ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ನ ಸಂಬಂಧ ನಾಪತ್ತೆಯಾಗಿದ್ದ ಎ6 ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು ಚೆನ್ನೈನಲ್ಲಿ ನಿನ್ನೆ ರಾತ್ರಿ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾನನ್ನು ಅರೆಸ್ಟ್ ಮಾಡಿದ್ದು ಸದ್ಯ ಈಗ ಬೆಂಗಳೂರಿಗೆ ಕರೆತಂದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಆದಿತ್ಯ ಆಳ್ವಾನ ವಿಚಾರಣೆ ನಡೆಯುತ್ತಿದೆ. ಮುಂಬೈ ಸೇರಿದಂತೆ ಹಲವೆಡೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವಾ, ಕಳೆದ 15 ದಿನಗಳಿಂದ ಚೆನ್ನೈ ಹೊರವಲಯದ ರೆಸಾರ್ಟ್ನಲ್ಲಿ ಬಚ್ಚಿಟ್ಟಿಕೊಂಡಿದ್ದ. ಸದ್ಯ CCB ಪೊಲೀಸರು ಕಾರ್ಯಾಚರಣೆ ನಡೆಸಿ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡ್ರಗ್ಸ್ ಪ್ರಕರಣದ ತನಿಖೆ ಆರಂಭವಾಗುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದ. 2020ರ ಸೆಪ್ಟೆಂಬರ್‌ನಲ್ಲಿ ಆದಿತ್ಯ ರೆಸಾರ್ಟ್ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ರೆಸಾರ್ಟ್ನಲ್ಲಿ ಗಾಂಜಾ, ಮಾತ್ರೆಗಳು ಪತ್ತೆಯಾಗಿದ್ದವು. ಪೊಲೀಸ್ ದಾಳಿಗೂ ಮೊದಲೇ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು ಕೊನೆಗೂ ಈಗ ಅರೆಸ್ಟ್ ಆಗಿದ್ದಾನೆ.
Published On - 7:01 am, Tue, 12 January 21