ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್

ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್
ಆದಿತ್ಯ ಆಳ್ವಾ
ಆಯೇಷಾ ಬಾನು

Updated on: Jan 12, 2021 | 7:11 AM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ನ ಸಂಬಂಧ ನಾಪತ್ತೆಯಾಗಿದ್ದ ಎ6 ಆದಿತ್ಯ ಆಳ್ವಾನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು ಚೆನ್ನೈನಲ್ಲಿ ನಿನ್ನೆ ರಾತ್ರಿ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾನನ್ನು ಅರೆಸ್ಟ್ ಮಾಡಿದ್ದು ಸದ್ಯ ಈಗ ಬೆಂಗಳೂರಿಗೆ ಕರೆತಂದಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಆದಿತ್ಯ ಆಳ್ವಾನ ವಿಚಾರಣೆ ನಡೆಯುತ್ತಿದೆ. ಮುಂಬೈ ಸೇರಿದಂತೆ ಹಲವೆಡೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವಾ, ಕಳೆದ 15 ದಿನಗಳಿಂದ ಚೆನ್ನೈ ಹೊರವಲಯದ ರೆಸಾರ್ಟ್​ನಲ್ಲಿ ಬಚ್ಚಿಟ್ಟಿಕೊಂಡಿದ್ದ. ಸದ್ಯ CCB ಪೊಲೀಸರು ಕಾರ್ಯಾಚರಣೆ ನಡೆಸಿ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡ್ರಗ್ಸ್ ಪ್ರಕರಣದ ತನಿಖೆ ಆರಂಭವಾಗುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದ. 2020ರ ಸೆಪ್ಟೆಂಬರ್‌ನಲ್ಲಿ ಆದಿತ್ಯ ರೆಸಾರ್ಟ್ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ರೆಸಾರ್ಟ್​ನಲ್ಲಿ ಗಾಂಜಾ, ಮಾತ್ರೆಗಳು ಪತ್ತೆಯಾಗಿದ್ದವು. ಪೊಲೀಸ್ ದಾಳಿಗೂ ಮೊದಲೇ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು ಕೊನೆಗೂ ಈಗ ಅರೆಸ್ಟ್ ಆಗಿದ್ದಾನೆ.

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್

Published On - 7:01 am, Tue, 12 January 21

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us