ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್ನಲ್ಲಿ ಪ್ರಕರಣದ A6 ಆರೋಪಿ ಆದಿತ್ಯ ಆಳ್ವಾ ಜೈಲುಪಾಲಾಗಿದ್ದಾನೆ. ಆರೋಪಿ ಆಳ್ವಾನನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಹೀಗಾಗಿ, ಮಾಜಿ ಸಚಿವ ದಿ.ಜೀವರಾಜ್ ಆಳ್ವಾರ ಪುತ್ರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ಆರೋಪಿಯ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಆದಿತ್ಯನನ್ನು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಸದ್ಯ, ಅನಾರೋಗ್ಯದಿಂದ ಬಳಲುತ್ತಿರುವ ಆರೋಪಿ ಆದಿತ್ಯ ಆಳ್ವಾಗೆ ಜೈಲಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕೋರ್ಟ್ ಆದೇಶ ಹೊರಡಿಸಿದೆ.
ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!
Published On - 6:47 pm, Mon, 18 January 21