀಪದ ನದಿಗಳಲ್ಲಿ ಭಕ್ತರು ಶಾಂಪು, ಸೋಪು ಬಳಸಿ ಸ್ನಾನ ಮಾಡುವುದು ಹಾಗೂ ಬೇಡದ ವಸ್ತುಗಳನ್ನು ಎಸೆಯುವುದರಿಂದ ಉಂಟಾಗುತ್ತಿರುವ ಮಾಲಿನ್ಯ ಹಾಗೂ ಇದರಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಹೊಸ ಆದೇಶ ಹೊರಡಿಸಲಾಗಿದ್ದು, ವಿವರಗಳು ಇಲ್ಲಿವೆ.

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ: ಅರಣ್ಯ ಇಲಾಖೆ ಮಹತ್ವದ ಆದೇಶ
ಸಾಂದರ್ಭಿಕ ಚಿತ್ರ
Image Credit source: Flickr
Edited By:

Updated on: Mar 10, 2025 | 11:20 AM

ಬೆಂಗಳೂರು,ಮಾರ್ಚ್ 10: ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ (Shampoo and Soap sale) ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ (Karnataka Forest Department) ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ನದಿ ದಡಗಳಲ್ಲಿ‌ ಸೋಪು, ಶಾಂಪು‌ ಮಾರಾಟ ಹಾಗೂ ಬಳಕೆ ಮಾಡದಂತೆ ಆದೇಶಿಸಲಾಗಿದೆ.

ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಈ ಆದೇಶ ಹೊರಡಿಸಿದ್ದಾರೆ.

ಅರಣ್ಯ ಇಲಾಖೆ ಆದೇಶದಲ್ಲೇನಿದೆ?

‘ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ನೋಪು ಬಳಸಿ ಸ್ನಾನ ಮಾಡಿ, ಉಳಿದ ಸೋಪಿನ ತುಂಡು ಮತ್ತು ಶ್ಯಾಂಪು ಪ್ಯಾಕೇಟ್​ಗಳನ್ನು ಅಲ್ಲಿಯೇ ಬಿಟ್ಟು ಹೋಗುತ್ತಿರುವುದರಿಂದ ಇದೆಲ್ಲವೂ ನದಿ, ಕೊಳ, ಸರೋವರ ಸೇರಿ ನದಿಯ ನೀರಿನಲ್ಲೂ ನೊರೆ ಉಕ್ಕುತ್ತಿರುವುದು. ನೀರು ಕಲುಷಿತವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
ತಮ್ಮಟೆ ಬಾರಿಸುತ್ತ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಜನ
ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್
ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ
ದೊಡ್ಡಬಳ್ಳಾಪುರ: ಚಿಕ್ಕ ಮದುರೆ ಶನಿಮಹಾತ್ಮ ಬ್ರಹ್ಮರಥೋತ್ಸವ, ಫೋಟೋಸ್​ ನೋಡಿ

ಮುಂದುವರಿದು, ‘ನದಿಗಳ ನೀರಿನ ಶುದ್ಧತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಇತ್ಯಾದಿ ಮಾರಾಟ ಮಾಡದಂತೆ ಹಾಗೂ ನದಿ, ಕಲ್ಯಾಣಿ, ಸರೋರಗಳಲ್ಲಿ ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜನೆ ಮಾಡದಂತೆ ನಿರ್ಬಂಧಿಸಲು ಸೂಕ್ತ ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದೇಶದ ಪ್ರತಿ

ಇದನ್ನೂ ಓದಿ: ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ: ಪ್ರವಾಸಿಗರ ಸಂಖ್ಯೆ ಭಾರಿ ಇಳಿಕೆ

ಕರ್ನಾಟಕದಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಂತ ಅನೇಕ ಕ್ಷೇತ್ರಗಳಿಗೆ ಭಕ್ತರು ಪುಣ್ಯಸ್ನಾನ ಮಾಡಲು ಬರುತ್ತಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ, ಧರ್ಮಸ್ಥಳದ ನೇತ್ರಾವತಿ ಸೇರಿ ರಾಜ್ಯದ ಅನೇಕ ದೇಗುಲ, ಪುಣ್ಯ ಕ್ಷೇತ್ರಗಳ ನದಿಗಳಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಸೋಪು, ಶಾಂಪು ಬಳಕೆಯಿಂದ ಪರಿಸರಕ್ಕೆ ಹಾನಿಯಾಗಬಾರದು ಎಂಬ ಕಾರಣ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Mon, 10 March 25