ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಬಿಡುಗಡೆ
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಡೀಲ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಬೆನ್ನಲ್ಲೇ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಈ ಮೂಲಕ 3 ತಿಂಗಳ ಬಳಿಕ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.
ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಿ ಎಂದು ಸಂಜನಾ ಪರ ವಕೀಲರು ವೈದ್ಯರ ಪ್ರಮಾಣ ಪತ್ರದ ಜೊತೆಗೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿ ಅದನ್ನು ಅದನ್ನು ಅಂಗೀಕರಿಸಿದ ನ್ಯಾಯಧೀಶರು ಅನಾರೋಗ್ಯ ಕಾರಣಕ್ಕಾಗಿ ನಟಿ ಸಂಜನಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಡೀಲ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ಆದರೆ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಜನಾ ಸ್ಪಷ್ಟನೆ ನೀಡಿದ್ದರು. ಆದರೆ, ಪೊಲೀಸರು ಇವರನ್ನು ಕೂಡ ಬಂಧಿಸಿ ಕರೆದೊಯ್ದಿದ್ದರು.
ಮಾಧ್ಯಮಗಳಿಗಿಲ್ಲ ಪ್ರತಿಕ್ರಿಯೆ: ನಟಿ ಸಂಜನಾ ಗಲ್ರಾನಿ ಹೆಸರು ಡ್ರಗ್ ಕೇಸ್ನಲ್ಲಿ ತಳುಕು ಹಾಕಿಕೊಂಡ ಬೆನ್ನಲ್ಲೇ ಮಾಧ್ಯಮಗಳ ವಿರುದ್ಧ ಅವರು ಹರಿಹಾಯ್ದಿದ್ದರು. ಈಗ ಅವರು ಜೈಲಿನಿಂದ ಹೊರ ಬಂದ ಕೂಡಲೇ ಮಾಧ್ಯಮದವರಿಗೆ ಯಾವುದೆ ಪ್ರತಿಕ್ರಿಯೆ ನೀಡದೇ ಹೊರ ನಡೆದಿದ್ದಾರೆ.
Published On - 9:41 pm, Fri, 11 December 20