AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

DK Shivakumar: ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ.

ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್
ಸಲೀಂ ಹಾಗೂ ಉಗ್ರಪ್ಪ, ಡಿಕೆ ಶಿವಕುಮಾರ್
TV9 Web
| Edited By: |

Updated on:Oct 13, 2021 | 12:40 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟಿವಿ 9 ಗೆ ತಿಳಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್​ ಮುಖಂಡರಾದ ಸಲೀಂ ಮತ್ತು ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನೂ ಪಕ್ಷದಿಂದ ವಜಾಗೊಳಿಸಬೇಕೆಂದು ಡಿಕೆ ಶಿವಕುಮಾರ್​ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಎನ್ನುವ ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ. ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕೆಣಕಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂ; ಮೌನವಾಗಿ ಆಲಿಸಿರುವ ಉಗ್ರಪ್ಪ – ಟ್ವೀಟ್​ ಮಾಡಿ ಕೆಣಕಿದ ಬಿಜೆಪಿ!

KPCC Saleem Whispers DK Shivakumar’s Scam To VS Ugrappa | ಡಿಕೆಶಿ ಬಗ್ಗೆ ಗುಸು ಗುಸು

Published On - 12:30 pm, Wed, 13 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ